ಅಧಿವೇಶನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ನಡೆ ಖಂಡಿಸಿ ಮೋದಿ ಉಪವಾಸ
ಕೋಲ್ಕತ್ತಾ, ಏಪ್ರಿಲ್ 11: ಬಜೆಟ್ ಅಧಿವೇಶನಕ್ಕೆ ಸಂಪೂರ್ಣವಾಗಿ ಅಡ್ಡಿಪಡಿಸಿ, ಅಧಿವೇಶನ ನಡೆಯದಂತೆ ಮಾಡಿದ ವಿರೋಧ ಪಕ್ಷಗಳ ಕ್ರಮವನ್ನು ಖಂಡಿಸಿ ಏಪ್ರಿಲ್ 12 ರಂದು ಒಂದು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಪ್ರಧಾನಿ ಮೋದಿಯವರೊಂದಿಗೆ ಬಿಜೆಪಿಯ ಹಲವು ಮುಖಂಡರೂ ಜೊತೆಯಾಗಲಿದ್ದಾರೆ. ಏ.12 ರಂದು ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಹ ಹುಬ್ಬಳ್ಳಿಯಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಧರಣಿ ಕೂರಲಿದ್ದಾರೆ.

ಇದಕ್ಕೂ ಮುನ್ನ, ಕೇಂದ್ರ ಸರ್ಕಾರ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟು ಮಾಡುತ್ತಿದದೆ ಎಂದು ಆರೋಪಿಸಿ ಏ.9 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಒಂದು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು.












Click it and Unblock the Notifications