ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೇಟಿಯಾಗಿ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?
ನವದೆಹಲಿ, ಜೂನ್ 13: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ಗಾಯಗೊಂಡವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ರಮೇಶ್ ವಿಶ್ವಾಸ್ ಅವರನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯವನ್ನ ವಿಚಾರಿದ್ದಾರೆ. ಅಲ್ಲದೇ ಘಟನೆ ಕುರಿತು ರಮೇಶ್ ವಿಶ್ವಾಸ್ ಜೊತಗೆ ಮೋದಿ ಮಾತನಾಡಿದ್ದಾರೆ.
ಅಹಮದಾಬಾದ್ ವಿಮಾನ ಅಪಘಾತದಲ್ಲಿ ಗಾಯಾಳುಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಸಿವಿಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಿದ್ದಾರೆ. ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 241 ಜನರು ಸಾವನ್ನಪ್ಪಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಅಪಘಾತ ಸ್ಥಳಕ್ಕೆ ಭೇಟಿ ನೀಡಿರುವ ಅವರು, ವಿನಾಶದ ದೃಶ್ಯವು ದುಃಖಕರವಾಗಿದೆ. ನಂತರ ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿಯಾದೆ. ಈ ಊಹಿಸಲಾಗದ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಾವು ಯಾವಾಗಲೂ ಇರುತ್ತೇವೆ ಎಂದು ಮೋದಿ ಅವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಗುಜರಾತಿನ ಅಹ್ಮದಾಬಾದ್ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಸೇರಿದಂತೆ 240ಕ್ಕೂ ಅಧಿಕ ಮಂದಿ ಸಾವಿಗೀಡಾದ ಸುದ್ದಿ ಕೇಳಿ ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಬಂಧುಮಿತ್ರರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ಜನರ ನೋವು - ಸಂಕಟ ಕಂಡು ಮನಸ್ಸು ಮಮ್ಮಲ ಮರುಗುತ್ತಿದೆ. ಈ ನೋವಿನ ಘಳಿಗೆಯಲ್ಲಿ ಇಡೀ ದೇಶ ಅವರ ಜೊತೆಗಿದೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಉನ್ನತ ಮಟ್ಟದ ತನಿಖೆ ನಡೆಸಿ, ಘಟನೆಗೆ ಕಾರಣಗಳನ್ನು ಪತ್ತೆಮಾಡಿ, ಮತ್ತೆಂದೂ ಇಂತಹ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಆದ್ಯತೆ ಮೇರೆಗೆ ಮಾಡಬೇಕು. ವಿಮಾನ ದುರಂತದಲ್ಲಿ ನೊಂದ ಜೀವಗಳಿಗೆ ಮತ್ತೊಮ್ಮೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.












Click it and Unblock the Notifications