ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ

|
Google Oneindia Kannada News

ನವದೆಹಲಿ, ಮಾರ್ಚ್ 15: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 17 ರಂದು ಸಭೆ ನಡೆಸಲಿದ್ದಾರೆ.

ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದ ಕೆಲವೆಡೆ ಭಾಗಶಃ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕುರಿತು ತಜ್ಞರ ಜತೆ ಸಿಎಂ ಯಡಿಯೂರಪ್ಪ ಸಭೆ: ಪ್ರಮುಖಾಂಶಗಳುರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕುರಿತು ತಜ್ಞರ ಜತೆ ಸಿಎಂ ಯಡಿಯೂರಪ್ಪ ಸಭೆ: ಪ್ರಮುಖಾಂಶಗಳು

ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬಹುದಾದ ಕ್ರಮಗಲು ಹಾಗೂ ಕೊರೊನಾ ಅಲೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವ ಕುರಿತು ಪ್ರಧಾನಿ ಮೋದಿ ದೇಶದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

 PM Modi To Meet Chief Ministers On March 17 To Discuss COVID-19 Measures

ಕರ್ನಾಟಕದಲ್ಲೂ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚಿಂತನೆ ನಡೆಸುತ್ತಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಗ್ಯ ತಜ್ಞರ ಜತೆ ಸಭೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಆರೋಗ್ಯ ತಜ್ಞರ ಜತೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೋವಿಡ್ ಪರಿಸ್ಥಿತಿ ಅವಲೋಕನ ನಡೆಸಿ ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ.

ತಜ್ಞರ ಅಭಿಪ್ರಾಯದಂತೆ 14 ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಬೀದರ್ ಕಲಬುರಗಿ, ಬೆಂಗಳೂರುಗ್ರಾಮಾಂತರ ಉಡುಪಿ ತುಮಕೂರು,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಕೋವಿಡ್ ಎರಡನೆ ಅಲೆಯ ಭೀತಿಗೆ ಲಸಿಕೆ ಕಾರ್ಯಕ್ರಮ ಹೆಚ್ಚಳ ಮಾಡಬೇಕಿದೆ ಎಂದರು.

ಸಭೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಆರ್ ಟಿಪಿಸಿಆರ್ ಟೆಸ್ಟ್ , ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ದಂಡ ಹೆಚ್ಚಳ ಹಾಗೂ ಲಸಿಕೆಯನ್ನು ಇನ್ನಷ್ಟು ಹೆಚ್ಚಿಸುವುದು ಸೇರಿದಂತೆ ಇತರೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

English summary
Prime Minister Narendra Modi will hold a meeting with State Chief Ministers via video conference on Wednesday, over growing cases of COVID-19 in the country and the ongoing vaccination drive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X