ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಮಾತುಕತೆ

|
Google Oneindia Kannada News

ನವದೆಹಲಿ, ಮೇ 08: ಕೊರೊನಾ ಉಲ್ಬಣಿಸುತ್ತಿರುವ ಕುರಿತು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ಕೊರೊನ ಸ್ಥಿತಿ ಕುರಿತ ಮಾಹಿತಿ ಪಡೆದಿಕೊಂಡರು.

ಅಬ್ಬಬ್ಬಾ..! ಮತ್ತೆ 4 ಲಕ್ಷ ಗಡಿ ದಾಟಿದ ದೈನಂದಿನ ಕೊರೊನಾ ಸಂಖ್ಯೆಅಬ್ಬಬ್ಬಾ..! ಮತ್ತೆ 4 ಲಕ್ಷ ಗಡಿ ದಾಟಿದ ದೈನಂದಿನ ಕೊರೊನಾ ಸಂಖ್ಯೆ

ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಮಹಾರಾಷ್ಟ್ರವು ಹೆಚ್ಚು ಪರಿಣಾಮ ಬೀರಿದ ರಾಜ್ಯವಾಗಿದೆ. ಮುಂಬೈ ಸೇರಿದಂತೆ ಅದರ ಕೆಲವು ನಗರಗಳಲ್ಲಿ ಕೆಲಮಟ್ಟಿಗೆ ಸುಧಾರಣೆ ಕಂಡಿದ್ದರೂ, ರಾಜ್ಯದ ಅನೇಕ ಭಾಗಗಳಲ್ಲಿನ ಪರಿಸ್ಥಿತಿ ಕಳವಳಕಾರಿಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 54,000 ಹೊಸ ಕೊರೊನ ಪ್ರಕರಣಗಳು ದಾಖಲಾಗಿವೆ.

PM Modi Speaks To CMs Of Maharashtra, MP, Himachal, TN On Covid Situation

ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೋದಿಗೆ ರಾಜ್ಯದಲ್ಲಿನ ಚಿತ್ರಣ ನೀಡಿದರು. ಸೋಂಕು ಪ್ರಕರಣ ಕಡಿಮೆಯಾಗುತ್ತಿರುವ ಬಗ್ಗೆ ಮತ್ತು ಶೀಘ್ರವಾಗಿ ಚೇತರಿಕೆ ಪ್ರಮಾಣ ಹೆಚ್ಚಿಸುವ ಬಗ್ಗೆ ಮಾಹಿತಿ ನೀಡಿದರು.

ಇದರ ಜೊತೆಗೆ ಕೊರೋನಾ ಭಾದಿತ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ಸಹಾಯ ಮಾಡುವ ಭರವಸೆ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಿಶೇಷವೆಂದರೆ, ಮೋದಿಯವರು ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಲಸಿಕೆಗಾಗಿ ಪ್ರತ್ಯೇಕ ಅಪ್ಲಿಕೇಷನ್ ಅಭಿವೃದ್ಧಿಪಡಿಸಲು ಅನುಮತಿ ಕೋರಿ ಪ್ರಧಾನಿ ಮೋದಿ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೇಂದ್ರಕ್ಕೆ ಪತ್ರ ಬರೆದ ದಿನವೇ ಅವರಿಗೆ ಕರೆ ಮಾಡಿ ಮಾತನಾಡಿದರು.

English summary
Prime Minister Narendra Modi on Saturday spoke to chief ministers of Maharashtra, Madhya Pradesh, Himachal Pradesh and Tamil Nadu on the COVID-19 situation in their states, government sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X