ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ಡೌನ್: ಪ್ರಧಾನಿ ಮೋದಿ ನೀಡಿದ ಕಟ್ಟುನಿಟ್ಟಿನ ಸಪ್ತಸೂತ್ರಗಳು

|
Google Oneindia Kannada News

ನವದೆಹಲಿ, ಏಪ್ರಿಲ್ 14: ದೇಶದ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸುವ ಅಗತ್ಯವಿದೆ. ಕೊರೊನಾ ಸೋಂಕು ಹರಡದಂತೆ ನಾವು ಆಯ್ಕೆ ಮಾಡಿಕೊಂಡಿರುವ ಮಾರ್ಗ ಸರಿಯಾಗಿದೆ. ಆರ್ಥಿಕ ಪರಿಸ್ಥಿತಿಯಿಂದ ದೇಶದ ಜನರ ಪ್ರಾಣ ಮುಖ್ಯ ಎಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಇದೇ ಸಂದರ್ಭದಲ್ಲಿ ಎರಡನೇ ಅವಧಿಗೆ ಲಾಕ್ಡೌನ್ ವಿಸ್ತರಣೆ ಘೋಷಣೆ ಮಾಡಿದರು.

ಮಾರ್ಚ್ 23ರಿಂದ ಏಪ್ರಿಲ್ 14ರ ತನಕ ಮೊದಲ ಅವಧಿಯಲ್ಲಿ 21 ದಿನಗಳ ಲಾಕ್ಡೌನ್ ಅವಧಿಯನ್ನು ದೇಶ ಎದುರಿಸಿದೆ. ಈಗ ಮೇ 3ರ ತನಕ 19 ದಿನಗಳ ಲಾಕ್ಡೌನ್ ವಿಸ್ತರಣೆಯಾಗಿದೆ. ಜೊತೆಗೆ ಏಪ್ರಿಲ್ 20ರ ತನಕ ರೆಡ್ ಅಲರ್ಟ್ ಇರುವ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ತೀವ್ರವಾಗಿ ಅವಲೋಕನಕ್ಕೆ ಕರೆ ನೀಡಲಾಗಿದೆ. ಪರಿಸ್ಥಿತಿ ಸುಧಾರಿಸಿದರೆ ಮಾತ್ರ ಹೊಸ ಮಾರ್ಗಸೂಚಿಯ ಅನ್ವಯ ವಿನಾಯಿತಿ ನೀಡಲಾಗುತ್ತದೆ ಎಂದು ಮೋದಿ ಎಚ್ಚರಿಸಿದರು.

ದೇಶಾದ್ಯಂತ ಮೇ 3ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ: ಮೋದಿ ದೇಶಾದ್ಯಂತ ಮೇ 3ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ: ಮೋದಿ

PM Modi seeks saat baaton mein saath support in 7 things

ಪ್ರಧಾನಿ ಮೋದಿ ನೀಡಿದ ಸಪ್ತ ಸೂತ್ರಗಳು:
* ಮನೆಯಲ್ಲಿರುವ ವಯೋವೃದ್ಧರ ಮೇಲೆ ನಿಗಾ ಇರಿಸಿ, ಅನಾರೋಗ್ಯಪೀಡಿತರ ಬಗ್ಗೆ ಹೆಚ್ಚಿನ ಆರೈಕೆ ಇರಲಿ.
* ಲಾಕ್ಡೌನ್ ಅವಧಿಯಲ್ಲಿ ಸಾಮಾಜಿಕ ಅಂತರದ ಲಕ್ಷ್ಮಣ ರೇಖೆ ದಾಟಬೇಡಿ. ಮನೆಯಲ್ಲೇ ತಯಾರಿಸಿದ ಮಾಸ್ಕ್ ಧರಿಸಿ
* ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಆಯುಷ್ ಸಚಿವಾಲಯದ ಸೂಚನೆಗಳನ್ನು ಪಾಲಿಸಿ
* ಕೊರೊನಾವೈರಸ್ ಸೋಂಕು ಹರಡದಂತೆ ತಡೆಯಲು ಹೊರ ತಂದಿರುವ ಆರೋಗ್ಯ ಸೇತು ಆಪ್ ಡೌನ್ಡೌಡ್ ಮಾಡಿ ಬಳಸಿ, ಇತರರಿಗೂ ತಿಳಿಸಿ.
* ಬಡವರು, ನಿರ್ಗತಿಕರ ಊಟ, ವಸತಿ ಬಗ್ಗೆ ನಿಗಾವಹಿಸಿ, ಎಲ್ಲರೂ ನೆರವಾಗಿ.
* ಯಾರನ್ನು ಕೆಲಸದಿಂದ ತೆಗೆಯಬೇಡಿ, ಕೃಷಿಕರ ಬೆಂಬಲಕ್ಕೆ ನಿಲ್ಲಿ, ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಮುಂತಾದ ಕೊರೊನಾ ವಾರಿಯರ್ಸ್ ಗೌರವಿಸಿ, ಸಹಕರಿಸಿ
ಮೇ3 ರ ತನಕ ಈ ಏಳು ನಿಯಮಗಳನ್ನು ಪಾಲಿಸಿ, ರಾಷ್ಟ್ರವನ್ನು ಜಾಗೃತವಾಗಿರಿ.

English summary
PM Modi seeks 'saat baaton mein saath' support in 7 things asked public to have respect for coronafighters - doctors, police and those involved in cleaning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X