ಸೆಲ್ಫಿ ವಿಡಿಯೋ ವೈರಲ್ ಬೆನ್ನಲ್ಲೇ 'ಥ್ಯಾಂಕ್ಯೂ ಫ್ರೆಂಡ್ಸ್' ಎಂದ ಪ್ರಧಾನಿ ಮೋದಿ: ರಾತ್ರೋರಾತ್ರಿ 11 ಲಕ್ಷ ಫಾಲೋವರ್ಸ್ ಏರಿಕೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಇಂದು ಹೊಸ ದಾಖಲೆ ಸೃಷ್ಟಿಸಿದ್ದಾರೆ. ದೇಶದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಯುವಜನತೆಯನ್ನ ಉದ್ದೇಶಿಸಿ ಅವರು ಹಂಚಿಕೊಂಡಿದ್ದ ಸೆಲ್ಫಿ ವಿಡಿಯೋ ಭಾರಿ ವೈರಲ್ ಆಗಿದೆ.

ಈ ವಿಡಿಯೋಗೆ ಸಿಕ್ಕ ಬೆಂಬಲಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಅವರು 'ಥ್ಯಾಂಕ್ಯೂ ಫ್ರೆಂಡ್ಸ್' ಎಂದು ಹೇಳುವ ಮತ್ತೊಂದು ವಿಡಿಯೋವನ್ನ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಮೊದಲ ವಿಡಿಯೋ ಪೋಸ್ಟ್ ಮಾಡಿದ ಕೇವಲ ಒಂದೇ ರಾತ್ರಿಯಲ್ಲಿ ಅವರ ಸಾಮಾಜಿಕ ಜಾಲತಾಣದ ಖಾತೆಗೆ ಬರೋಬ್ಬರಿ 11 ಲಕ್ಷಕ್ಕೂ ಹೆಚ್ಚು ಹೊಸ ಫಾಲೋವರ್ಸ್ ಸೇರ್ಪಡೆಯಾಗಿದ್ದಾರೆ. ಇದು ಸಾಮಾಜಿಕ ಜಾಲತಾಣ ಇತಿಹಾಸದಲ್ಲೇ ಒಂದು ದೊಡ್ಡ ದಾಖಲೆಯಾಗಿದೆ.

PM Modi

ಇತ್ತೀಚೆಗೆ ರಾಷ್ಟ್ರಮಟ್ಟದಲ್ಲಿ ನಡೆದ ನೀಟ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ತೀವ್ರ ಆಕ್ರೋಶ ಮೂಡಿಸಿತ್ತು. ಈ ಪ್ರತಿಭಟನೆಗಳು ಮತ್ತು ಯುವಕರ ಕಳವಳವನ್ನ ಅರಿತ ಪ್ರಧಾನಿ ನರೇಂದ್ರ ಮೋದಿ ಅವರು, ಗುರುವಾರ ತಡರಾತ್ರಿ ಖುದ್ದಾಗಿ ಒಂದು ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ಪೋಸ್ಟ್ ಮಾಡಿದ್ದರು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ನೇರವಾಗಿ ಯುವಜನತೆಗೆ ಭರವಸೆ ನೀಡಿದ್ದರು. ಈ ವಿಡಿಯೋವನ್ನು ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಯುವಕರು ವೀಕ್ಷಿಸಿ, ತಮ್ಮ ಬೆಂಬಲ ಸೂಚಿಸಿದ್ದರು. ಈ ಮೂಲಕ ಯುವ ಸಮುದಾಯದೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಸಾಧ್ಯವಾಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಯುವಕರ ಬೆಂಬಲವೇ ಸರ್ಕಾರದ ಅತಿದೊಡ್ಡ ಶಕ್ತಿ

ಯುವಜನತೆಯಿಂದ ವ್ಯಕ್ತವಾದ ಅಪಾರ ಬೆಂಬಲ ಹಾಗೂ ಸಕಾರಾತ್ಮಕ ಪ್ರತಿಕ್ರಿಯೆಗಳಿಗೆ ಧನ್ಯವಾದ ಅರ್ಪಿಸಲು ಎರಡನೇ ವಿಡಿಯೋ ಬಿಡುಗಡೆ ಮಾಡಿದ ಪ್ರಧಾನಿ, "ಪೇಪರ್ ಸೋರಿಕೆ ದಂಧೆಯ ವಿರುದ್ಧ ನಮ್ಮ ಸರ್ಕಾರ ತೆಗೆದುಕೊಳ್ಳಲಿರುವ ಕಠಿಣ ಕ್ರಮಗಳಿಗೆ ದೇಶದ ಯುವ ಪೀಳಿಗೆ ತೋರುತ್ತಿರುವ ಬೆಂಬಲವೇ ನಮಗೆ ದೊಡ್ಡ ಶಕ್ತಿ. ನಿಮ್ಮ ಪ್ರತಿಯೊಂದು ಅಭಿಪ್ರಾಯಗಳನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ," ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಪರೀಕ್ಷಾ ವ್ಯವಸ್ಥೆಯನ್ನ ಸಂಪೂರ್ಣ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ರೂಪಿಸಲು ಯುವಕರೊಂದಿಗೆ ಸಂವಾದ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ. ಯುವಕರ ಧ್ವನಿಗೆ ಕೇಂದ್ರ ಸರ್ಕಾರ ಸದಾ ಸ್ಪಂದಿಸುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಅವರು ರವಾನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹೊಸ ದಾಖಲೆ ಬರೆದ ಪಿಎಂ ಮೋದಿ ವಿಡಿಯೋ

ತಡರಾತ್ರಿ ಯುವಕರೊಂದಿಗೆ ನೇರ ಸಂಪರ್ಕ ಸಾಧಿಸಿದ ಪ್ರಧಾನಿ ಮೋದಿ ಅವರ ಕಾರ್ಯವೈಖರಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ 11 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆಯಾಗಿರುವುದು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನ ಮತ್ತೊಮ್ಮೆ ಸಾಬೀತುಪಡಿಸಿದೆ. ದೇಶದ ಮೂಲೆ ಮೂಲೆಗಳಿಂದ ಯುವಕರು ಕಮೆಂಟ್ ಹಾಗೂ ಸಂದೇಶಗಳ ಮೂಲಕ ನೀಡಿದ ಅಮೂಲ್ಯ ಸಲಹೆಗಳನ್ನ ತಾವು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಾನೂನು ಕ್ರಮ

ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅತ್ಯಂತ ಕಠಿಣ ಹೆಜ್ಜೆಗಳನ್ನ ಇಟ್ಟಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನ ತಡೆಯಲು ಹೊಸ ತಿದ್ದುಪಡಿ ಮಸೂದೆಯನ್ನ ಜಾರಿಗೆ ತರಲಾಗುತ್ತಿದ್ದು, ಇದರಲ್ಲಿ ಅಕ್ರಮ ಎಸಗುವ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಕೋಟಿ ರೂಪಾಯಿ ದಂಡ ವಿಧಿಸುವ ಕಟ್ಟುನಿಟ್ಟಿನ ನಿಯಮವನ್ನ ಅಳವಡಿಸಲಾಗಿದೆ. ಇದರ ಜೊತೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಶೀಘ್ರವಾಗಿ ವಿಚಾರಣೆ ನಡೆಸಿ, ತ್ವರಿತ ತೀರ್ಪು ನೀಡುವ ವ್ಯವಸ್ಥೆಯನ್ನೂ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+