• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
LIVE

PM Modi Meeting With J-K Leaders Live : ಜಮ್ಮು-ಕಾಶ್ಮೀರದಲ್ಲಿ ಗರಿಗೆದರಿದ ರಾಜಕೀಯ

|
Google Oneindia Kannada News

ಶ್ರೀನಗರ್, ಜೂನ್ 24: ಕಣಿವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುತ್ತಿದೆ.

ಜಮ್ಮು-ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ, ಕೊರೊನಾವೈರಸ್ ಸೋಂಕಿನ ನಿರ್ವಹಣೆ, 370 ವಿಧಿ ರದ್ದು ಸೇರಿದಂತೆ ಹಲವು ನಿಚಾರಗಳು ಸರ್ವಪಕ್ಷ ಸಭೆಯಲ್ಲಿ ಚರ್ಚೆಗೆ ಬರಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆದ ಸರ್ವಪಕ್ಷ ಸಭೆಯಿಂದಾಗಿ ಇಡೀ ದೇಶದ ಲಕ್ಷ್ಯ ಜಮ್ಮು-ಕಾಶ್ಮೀರದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಮೇಲೆ ನೆಟ್ಟಿದೆ.

ಜಮ್ಮು ಕಾಶ್ಮೀರದ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್ (ಪಿಎಜಿಡಿ), ಕಾಂಗ್ರೆಸ್, ಪಿಡಿಪಿ ಮತ್ತು ಹಲವು ಸ್ಥಳೀಯ ರಾಜಕೀಯ ಪಕ್ಷಗಳಿಗೆ ಸರ್ವಪಕ್ಷ ಸಭೆಗೆ ಆಹ್ವಾನಿಸಲಾಗಿದೆ. ಗುರುವಾರ ನಡೆಯುತ್ತಿರುವ ಸರ್ವಪಕ್ಷ ಸಭೆಯಲ್ಲಿ ಶ್ರೀನಗರದಿಂದ ಬಿಜೆಪಿಯ ಮಾಜಿ ಮಿತ್ರಪಕ್ಷ ಪಿಡಿಪಿಯ ಮೆಹಬೂಬಾ ಮುಫ್ತಿ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಮತ್ತು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ಜಿ.ಎ. ಮೀರ್ ಸೇರಿದಂತೆ ಹಲವು ಸ್ಥಳೀಯ ನಾಯಕರು ಭಾಗವಹಿಸಲಿದ್ದಾರೆ.

PM Modis all-party meeting with Jammu Kashmir Leaders Live Updates Highlights in Kannada

ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಕಾಶ್ಮೀರದ ರಕ್ಷಣೆ, ವಿದೇಶಾಂಗ ವ್ಯವಹಾರ, ಸಂಪರ್ಕ ಕ್ಷೇತ್ರಗಳು ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಟ್ಟರೆ, ಉಳಿದೆಲ್ಲ ಅಧಿಕಾರ ರಾಜ್ಯದಲ್ಲಿ ಉಳಿದಿತ್ತು. ಈ ವಿಧಿಯನ್ನು ಎರಡು ವರ್ಷಗಳ ಹಿಂದೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರದ್ದುಗೊಳಿಸಿ, ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದ್ದು, ಅಂತರ್ಜಾಲ ಸೇವೆ ಕಡಿತಗೊಳಿಸಲಾಗಿತ್ತು. ಅಲ್ಲದೇ ಹಲವಾರು ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಿದ್ದು, ರಾಜಕೀಯ ಮೇಲಾಟಕ್ಕೆ ಕಾರಣವಾಗಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆದಿರುವ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಸರ್ವಪಕ್ಷ ಸಭೆ ಹಾಗೂ ಅಲ್ಲಿ ಚರ್ಚೆ ಆಗಿರುವ ಮಹತ್ವದ ವಿಷಯಗಳ ಕುರಿತು ಕ್ಷಣಕ್ಷಣದ ಸುದ್ದಿಗಳನ್ನು ಇಲ್ಲಿ ಓದಿ.

