ಆಗಸ್ಟ್ 14 ಇನ್ಮುಂದೆ 'ವಿಭಜನೆಯ ಕರಾಳ ನೆನಪಿನ ದಿನ' ಎಂದು ಆಚರಣೆ: ಮೋದಿ
ನವದೆಹಲಿ, ಆಗಸ್ಟ್ 14: ಇನ್ನುಮುಂದೆ ಆಗಸ್ಟ್ 14ನ್ನು 'ವಿಭಜನೆಯ ಕರಾಳ ನೆನಪಿನ ದಿನ' ಎಂದು ಆಚರಣೆ ಮಾಡಲಾಗುವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಗಸ್ಟ್ 14ನ್ನು ಇನ್ಮುಂದೆ 'ವಿಭಜನ್ ವಿಭಿಷಿಕಾ ಸ್ಮಾರಕ ದಿನ' ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಲಾಗಿದೆ.
ಇದಕ್ಕೆ ಕಾರಣಗಳನ್ನು ನೀಡಿರುವ ಪ್ರಧಾನಿ ನರೇಂದ್ರ ಮೋದಿ , ಈ ದಿನದಂದು ನಮ್ಮ ಲಕ್ಷಾಂತರ ಸಹೋದರ-ಸಹೋದರಿಯರು ದ್ವೇಷ ಮತ್ತು ಹಿಂಸಾಚಾರದಿಂದ ಸ್ಥಳಾಂತರಗೊಂಡಿದ್ದಾರೆ. ಅವರು ಮಾಡಿರುವ ಈ ತ್ಯಾಗದ ನೆನಪಿಗಾಗಿ ಆಗಸ್ಟ್ 14ರಂದು 'ವಿಭಜನ್ ವಿಭಿಷಿಕಾ ಸ್ಮಾರಕ್ = ದಿನ' ಎಂದು ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಆಗಸ್ಟ್ 14: ಭಾರತ ಮಾತೆಯ ಎದೆಯನ್ನು ಸೀಳಿ ದೇಶ ಇಬ್ಭಾಗವಾಗಿತು, ಆಗಸ್ಟ್ 14 ರ ದಿನವನ್ನು ದೇಶದ ಇತಿಹಾಸದಲ್ಲಿ ಕಣ್ಣೀರಿನಿಂದ ಬರೆಯಲಾಗಿದೆ. ದೇಶ ವಿಭಜನೆಯಾದ ದಿನ ಇದು. ಪಾಕಿಸ್ತಾನವನ್ನು 14 ಆಗಸ್ಟ್ 1947 ರಂದು ಮತ್ತು ಭಾರತವನ್ನು 15 ಆಗಸ್ಟ್ 1947 ರಂದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲಾಯಿತು.
ಈ ವಿಭಜನೆಯ ಮೂಲಕ ಭಾರತವನ್ನು ಎರಡು ಭಾಗಗಳಾಗಿ ವಿಂಗಡಿಸುವುದರ ಜೊತೆಗೆ ಬಂಗಾಳವನ್ನು ಕೂಡ ವಿಭಜಿಸಲಾಯಿತು ಮತ್ತು ಬಂಗಾಳದ ಪೂರ್ವ ಭಾಗವನ್ನು ಭಾರತದಿಂದ ಬೇರ್ಪಡಿಸಿ ಪೂರ್ವ ಪಾಕಿಸ್ತಾನವನ್ನು ರೂಪಿಸಲಾಯಿತು, ಅದು 1971 ರ ಯುದ್ಧದ ನಂತರ ಬಾಂಗ್ಲಾದೇಶವಾಯಿತು.
ಈ ಕುರಿತು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, 'ದೇಶ ವಿಭಜನೆಯ ನೋವನ್ನು ಎಂದಿಗೂ ಮೆರೆಯಲಾಗುವುದಿಲ್ಲ. ದ್ವೇಷ ಹಾಗೂ ಹಿಂಸೆಯ ಕಾರಣ ನಮ್ಮ ಲಕ್ಷಾಂತರ ಸಹೋದರ-ಸಹೋದರಿಯರು ಸ್ಥಳಾಂತರಗೊಂಡರು ಮತ್ತು ಹಲವರು ತಮ್ಮ ಪ್ರಾಣಗಳನ್ನು ಕಳೆದುಕೊಂಡರು.
ಅವರ ಈ ಸಂಘರ್ಷ ಹಾಗೂ ಬಲಿದಾನದ ನೆನಪಿನಲ್ಲಿ ಆಗಸ್ಟ್ 14ರಂದು Partition Horrors Remembrance Day ಎಂದು ಆಚರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. = ನಮಗೆ ಭೇದ-ಭಾವ ವೈಮನಸ್ಯ ಹಾಗೂ ಕೆಟ್ಟ ಭಾವನೆಯ ವಿಷವನ್ನು ಮುಗಿಸಿ ಹಾಕಲು ಕೇವಲ ಪ್ರೇರಣೆ ಮಾತ್ರ ನೀಡದೆ, ಇದರಿಂದ ಏಕತೆ, ಸಾಮಾಜಿಕ ಸಮರಸತೆ ಹಾಗೂ ಮಾನವೀಯ ಸಂವೇದನೆಯನ್ನು ಬಳಪಡಿಸಲಿದೆ ಎಂದು ಅವರು ಹೇಳಿದ್ದಾರೆ.
