ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ರಾಜೀನಾಮೆ

|
Google Oneindia Kannada News

ನವದೆಹಲಿ, ಮಾರ್ಚ್ 16: ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿನ್ಹಾ ಅವರು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ, ಪ್ರಧಾನಿ ಕಚೇರಿಯಲ್ಲಿ ಪ್ರಧಾನ ಸಲಹೆಗಾರ ಎಂಬ ಹೊಸ ಹುದ್ದೆಯನ್ನು ರಚಿಸಿ ಆ ಸ್ಥಾನಕ್ಕೆ ಪಿಕೆ ಸಿನ್ಹಾರನ್ನು ಆಯ್ಕೆ ಮಾಡಲಾಗಿತ್ತು.

ಪ್ರಧಾನಿ ಮೋದಿ ಸರ್ಕಾರದಲ್ಲಿ ನಾಗರಿಕ ಸ್ವಾತಂತ್ರ್ಯಗಳು ನಾಶ: ರಾಹುಲ್ ಗಾಂಧಿಪ್ರಧಾನಿ ಮೋದಿ ಸರ್ಕಾರದಲ್ಲಿ ನಾಗರಿಕ ಸ್ವಾತಂತ್ರ್ಯಗಳು ನಾಶ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಪಿಕೆ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

 PM Modis Principal Advisor PK Sinha Resigns

ಆಗಸ್ಟ್ 30, 2019 ರಂದು ಸಿನ್ಹಾ ಅವರನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಿಸಲಾಯಿತು. 11 ಸೆಪ್ಟೆಂಬರ್ 2019 ರಂದು ಅವರನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದರು.

1977 ರ ಬ್ಯಾಚ್‌ನ ಉತ್ತರ ಪ್ರದೇಶ ಕೇಡರ್‌ನ ಭಾರತೀಯ ಆಡಳಿತ ಸೇವೆಯ (ಐಎಎಸ್) ಅಧಿಕಾರಿ ಪ್ರದೀಪ್ ಕುಮಾರ್ ಸಿನ್ಹಾ. ಅವರು ಭಾರತದ 31 ನೇ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

ಇದಕ್ಕೂ ಮೊದಲು ಸಿನ್ಹಾ ಅವರು ಭಾರತದ ವಿದ್ಯುತ್ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಭಾರತದ ಶಿಪ್ಪಿಂಗ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

English summary
P K Sinha, the Principal Advisor to Prime Minister Narendra Modi, has resigned, sources said on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X