Newest First Oldest First
7:32 PM, 24 Jun
ಆಗಸ್ಟ್ 5 ೨2019ರಲ್ಲಿ ನಡೆದಿದ್ದರ ಕುರಿತು ನಾವು ಬೆಂಬಲ ನೀಡುವುದಿಲ್ಲ ಎಂದು ಪ್ರಧಾನಿಯವರಿಗೆ ಮನವರಿಕೆ ಮಾಡಿದ್ದೇವೆ, ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ, ನ್ಯಾಯಾಲಯದಲ್ಲಿ ಹೋರಾಡುತ್ತೇವೆ-ಓಮರ್ ಅಬ್ದುಲ್ಲಾ
7:31 PM, 24 Jun
ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡಬೇಕು ಅದು ಮೊದಲ ಗುರಿಯಾಗಬೇಕು ಎಂದು ಎಲ್ಲಾ ಪಕ್ಷಗಳು ಒಮ್ಮತಕ್ಕೆ ಬಂದವರು ಎಲ್ಲರೂ ಒಟ್ಟಾದಾಗ ಮಾತ್ರ ಶಾಂತಿ ಸಿಗುತ್ತದೆ ಎಂದು ನಿರ್ಲಲ್ ಸಿಂಗ್ ಹೇಳಿದ್ದಾರೆ.
7:29 PM, 24 Jun
ಸುಮಾರು ಶೇ.80ರಷ್ಟು ಪಕ್ಷಗಳು ಆರ್ಟಿಕಲ್ 370 ಕುರಿತು ಮಾತನಾಡಿದ್ದವು. ನಮ್ಮ ಬೇಡಿಕೆಯು ರಾಜತ್ವ, ಕಾಶ್ಮೀರಿ ಪಫಡಿತರ ಪುನರ್ವಸತಿ ಸೇರಿದಂತೆ ಹಲವು ಬೇಡಿಕೆಗಳನ್ನೊಳಗೊಂಡಿತ್ತು, ಗುಲಾಂ ನಬಿ ಆಜಾದ್
7:27 PM, 24 Jun
ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭಿಪ್ರಾಯವನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಮಂಡಿಸಿವೆ, ಮುಂದಿನ ದಿನಗಳಲ್ಲಿ ರಾಜಕೀಯ ಪ್ರಕ್ರಿಯೆ ಆರಂಭವಾಗಲಿದೆ-ಕವಿಂದರ್ ಗುಪ್ತಾ
7:17 PM, 24 Jun
ಜಮ್ಮು ಕಾಶ್ಮೀರದ ನಾಯಕರ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ ಬಳಿಕ ಕ್ಲಿಕ್ಕಿಸಿದ ಫೋಟೊ
7:16 PM, 24 Jun
ಎಲ್ಲರ ಮಧ್ಯೆಯೂ ರಾಜಕೀಯ ಭಿನ್ನಾಭಿಪ್ರಾಯಗಳು ಇರುತ್ತವೆ ಆದರೆ ಎಲ್ಲರೂ ರಾಷ್ಟ್ರಕ್ಕಾಗಿ ಕೆಲಸ ಮಾಡಬೇಕು ಇದರಿಂದ ಜಮ್ಮು ಕಾಶ್ಮೀರ ಜನತೆಗೆ ಅನುಕೂಲವಾಗಲಿದೆ, ಜಮ್ಮು ಕಾಶ್ಮೀರದಲ್ಲಿ ಸುರಕ್ಷತೆಯ ವಾತಾವರಣವನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
7:15 PM, 24 Jun
ಜನರು ಭ್ರಷ್ಟಾಚಾರ ರಹಿತ ಆಡಳಿತವನ್ನು ಅನುಭವಿಸಿದಾಗ ಜನರಲ್ಲಿ ವಿಶ್ವಾಸ ಮೂಡುತ್ತದೆ ಅದು ಈಗ ಜಮ್ಮು ಕಾಶ್ಮೀರದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
7:13 PM, 24 Jun
ಜಮ್ಮು ಕಾಶ್ಮೀರದ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ನರೇಂದ್ರ ಮೋದಿ ಹೇಳಿರುವುದಾಗಿ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ
7:12 PM, 24 Jun
ಗಡಿನಿರ್ಣಯದ ಬಳಿಕ ಜಮ್ಮು ಮತ್ತು ಕಾಶ್ಮೀರ ಸ್ಥಾನದ ಬಗ್ಗೆ ಚರ್ಚೆ ಎಂದು ಮೋದಿ ಹೇಳಿರುವುದಾಗಿ ಮುಜಾಫರ್ ಹುಸೇನ್ ತಿಳಿಸಿದ್ದಾರೆ.
5:13 PM, 24 Jun
ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಸರ್ವಪಕ್ಷಗಳ ಸಭೆ ಕರೆದಿದ್ದು 14 ಗಣ್ಯರನ್ನು ಆಹ್ವಾನಿಸಿದ್ದಾರೆ.
