ಕೊವಿಡ್-19 ಸ್ಫೋಟ: ಎಲ್ಲ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ, ನವೆಂಬರ್.24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣ ಮತ್ತು ಕಡಿವಾಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಎಂಟು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ಕರೆದಿದ್ದಾರೆ.

ಬೆಳಗ್ಗೆ 10.30ರ ವೇಳೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಹಾಗೂ ಮುಖ್ಯಮಂತ್ರಿಗಳು ಹಾಜರಾಗಲಿದ್ದಾರೆ. ರಾಜ್ಯದಲ್ಲಿನ ಕೊರೊನಾವೈರಸ್ ಪರಿಸ್ಥಿತಿ, ಹೊಸ ಪ್ರಕರಣಗಳ ಹೆಚ್ಚಳಕ್ಕೆ ಕಾರಣ, ಕೊವಿಡ್-19 ಹೊಸ ಅಲೆ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಕೊರೊನಾವೈರಸ್ ಲಸಿಕೆ ವಿತರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಮಂಗಳವಾರದ ಸಭೆಯಲ್ಲಿ ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

PM Modi Reviews COVID-19 Situation Meeting With CMs Of 8 States At 10:30 AM On Tuesday


ಕೊವಿಡ್-19 ಹೆಚ್ಚಾಗಿರುವ ರಾಜ್ಯಗಳ ಸಿಎಂ ಜತೆ ಸಭೆ:

ಮೊದಲ ಹಂತದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿನ ಪ್ರಕರಣಗಳನ್ನು ಹೊಂದಿರುವ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲನಾ ಸಭೆ ನಡೆಸಲಿದ್ದಾರೆ. ಎರಡನೇ ಹಂತದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೂ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕೆ ನೀಡುವಲ್ಲಿ ಯಾರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವುದು ಸೂಕ್ತ ಎನ್ನುವ ಬಗ್ಗೆ ಚರ್ಚಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+