Heeraben Modi : ಸಹೋದರನ ಅಪಘಾತದ ಬೆನ್ನಲ್ಲೇ ಮೋದಿಗೆ ಮತ್ತೊಂದು ಶಾಕ್

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಹೀರಾಬಾ ಅವರು ಇಂದು ಆರೋಗ್ಯದಲ್ಲಿ ಏರುಪೇರಾದ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಹೋದರನ ಅಪಘಾತದ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿರುವುದು ಆತಂಕ ತಂದಿದೆ.

ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

Pm Modis mother Heerabe admitted to un mehta hospital

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

Pm Modis mother Heerabe admitted to un mehta hospital

ಸಹೋದರನ ಅಪಘಾತದ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲಾಗಿರುವುದು ಆತಂಕವನ್ನು ಸೃಷ್ಟಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+