4:44 PM, 24 Jun
ದೆಹಲಿಯಲ್ಲಿ ನಡೆಯುತ್ತಿರುವ ಸರ್ವಪಕ್ಷ ಸಭೆಯ ಚಿತ್ರಗಳು
4:22 PM, 24 Jun
ದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆಯ ಚಿತ್ರ
4:19 PM, 24 Jun
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿರುವ ಸರ್ವಪಕ್ಷ ಸಭೆಯ ಒಂದು ನೋಟ
4:17 PM, 24 Jun
ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಕಾಶ್ಮೀರದ ರಕ್ಷಣೆ, ವಿದೇಶಾಂಗ ವ್ಯವಹಾರ, ಸಂಪರ್ಕ ಕ್ಷೇತ್ರಗಳು ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಟ್ಟರೆ ಉಳಿದೆಲ್ಲ ಅಧಿಕಾರಗಳು ರಾಜ್ಯದಲ್ಲಿ ಉಳಿದಿತ್ತು. ಈ ವಿಧಿಯನ್ನು ಎರಡು ವರ್ಷಗಳ ಹಿಂದೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರದ್ದುಗೊಳಿಸಲಾಗಿತ್ತು.
3:44 PM, 24 Jun
ನವದೆಹಲಿಯ 7 ಲೋಕ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದಲ್ಲಿ ಸರ್ವ ಪಕ್ಷ ಸಭೆ ಆರಂಭ.
2:52 PM, 24 Jun
ಸರ್ವಪಕ್ಷ ಸಭೆ ಕರೆದಿರುವ ಹಿನ್ನೆಲೆ ದೆಹಲಿಯ 7 ಲೋಕ ಕಲ್ಯಾಣ್ ಮಾರ್ಗ್ ನಲ್ಲಿ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸಕ್ಕೆ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾರ್, ಗುಲಾವ್ ಅಹ್ಮದ್ ಮಿರ್, ತಾರ್ ಚಾಂದ್ ತಲುಪಿದ್ದಾರೆ.
1:48 PM, 24 Jun
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆದಿರುವ ಹಿನ್ನೆಲೆ ದೆಹಲಿಯಲ್ಲಿ ಇರುವ ತಮ್ಮ ನಿವಾಸಕ್ಕೆ ತಲುಪಿದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ.
1:03 PM, 24 Jun
ಜಮ್ಮು ಕಾಶ್ಮೀರದ ಜನರು 2019 ಆಗಸ್ಟ್ 5ರಿಂದ ತೀವ್ರ ಒತ್ತಡಕ್ಕೆ ಸಿಲುಕಿದ್ದಾರೆ. ಅದರ ಬಗ್ಗೆ ನಾವೀಗ ಪ್ರಸ್ತಾಪಿಸುವುದಿಲ್ಲ, 370ನೇ ವಿಧಿ ಅಡಿಯಲ್ಲಿ ವಿಶೇಷ ಸ್ಥಾನಮಾನದ ಬಗ್ಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.
12:14 PM, 24 Jun
ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ ರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರು.
11:55 AM, 24 Jun
ಜಮ್ಮು ಕಾಶ್ಮೀರ ನಾಯಕರ ಜೊತೆಗಿನ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ.
11:40 AM, 24 Jun
"ದುರದೃಷ್ಟವಶಾತ್ ಪ್ರಧಾನಿ ನರೇಂದ್ರ ಮೋದಿ ಕರೆದ ಸರ್ವಪಕ್ಷ ಸಭೆಗೆ ಯಾವುದೇ ಕಾರ್ಯಸೂಚಿ ಇಲ್ಲ. ಇದು ಮುಕ್ತ ಚರ್ಚೆಗೆ ಕರೆಯಲಾದ ಸಭೆ ಎಂದು ನಮಗೆ ತಿಳಿಸಲಾಗಿದೆ. ಈ ಸಭೆಯಲ್ಲಿ ಗುಲಾಮ್ ನಬಿ ಆಜಾದ್, ನಾನು ಮತ್ತು ತಾರಾ ಚಂದ್ ಭಾಗವಹಿಸಲಿದ್ದೇವೆ," ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.