देश के बंटवारे के दर्द को कभी भुलाया नहीं जा सकता। नफरत और हिंसा की वजह से हमारे लाखों बहनों और भाइयों को विस्थापित होना पड़ा और अपनी जान तक गंवानी पड़ी। उन लोगों के संघर्ष और बलिदान की याद में 14 अगस्त को 'विभाजन विभीषिका स्मृति दिवस' के तौर पर मनाने का निर्णय लिया गया है।
— Narendra Modi (@narendramodi) August 14, 2021
ಆಗಸ್ಟ್ 14, 1947 ರಂದು ಭಾರತ ಮತ್ತು ಪಾಕಿಸ್ತಾನವನ್ನು ವಿಭಜಿಸಲಾಯಿತು. ಪಾಕಿಸ್ತಾನ ಆಗಸ್ಟ್ 14 ರಂದು ತನ್ನ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸುತ್ತದೆ.
ದೆಹಲಿಯ ಕೆಂಪು ಕೋಟೆಯಲ್ಲಿ ಬಿಗಿ ಬಂದೋಬಸ್ತ್: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಯಾವುದೇ ಅವಘಡ ನಡೆಯಬಾರದು ಎಂಬ ಕಾರಣಕ್ಕೆ ದೆಹಲಿ ಪೊಲೀಸರು ಇಂಥ ಕ್ರಮಕ್ಕೆ ಮುಂದಾಗಿದ್ದಾರೆ. ಕಳೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ರೈತರು ನಡೆಸಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಬಾರಿ ಹಾಗೆ ಆಗಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕೆಂಪುಕೋಟೆಯಿಂದ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಕಳೆದ ವರ್ಷ ಗಣರಾಜ್ಯೋತ್ಸವ ಸಮಾರಂಭದ ನಂತರ ರೈತರ ಟ್ರ್ಯಾಕ್ಟರ್ ರ‍್ಯಾಲಿ ದೆಹಲಿಯ ಕೆಂಪುಕೋಟೆ ತಲುಪಿತ್ತು. ಈ ವರ್ಷವೂ ಅಂಥ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಭಯೋತ್ಪಾದಕ ದಾಳಿಯ ಬೆದರಿಕೆಯೂ ಪೊಲೀಸರ ಈ ಕ್ರಮಕ್ಕೆ ಕಾರಣವಾಗಿದೆ.
ಎನ್‌ಎಸ್‌ಜಿ, ಸೆಕ್ಯುರಿಟಿ ರಿಂಗ್, SWAT ಕಮಾಂಡರ್ಸ್ ಸೇರಿದಂತೆ ಹಲವು ಭದ್ರತೆ ನೀಡಲಾಗಿದೆ. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ.
350ಕ್ಕೂ ಹೆಚ್ಚು ಕ್ಯಾಮರಾಗಳನ್ನು ಅಳವಡಿಸಲಾಗಿದೆ. 5 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನೇತಾಜಿ ಸುಭಾಷ್ ಮಾರ್ಗ, ಲೋಥಿಯನ್ ರಸ್ತೆ, ಎಸ್‌ಪಿ ಮುಖರ್ಜಿ ಮಾರ್ಗ, ಚಾಂದಿನಿ ಚೌಕ ರಸ್ತೆ, ನಿಶಾದ್ ರಾಜ್ ಮಾರ್ಗ, ಲಿಂಕ್ ರಸ್ತೆಯಿಂದ ನೇತಾಜಿ ಸುಭಾಷ್ ಮಾರ್ಗ, ರಿಂದ ರಸ್ತೆಯಿಂದ ರಾಜ್‌ಘಾಟ್ ಬಳಿಕ ಐಎಸ್‌ಬಿಟಿ ಹಾಗೂ ಔಟರ್ ರಿಂಗ್ ರಸ್ತೆ, ಐಪಿ ಫ್ಲೈಓವರ್ ಪ್ರದೇಶಗಳಲ್ಲಿ ಬೆಳಗಿನ ಜಾವ 4 ರಿಂದ 10 ಗಂಟೆಯವರೆಗೆ ರಸ್ತೆ ಬಂದ್ ಮಾಡಲಾಗುತ್ತದೆ.
ದೆಹಲಿಯಿಂದ ಕಾಶ್ಮೀರದವರೆಗೂ ಭದ್ರತೆ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜಧಾನಿ ದೆಹಲಿಯಿಂದ ಕಾಶ್ಮೀರದವರೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭದ್ರತಾ ಪಡೆ ಸಿಬ್ಬಂದಿ ದೆಹಲಿಯ ಎಲ್ಲೆಡೆ ಬೀಡುಬಿಟ್ಟಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ) ದೃಷ್ಟಿಯಿಂದ, ಅನೇಕ ಸಾಂಪ್ರದಾಯಿಕ ಮಾರ್ಗಗಳನ್ನು ಮುಚ್ಚಲಾಗಿದೆ ಮತ್ತು ದೆಹಲಿ ಗಡಿಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲಾಗಿದೆ. ಇದರ ಹೊರತಾಗಿ, ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಸಹ ನಿಯೋಜಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದೆ. ರಸ್ತೆಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.. ವಾಸ್ತವವಾಗಿ, ಪಾಕಿಸ್ತಾನವು ಯಾವುದೇ ಪಿತೂರಿಯನ್ನು ಕಾರ್ಯಗತಗೊಳಿಸಲು ಯೋಜಿಸಬಹುದು ಎಂಬ ಆತಂಕವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪಡೆಗಳು ಕಣಿವೆಯಲ್ಲಿ ವಿಶೇಷ ನಿಗಾ ವಹಿಸುತ್ತಿವೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಲಾಗಿದೆ.












Click it and Unblock the Notifications