• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರಧಾನಿ ನರೇಂದ್ರ ಮೋದಿ ಸಲಹೆಗಾರರಾಗಿದ್ದ ಅಮರ್‌ಜೀತ್ ಸಿನ್ಹಾ ರಾಜೀನಾಮೆ

|
Google Oneindia Kannada News

ನವದೆಹಲಿ, ಆಗಸ್ಟ್ 02: ಪ್ರಧಾನಿ ನರೇಂದ್ರ ಮೋದಿ ಸಲಹೆಗಾರರಾಗಿದ್ದ ಅಮರ್‌ಜೀತ್ ಸಿನ್ಹಾ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಾಲಯ(ಪಿಎಂಒ)ದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಹಿರಿಯ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ರಾಜೀನಾಮೆಪ್ರಧಾನಿ ನರೇಂದ್ರ ಮೋದಿ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ರಾಜೀನಾಮೆ

ಬಿಹಾರ ಕೇಡರ್‌ ನ ಅಮರ್‌ಜೀತ್ ಸಿನ್ಹಾ 1983ರ ತಂಡದ ಐಎಎಸ್ ಅಧಿಕಾರಿ. 2019ರಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯಾಗಿ ನಿವೃತ್ತಿಗೊಂಡ ನಂತರ 2020ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ಪ್ರಧಾನಿ ಕಾರ್ಯಾಲಯದ ಸಲಹೆಗಾರರಾಗಿ ನೇಮಕಗೊಂಡಿದ್ದರು.

ಪಿಎಂಒ ದಲ್ಲಿ ಸಾಮಾಜಿಕ ಸಂಬಂಧ ವ್ಯವಹಾರಗಳ ನೋಡಿಕೊಳ್ಳುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಅಮರ್‌ಜೀತ್ ಸಿನ್ಹಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಇನ್ನೂ ಏಳು ತಿಂಗಳು ಅಧಿಕಾರವಧಿ ಇರುವಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ಮಾಡುವುದು ಗಮನಾರ್ಹ. ಈ ಮೊದಲು ಪ್ರಧಾನಿ ಕಾರ್ಯಾಲಯದ ಪ್ರಧಾನ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಂಪುಟ ಕಾರ್ಯದರ್ಶಿ ಪಿ.ಕೆ.ಸಿನ್ಹಾ ರಾಜೀನಾಮೆ ನೀಡಿದ ಕೆಲವು ತಿಂಗಳಲ್ಲಿ ಅಮರ್‌ ಜಿತ್‌ ಸಿನ್ಹಾ ಹುದ್ದೆಗೆ ರಾಜೀನಾಮೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮರ್‌ ಜಿತ್‌ ಸಿನ್ಹಾ ತಮ್ಮ ರಾಜಿನಾಮೆಗೆ ಯಾವುದೇ ಕಾರಣ ನೀಡಿಲ್ಲ ಎಂದು ವರದಿಯಾಗಿದೆ.

ರಾಜೀನಾಮೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಆದರೆ ರಾಜೀನಾಮೆ ನೀಡಿರುವ‌ ವಿಷಯವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ ಸಿನ್ಹಾ ಅವರು ರಾಜಿನಾಮೆ ನೀಡಿದ್ದರು.ಅದಾದ ಬಳಿಕ ಮತ್ತೊಬ್ಬ ಹಿರಿಯ ಅಧಿಕಾರಿ ರಾಜಿನಾಮೆ ನೀಡಿದ್ದಾರೆ.
ಶಿಕ್ಷಣ, ಪಂಚಾಯತ್ ರಾಜ್, ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಅಮರ್ ಜಿತ್ ಮತ್ತು , ಭಾಸ್ಕರ್ ಕುಬಾಲೆ ಅವರನ್ನು ಪ್ರಧಾನಿ ಅವರ ಸಲಹೆಗಾರಾಗಿ ನೇಮಕ ಮಾಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕೆಲಸ ಮಾಡುತ್ತಿದ್ದ ಹಿರಿಯ ಐಎಎಸ್ ಅಧಿಕಾರಿಗಳು ಒಬ್ಬರ ಹಿಂದೆ ಒಬ್ಬರು ರಾಜೀನಾಮೆ ನೀಡುತ್ತಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳ ರಾಜೀನಾಮೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪ್ರಧಾನಿ ನರೇಂದ್ರ ಮೋದಿಯ ಮುಖ್ಯ ಸಲಹೆಗಾರನಾಗಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದ ಪಿಕೆ ಸಿನ್ಹಾ ರಾಜೀನಾಮೆ ನೀಡಿದ್ದರು. ವೈಯುಕ್ತಿಕ ಕಾರಣ ನೀಡಿ ಸಿನ್ಹಾ ರಾಜೀನಾಮೆ ನೀಡಿದ್ದರು.

ಪಿಕೆ ಸಿನ್ಹಾ ಪ್ರಧಾನಿ ಪ್ರಧಾನ ಸಲಹೆಗಾರ ಜವಾಬ್ದಾರಿಗೂ ಮುನ್ನ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯಾದ ಬಳಿಕ ನರೇಂದ್ರ ಮೋದಿ, 2019ರ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಪ್ರಧಾನ ಸಲಹೆಗಾರನಾಗಿ ನೇಮಕ ಮಾಡಿಕೊಂಡಿದ್ದರು.

ಪಿಕೆ ಸಿನ್ಹಾ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಸಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾರ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಕಾರ್ಯಾಲದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಬದಲಾವಣೆಗಳಾಗಿವೆ. 2020ರ ಎಪ್ರಿಲ್ ತಿಂಗಳಲ್ಲಿ ಪ್ರಧಾನಿ ಕಾರ್ಯದಲ್ಲಿದ್ದ ತರುಣ್ ಬಜಾಜ್, ಆರ್ಥಿಕ ವ್ಯವಹಾರ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಮತ್ತೊರ್ವ ಹಿರಿಯ ಅಧಿಕಾರಿ ಎಕೆ ಶರ್ಮಾ ಸೂಕ್ಷ್ಮ ಮತ್ತು ಸಣ್ಣ ಉದ್ಯಮ ಸಚಿವಾಲಯಕ್ಕೆ ತೆರಳಿ ನಿವೃತ್ತಿಯಾದರು.

ಹೀಗಾಗಿ ಹಿರಿಯ ಅಧಿಕಾರಿಗಳಾದ ಭಾಸ್ಕರ್ ಖುಲ್ಬೆ ಹಾಗೂ ಅಮರಜೀತ್ ಸಿನ್ಹಾ ಅವರನ್ನು ಪ್ರಧಾನಿ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಇದೀಗ ಇವರೂ ರಾಜೀನಾಮೆ ನೀಡಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಮೂರು ದಶಕಗಳ ತಮ್ಮ ವೃತ್ತಿಜೀವನದಲ್ಲಿ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವಾಲಯದಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಸಿನ್ಹಾ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಮತ್ತೊಬ್ಬ ಪ್ರಮುಖ ಅಧಿಕಾರಿ ಭಾಸ್ಕರ್ ಖುಲ್ಬೆ ಅವರೊಂದಿಗೆ ಸಲಹೆಗಾರರಾಗಿ ನೇಮಕಗೊಂಡರು.

English summary
Amarjeet Sinha, an adviser to Prime Minister Narendra Modi, has resigned after serving 17 months in the Prime Minister’s Office (PMO), people familiar with the matter said on condition of anonymity on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X