10:58 AM, 24 Jun
ಶ್ರೀನಗರದ ಲಾಸ್ ಜನ್ ಬೈಪಾಸ್ ಬಳಿ ಅನುಮಾನಾಸ್ಪಸ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
10:56 AM, 24 Jun
ಜಮ್ಮು-ಕಾಶ್ಮೀರದಲ್ಲಿ ರಾಜ್ಯತ್ವವನ್ನು ಪುನಃಸ್ಥಾಪಿಸಬೇಕು ಎಂದು ನ್ಯಾಷನಲ್ ಪ್ಯಾಂಥರ್ಸ್ ಪಕ್ಷದ ಅಧ್ಯಕ್ಷ ಭೀಮ್ ಸಿಂಗ್ ಆಗ್ರಹಿಸಿದ್ದಾರೆ.
10:41 AM, 24 Jun
ಜಮ್ಮುವಿನಲ್ಲಿ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬ್ ಮುಫ್ತಿ ವಿರುದ್ಧ ದೊಗ್ರಾ ಫ್ರೆಂಟ್ ಪ್ರತಿಭಟನೆ.
10:34 AM, 24 Jun
ಪ್ರಧಾನಿ ಮೋದಿ ಕರೆದ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಲು ಶ್ರೀನಗರದ ನಿವಾಸದಿಂದ ಹೊರಟ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ.
10:01 AM, 24 Jun
ಜಮ್ಮು ಕಾಶ್ಮೀರದಲ್ಲಿ ಈ ಹಿಂದೆ ಗೃಹ ಬಂಧನದಲ್ಲಿ ಇರಿಸಲಾಗಿದ್ದ ನಾಯಕರ ಜೊತೆಗೆ ಇಂದು ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ.
10:00 AM, 24 Jun
ಈ ಹಿಂದೆ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿ ಡಾ.ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಎಂ.ವೈ.ತಾರಿಗಾಮಿ, ಸಜ್ಜಾದ್ ಲೋನ್. ಸಂಸದರಾಗಿದ್ದರೂ ಡಾ.ಫಾರೂಕ್ ರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅನ್ನು ಬೇರೆ ಬೇರೆ ಸ್ಥಳಗಳಲ್ಲಿ ಬಂಧಿಸಿಡಲಾಗಿತ್ತು.
7:37 AM, 24 Jun
2019ರ ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರದಲ್ಲಿ ನಡೆಯುತ್ತಿರುವ ಮೊದಲ ಸರ್ವಪಕ್ಷ ಸಭೆ.
7:05 AM, 24 Jun
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ 14 ನಾಯಕರು ಹಾಗೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಗೆ ಸರ್ವಪಕ್ಷ ಸಭೆಗೆ ಆಹ್ವಾನ ನೀಡಲಾಗಿದೆ.
6:54 AM, 24 Jun
ಕಣಿವೆ ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಇಂಟರ್ ನೆಟ್ ಸೇವೆ ಕಡಿತ.
READ MORE

English summary
PM Narendra Modi's all-party meeting with Jammu Kashmir Leaders on June 24.The all-party meet will be the first political engagement since the abrogation of Article 370 in 2019. Check out Live Updates and Highlights in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X