ಸ್ವಾತಂತ್ರ್ಯ ದಿನಾಚರಣೆ ಕುರಿತು ಪ್ರಧಾನಿ ಮೋದಿ ಭಾಷಣ, ವೀಕ್ಷಣೆ ಹೇಗೆ?
ನವದೆಹಲಿ, ಆಗಸ್ಟ್ 14: ಭಾರತೀಯರು ಪ್ರತಿ ವರ್ಷವು ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡುತ್ತಾರೆ. ಈ ದಿನವು ಭಾರತೀಯರಿಗೆ ಬ್ರಿಟಿಷರಿಂದ ಮುಕ್ತಿ ದೊರೆತ ದಿನವಾಗಿದೆ.
ಭಾರತೀಯರೆಲ್ಲರು ಬ್ರಿಟಿಷರ ಸರ್ವಾಧಿಕಾರಿ ನಿಯಮಗಳಿಂದ ಸ್ವತಂತ್ರಗೊಂಡ ದಿನ. ಇಂದು ನಾವು 75ನೇ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಈ ವರ್ಷ ಭಾನುವಾರದಂದು ನಮ್ಮ ದೇಶ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡುತ್ತಿದೆ.
ಸ್ವಾತಂತ್ರ್ಯ ದಿನಾಚರಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ನೀವು ಭಾಷಣವನ್ನು ಎಲ್ಲಿ ವೀಕ್ಷಿಸಬಹುದು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಒಲಿಂಪಿಕ್ಸ್‌ನಲ್ಲಿ ವಿಜೇತರಾದವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಅವರೇ ಮುಖ್ಯ ಅತಿಥಿಯಾಗಲಿದ್ದಾರೆ.

74 ನೇ ಸ್ವಾತಂತ್ರ್ಯ ದಿನವನ್ನು ಕೂಡ ಕೊರೊನಾ ನಿಯಮಗಳನ್ನು ಪಾಲಿಸಿಯೇ ಆಚರಿಸಲಾಗಿತ್ತು. ಧ್ವಜಾರೋಹಣವಾದ ಬಳಿಕ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ ಬೆಳಗ್ಗೆ 7.30ಕ್ಕೆ ಶುರುವಾಗಲಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಗುತ್ತದೆ.
ಸ್ವಾತಂತ್ರ್ಯ ದಿನಾಚರಣೆಯನ್ನು ಮೊಬೈಲ್ ಫೋನ್ ಮತ್ತು ಆನ್‌ಲೈನ್ ಲೈವ್ ಆಗಿ ವೀಕ್ಷಿಸಬಹುದು. ಪ್ರಧಾನಿ ಮೋದಿ ಭಾಷಣವನ್ನು ದೂರದರ್ಶನ ಪ್ರಸಾರ ಮಾಡಲಿದೆ.
ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋ ಕೂಡ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರ ಮಾಡಲಿದೆ ಹಾಗೂ ಅದರ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಭಾಷಣ ನೇರ ಪ್ರಸಾರವಾಗಲಿದೆ.
ಪ್ರಧಾನಿ ಕಚೇರಿಯ (ಪಿಎಂಒ) ಅಧಿಕೃತ ಯೂಟ್ಯೂಬ್ ಚಾನೆಲ್, ಹಾಗೂ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.
ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋ
https://www.youtube.com/watch?v=3aefZeUY-50
ದೂರದರ್ಶನ
https://www.youtube.com/watch?v=fVz8LyjSC_k
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಯಾವುದೇ ಅವಘಡ ನಡೆಯಬಾರದು ಎಂಬ ಕಾರಣಕ್ಕೆ ದೆಹಲಿ ಪೊಲೀಸರು ಇಂಥ ಕ್ರಮಕ್ಕೆ ಮುಂದಾಗಿದ್ದಾರೆ. ಕಳೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ರೈತರು ನಡೆಸಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಬಾರಿ ಹಾಗೆ ಆಗಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕೆಂಪುಕೋಟೆಯಿಂದ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಕಳೆದ ವರ್ಷ ಗಣರಾಜ್ಯೋತ್ಸವ ಸಮಾರಂಭದ ನಂತರ ರೈತರ ಟ್ರ್ಯಾಕ್ಟರ್ ರ‍್ಯಾಲಿ ದೆಹಲಿಯ ಕೆಂಪುಕೋಟೆ ತಲುಪಿತ್ತು.
ಈ ವರ್ಷವೂ ಅಂಥ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಭಯೋತ್ಪಾದಕ ದಾಳಿಯ ಬೆದರಿಕೆಯೂ ಪೊಲೀಸರ ಈ ಕ್ರಮಕ್ಕೆ ಕಾರಣವಾಗಿದೆ.
ನೇತಾಜಿ ಸುಭಾಷ್ ಮಾರ್ಗ, ಲೋಥಿಯನ್ ರಸ್ತೆ, ಎಸ್‌ಪಿ ಮುಖರ್ಜಿ ಮಾರ್ಗ, ಚಾಂದಿನಿ ಚೌಕ ರಸ್ತೆ, ನಿಶಾದ್ ರಾಜ್ ಮಾರ್ಗ, ಲಿಂಕ್ ರಸ್ತೆಯಿಂದ ನೇತಾಜಿ ಸುಭಾಷ್ ಮಾರ್ಗ, ರಿಂದ ರಸ್ತೆಯಿಂದ ರಾಜ್‌ಘಾಟ್ ಬಳಿಕ ಐಎಸ್‌ಬಿಟಿ ಹಾಗೂ ಔಟರ್ ರಿಂಗ್ ರಸ್ತೆ, ಐಪಿ ಫ್ಲೈಓವರ್ ಪ್ರದೇಶಗಳಲ್ಲಿ ಬೆಳಗಿನ ಜಾವ 4 ರಿಂದ 10 ಗಂಟೆಯವರೆಗೆ ರಸ್ತೆ ಬಂದ್ ಮಾಡಲಾಗುತ್ತದೆ.
ಎನ್‌ಎಸ್‌ಜಿ, ಸೆಕ್ಯುರಿಟಿ ರಿಂಗ್, SWAT ಕಮಾಂಡರ್ಸ್ ಸೇರಿದಂತೆ ಹಲವು ಭದ್ರತೆ ನೀಡಲಾಗಿದೆ. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ. 350ಕ್ಕೂ ಹೆಚ್ಚು ಕ್ಯಾಮರಾಗಳನ್ನು ಅಳವಡಿಸಲಾಗಿದೆ. 5 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.












Click it and Unblock the Notifications