ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಂಧಿನಗರದಿಂದಲೇ ರಾಷ್ಟ್ರೀಯ ಗಂಗಾ ಕೌನ್ಸಿಲ್ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

|
Google Oneindia Kannada News

ಗಾಂಧಿನಗರ, ಡಿಸೆಂಬರ್ 30: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಕೋಲ್ಕತ್ತಾದಲ್ಲಿ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರೀಯ ಗಂಗಾ ಕೌನ್ಸಿಲ್ (NGC) ಸಭೆ ನಡೆಸಿದರು.

ಸಭೆಯಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಲ್ಲದೆ ಕೌನ್ಸಿಲ್ ಸದಸ್ಯರಾಗಿರುವ ಕೇಂದ್ರ ಜಲಶಕ್ತಿ ಸಚಿವರು ಮತ್ತು ಇತರ ಕೇಂದ್ರ ಸಚಿವರು ಭಾಗವಹಿಸಿದ್ದರು.

ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬದಲಿಗೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಉಪಸ್ಥಿತರಿದ್ದರು.

ಸರಳವಾಗಿ, ಕೆಲವೇ ಗಂಟೆಗಳಲ್ಲಿ ಮುಗಿದ ದೇಶದ ಪ್ರಧಾನಿ ಮೋದಿ ತಾಯಿಯ ಅಂತ್ಯಕ್ರಿಯೆಸರಳವಾಗಿ, ಕೆಲವೇ ಗಂಟೆಗಳಲ್ಲಿ ಮುಗಿದ ದೇಶದ ಪ್ರಧಾನಿ ಮೋದಿ ತಾಯಿಯ ಅಂತ್ಯಕ್ರಿಯೆ

ಇಂದು ಮುಂಜಾನೆ ನಿಧನರಾದ ತಮ್ಮ ತಾಯಿ ಹೀರಾಬೆನ್ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ಪ್ರಧಾನ ಮಂತ್ರಿ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು.

PM Modi virtually chairs National Ganga Council meeting in Kolkata

ಪ್ರಧಾನಿ ಮೋದಿಯವರು ಭಾರತೀಯ ರೈಲ್ವೇಯ ವಿವಿಧ ಯೋಜನೆಗಳನ್ನು ವರ್ಚುವಲ್‌ ಆಗಿ ಉದ್ಘಾಟಿಸಿದರು.

ಗಂಗಾ ನದಿ ಮತ್ತು ಅದರ ಉಪನದಿಗಳ ಮಾಲಿನ್ಯ ತಡೆಗಟ್ಟುವಿಕೆ ಮತ್ತು ಪುನರುಜ್ಜೀವನದ ಮೇಲ್ವಿಚಾರಣೆಯ ಒಟ್ಟಾರೆ ಜವಾಬ್ದಾರಿಯನ್ನು ರಾಷ್ಟ್ರೀಯ ಗಂಗಾ ಕೌನ್ಸಿಲ್‌ಗೆ ನೀಡಲಾಗಿದೆ.

ನಮಾಮಿ ಗಂಗೆ ಕಾರ್ಯಕ್ರಮವು ಸಂಯೋಜಿತ ಸಂರಕ್ಷಣಾ ಮಿಷನ್ ಆಗಿದ್ದು, ಕೇಂದ್ರ ಸರ್ಕಾರವು ಜೂನ್ 2014 ರಲ್ಲಿ 'ಪ್ರಧಾನ ಕಾರ್ಯಕ್ರಮ' ಎಂದು ಅನುಮೋದಿಸಿತ್ತು. ಗಂಗಾನದಿಯ ಮಾಲಿನ್ಯ, ಸಂರಕ್ಷಣೆ ಮತ್ತು ಪುನಶ್ಚೇತನದ ಉದ್ದೇಶಗಳನ್ನು ಈಡೇರಿಸಲು 20,000 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ತೆಗೆದಿರಿಸಿದೆ.

ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ (ಎನ್‌ಎಂಸಿಜಿ) ಕಾರ್ಯಕಾರಿ ಸಮಿತಿಯ 46 ನೇ ಸಭೆಯಲ್ಲಿ, ಗಂಗಾ ಜಲಾನಯನ ಪ್ರದೇಶದಲ್ಲಿ ಒಳಚರಂಡಿ ಮೂಲಸೌಕರ್ಯ ಅಭಿವೃದ್ಧಿಗೆ ಸುಮಾರು 2,700 ರೂ.ಗಳ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಅನುಮೋದಿತ ಯೋಜನೆಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಒಳಚರಂಡಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯು 2,700 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ್ದಾಗಿದೆ ಎಂದು ಜಲಶಕ್ತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

English summary
Prime Minister Narendra Modi on Friday chaired the second meeting of the National Ganga Council (NGC) meeting in Kolkata via video conferencing
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X