Modi's Elephant Safari: ಆನೆ ಮೇಲೆ ಸವಾರಿ ಮಾಡಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ (ಮಾರ್ಚ್ 9) ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ (Assam's Kaziranga National Park) ಮತ್ತು ಹುಲಿ ಸಂರಕ್ಷಿತ ಪ್ರದೇಶದೊಳಗೆ ಆನೆ ಸಫಾರಿ ಮತ್ತು ಜೀಪ್ ಸವಾರಿ ಮಾಡಿದರು.
ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಚೊಚ್ಚಲ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಉದ್ಯಾನವನದ ಸೆಂಟ್ರಲ್ ಕೊಹೊರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿಯನ್ನು ಮಾಡಿದರು. ನಂತರ ಅದೇ ವ್ಯಾಪ್ತಿಯಲ್ಲಿ ಜೀಪ್ ಸಫಾರಿ ಕೂಡ ನಡೆಸಿದರು.

ಅವರೊಂದಿಗೆ ಉದ್ಯಾನದ ನಿರ್ದೇಶಕಿ ಸೋನಾಲಿ ಘೋಷ್ ಮತ್ತು ಇತರ ಹಿರಿಯ ಅರಣ್ಯ ಅಧಿಕಾರಿಗಳು ಇದ್ದರು. ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಶುಕ್ರವಾರ (ಮಾರ್ಚ್ 8) ಸಂಜೆ ಕಾಜಿರಂಗಕ್ಕೆ ಮೋದಿ ಅವರು ಆಗಮಿಸಿದ್ದಾರೆ.
#WATCH | Prime Minister Narendra Modi visited Kaziranga National Park in Assam today. The PM also took an elephant safari here. pic.twitter.com/Kck92SKIhp
— ANI (@ANI) March 9, 2024
ಅಸ್ಸಾಂನಲ್ಲಿ ವಿವಿಧ ಯೋಜನೆಗಳ ಪ್ರಾರಂಭ
ಮೋದಿ ಅವರು ಇಂದು ಮಧ್ಯಾಹ್ನ ಜೋರ್ಹತ್‌ನಲ್ಲಿ ಪೌರಾಣಿಕ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 'ಶೌರ್ಯದ ಪ್ರತಿಮೆ'ಯನ್ನು ಉದ್ಘಾಟಿಸಲಿದ್ದಾರೆ. ನಂತರ ಜೋರ್ಹತ್ ಜಿಲ್ಲೆಯ ಮೆಲೆಂಗ್ ಮೆಟೆಲಿ ಪೋಥಾರ್‌ಗೆ ತೆರಳಲಿರುವ ಪ್ರಧಾನಿ, ಅಲ್ಲಿ ಸುಮಾರು 18,000 ಕೋಟಿ ರೂಪಾಯಿ ಮೌಲ್ಯದ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಿಯವರು ಇದೇ ಸ್ಥಳದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅಸ್ಸಾಂನಲ್ಲಿ ಬಹು ಯೋಜನೆಗಳ ಉದ್ಘಾಟನೆ
ಜೋರ್ಹತ್‌ನಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರೋಗ್ಯ, ತೈಲ ಮತ್ತು ಅನಿಲ, ರೈಲು ಮತ್ತು ವಸತಿ ಕ್ಷೇತ್ರಗಳನ್ನು ಬಲಪಡಿಸುವ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡುವ ಮೂಲಕ ಮತ್ತು ಅಡಿಪಾಯ ಹಾಕಲಿದ್ದಾರೆ.
ಪ್ರಧಾನಮಂತ್ರಿಯವರು ಈಶಾನ್ಯ ಪ್ರದೇಶಕ್ಕಾಗಿ ಪ್ರಧಾನ ಮಂತ್ರಿಗಳ ಅಭಿವೃದ್ಧಿ ಉಪಕ್ರಮ (PM-DevINE) ಯೋಜನೆಯಡಿಯಲ್ಲಿ ಶಿವಸಾಗರದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು ಗುವಾಹಟಿಯಲ್ಲಿ ಹೆಮಟೋ-ಲಿಂಫಾಯಿಡ್ ಕೇಂದ್ರ ಸೇರಿದಂತೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಜೊಎತೆಗ ಮೋದಿ ಅವರು ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳ ಅಡಿಗಲ್ಲು ಹಾಕಲಿದ್ದಾರೆ. ತಿನ್ಸುಕಿಯಾದಲ್ಲಿ ಹೊಸ ವೈದ್ಯಕೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಂತಹ ಪ್ರಮುಖ ಯೋಜನೆಗಳನ್ನು ಪ್ರಧಾನಮಂತ್ರಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಹೀಗೆ ಪ್ರಧಾನಮಂತ್ರಿಯವರು ಅಸ್ಸಾಂನಲ್ಲಿ 1300 ಕೋಟಿ ರೂ.ಗೂ ಹೆಚ್ಚು ಮೌಲ್ಯದ ರೈಲ್ವೇ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.











Click it and Unblock the Notifications