ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್

|
Google Oneindia Kannada News

ನವದೆಹಲಿ, ಮಾರ್ಚ್ 11: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ನರೇಂದ್ರ ಮೋದಿ ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. 'ನನ್ನ ತಾಯಿ ಇಂದು ಮೊದಲ ಪ್ರಮಾಣದ ಕೊರೊನಾ ಲಸಿಕೆ ಪಡೆದಿದ್ದಾರೆ, ಈ ಸಂಗತಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಸಂತಸವಾಗುತ್ತಿದೆ. ನಿಮ್ಮ ಸುತ್ತಮುತ್ತಲಿರುವ ಜನರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿ' ಎಂದು ಬರೆದುಕೊಂಡಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇತ್ತೀಚೆಗಷ್ಟೇ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯನ್ನು ಪಡೆದಿದ್ದರು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,100 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

PM Modi’s Mother Heeraben Modi Receives First Dose Of COVID-19 Vaccine

ಕೊರೊನಾ ವೈರಸ್ ಗೆ ನಿನ್ನೆ ಒಂದೇ ದಿನ 126 ಮಂದಿ ಬಲಿಯಾಗಿದ್ದಾರೆ, ಈ ಮೂಲಕ ಸಾವಿನ ಸಂಖ್ಯೆ 1,58,189ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 22 ಸಾವಿರದ 854 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಈ ನಡುವೆ ಒಟ್ಟಾರೆ 1,12,85,561 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 18,100 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,09,38,146ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,89,226 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

English summary
Prime Minister Narendra Modi announced on Thursday that his mother Heeraben Modi has received the first dose of a COVID-19 vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X