‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಕ್ಸಲರು & ಉಗ್ರರ ಕಾಟ ಹೆಚ್ಚುತ್ತೆ’

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಮಾಡಿ ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಛತ್ತೀಸ್‌ಗಢ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇಂದು ಮೊದಲ ಹಂತದ ಮತದಾನ ನಡೆದಿದೆ. ನವೆಂಬರ್ 17ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಛತ್ತೀಸ್‌ಗಢದ ನೆಲದಲ್ಲಿ ನಿಂತು ಕಾಂಗ್ರೆಸ್ ವಿರುದ್ಧ ಹೇಳಿದ್ದೇನು ಗೊತ್ತಾ?

ಮೊನ್ನೆ ಮೊನ್ನೆ ತಾನೆ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕದ ಕಾಂಗ್ರೆಸ್ ವಿರುದ್ಧವೂ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಈ ಮೂಲಕ ಕರ್ನಾಟಕದಲ್ಲಿ ಅಧಿಕಾರ ಪಡೆದ ಕಾಂಗ್ರೆಸ್, ಸಿಎಂ ಸ್ಥಾನಕ್ಕೆ ಕಿತ್ತಾಡುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ ಭ್ರಷ್ಟಾಚಾರವು ತಾಂಡವ ಆಡುತ್ತಿದೆ ಎಂದು ಪಿಎಂ ಮೋದಿ, ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.

pm-modi-vs-congress

ಹೀಗೆ ಪ್ರಧಾನಿ ಮೋದಿ ಅವರು ಹಾಗೂ ಸಿಎಂ ಸಿದ್ದರಾಮಯ್ಯರ ಮಧ್ಯೆ ಫೈಟ್ ಜೋರಾದ ಸಮಯದಲ್ಲಿ. ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದರು. ಇಷ್ಟೆಲ್ಲಾ ಘಟನೆ ಬೆನ್ನಲ್ಲೇ, ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಹೊರಿಸಿದ್ದಾರೆ.

ಕಾಂಗ್ರೆಸ್ ಬಂದರೆ ಉಗ್ರರಿಗೆ ಧೈರ್ಯ?

ಹೌದು, ಹೀಗೆ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರು. ಛತ್ತೀಸ್‌ಗಢದಲ್ಲಿ 2ನೇ ಹಂತದಲ್ಲಿ ನ. 17ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಇದೀಗ ಪ್ರಧಾನಿ ಮೋದಿ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷ ಮತ್ತು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಮಾತನಾಡುವಾಗ ಕಾಂಗ್ರೆಸ್ ಬಗ್ಗೆ ವಿಷಯ ಪ್ರಸ್ತಾಪಿಸಿದ್ರು. ಅದೇ ವೇಳೆ ಕಾಂಗ್ರೆಸ್ ವಿರುದ್ಧ ನಕ್ಸಲ್ & ಉಗ್ರ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ನಕ್ಸಲ್ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ...

ಹೌದು ಪ್ರಧಾನಿ ಮೋದಿ ಅವರು ಈಗ, 'ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶದಲ್ಲಿ ಭಯೋತ್ಪಾದಕರು ಮತ್ತು ನಕ್ಸಲೀಯರ ಧೈರ್ಯ ಹೆಚ್ಚಾಗುತ್ತದೆ.' ಎಂದು ಆರೋಪ ಮಾಡಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ತಮ್ಮ ಆರೋಪದ ಪಟ್ಟಿ ಮುಂದುವರಿಸಿದ ಪ್ರಧಾನಿ, 'ನಕ್ಸಲ್ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ.

ಇತ್ತೀಚಿನ ದಿನಗಳಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ನಮ್ಮಿಂದ ದೂರವಾಗಿದ್ದಾರೆ. ಕೆಲ ದಿನ ಹಿಂದ‍ಷ್ಟೇ ನಮ್ಮ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ' ಎಂದು ಆರೋಪಿಸಿದ್ದಾರೆ. ಅಲ್ಲದೆ ಇದೇ ವೇಳೆ ಕಾಂಗ್ರೆಸ್ ವಿರುದ್ಧ ಇನ್ನೂ ಹಲವು ಗಂಭೀರ ಆರೋಪ ಮಾಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ.

pm-modi-vs-congress

ಛತ್ತೀಸ್‌ಗಢ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತಾ?

ಒಟ್ನಲ್ಲಿ ಛತ್ತೀಸ್‌ಗಢ ರಾಜ್ಯದಲ್ಲಿ ನಕ್ಸಲ್ ಹಾವಳಿ ಹೆಚ್ಚಾಗಿದ್ದು, ಇದು ದೇಶೀಯ ಮಟ್ಟದಲ್ಲಿ ಕೂಡ ದೊಡ್ಡ ತಲೆನೋವು ತಂದೊಡ್ಡಿದೆ. ಅದರಲ್ಲೂ ಛತ್ತೀಸ್‌ಗಢದ ಸ್ಥಳೀಯರಿಗೆ ಪದೇ ಪದೆ ಈ ನಕ್ಸಲ್ ದಾಳಿ ಭಯ ಕಾಡ್ತಿದೆ. ಹೀಗಿದ್ದಾಗ ಬಿಜೆಪಿ ಕೂಡ ಅಖಾಡ ಪ್ರವೇಶ ಮಾಡಿ, ಹಾಲಿ ಅಧಿಕಾರದಲ್ಲಿ ಇರುವ ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಲು ಸಜ್ಜಾಗಿದೆ.

ಹೀಗಾಗಿ ಖುದ್ದಾಗಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಕೇಂದ್ರ ನಾಯಕರ ದಂಡೇ ಈಗ ಛತ್ತೀಸ್‌ಗಢದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಸಮೀಕ್ಷೆಗಳು ಹೇಳುವ ರೀತಿ, ಈ ಬಾರಿ ಛತ್ತೀಸ್‌ಗಢ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲ್ಲಬಹುದು ಎನ್ನಲಾಗಿದೆ.

ಇನ್ನು ಪ್ರಧಾನಿ ಮೋದಿ ಇದೀಗ ಕಾಂಗ್ರೆಸ್ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಪರ & ವಿರೋಧದ ಚರ್ಚೆ ಜೋರಾಗಿದೆ. ಹಾಗೆ ಪ್ರಧಾನಿ ಮೋದಿ ನೀಡಿದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೂಲಕ ಚುನಾವಣೆ ಮುಗಿಯುವ ತನಕವೂ ಈ ತಿಕ್ಕಾಟ ಮುಂದುವರಿಯುವುದು ಪಕ್ಕಾ ಅಂತಿದ್ದಾರೆ ಸೋಷಿಯಲ್ ಮೀಡಿಯಾ ಮಂದಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+