ನೀಟ್ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ದೆಹಲಿ ಏರ್‌ಪೋರ್ಟ್‌ನಲ್ಲೇ ಕಾದು ಕುಳಿತ ಪ್ರಧಾನಿ ಮೋದಿ

ಮೇ 3ರಂದು ನಡೆದಿದ್ದ ನೀಟ್-ಯುಜಿ (NEET-UG 2026) ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿತ್ತು. ಈ ಕಾರಣಕ್ಕಾಗಿ ಇಂದು (ಜೂನ್ 21) ದೇಶಾದ್ಯಂತ ಮರುಪರೀಕ್ಷೆ ನಿಗದಿಯಾಗಿತ್ತು. ಬರೋಬ್ಬರಿ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ತಮ್ಮ ವಿವಿಐಪಿ ಮೂವ್‌ಮೆಂಟ್‌ನಿಂದಾಗಿ ಯಾವುದೇ ಟ್ರಾಫಿಕ್ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಮಾನ ನಿಲ್ದಾಣದಲ್ಲೇ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಕಾಯುವ ಮೂಲಕ ಗಮನ ಸೆಳೆದಿದ್ದಾರೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದ ಎರಡು ದಿನಗಳ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಅವರು ಭಾನುವಾರ ಮಧ್ಯಾಹ್ನ 1:15ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಾಮಾನ್ಯವಾಗಿ ಪ್ರಧಾನಿ ಬಂದ ತಕ್ಷಣ ಅವರ ಬೆಂಗಾವಲು ವಾಹನಗಳು ಸಾಗಲು ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಆದರೆ, ಮಧ್ಯಾಹ್ನ 2 ಗಂಟೆಗೆ ನೀಟ್ ಪರೀಕ್ಷೆ ಆರಂಭವಾಗಲಿದ್ದರಿಂದ, ಆ ಸಮಯದಲ್ಲಿ ತಾವು ವಿಮಾನ ನಿಲ್ದಾಣದಿಂದ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಹೊರಟರೆ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಮೋದಿ ನಿರ್ಧರಿಸಿದರು.

PM Modi

ಹೀಗಾಗಿ, ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ ಪರೀಕ್ಷಾ ಕೇಂದ್ರಗಳನ್ನು ತಲುಪಲಿ ಎಂಬ ಉದ್ದೇಶದಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವರು ವಿಮಾನ ನಿಲ್ದಾಣದ ಆವರಣದಿಂದ ಹೊರಡದೆ ಅಲ್ಲೇ ಕಾಯ್ದರು. ಪ್ರಧಾನಿಯವರ ಈ ನಿರ್ಧಾರಕ್ಕೆ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಸೇರಿದಂತೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಟ್ರಾಫಿಕ್ ಜಾಮ್‌ನಿಂದ ನೀಟ್ ಪರೀಕ್ಷೆ ಮಿಸ್: ಗೇಟ್ ಬಳಿ ವಿದ್ಯಾರ್ಥಿನಿಯರ ಕಣ್ಣೀರು
ಬೆಂಗಳೂರು: ಟ್ರಾಫಿಕ್ ಜಾಮ್‌ನಿಂದ ನೀಟ್ ಪರೀಕ್ಷೆ ಮಿಸ್: ಗೇಟ್ ಬಳಿ ವಿದ್ಯಾರ್ಥಿನಿಯರ ಕಣ್ಣೀರು

ದೇಶಾದ್ಯಂತ ಬಿಗಿ ಭದ್ರತೆಯಲ್ಲಿ ನೀಟ್ ಮರುಪರೀಕ್ಷೆ

ಪ್ರಶ್ನೆ ಪತ್ರಿಕೆ ಸೋರಿಕೆಯ ಮುಖಭಂಗದ ನಂತರ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA), ಈ ಬಾರಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಬಿಗಿಯಾಗಿ ನಡೆಸಲು ಅಭೂತಪೂರ್ವ ಭದ್ರತಾ ಕ್ರಮಗಳನ್ನು ಕೈಗೊಂಡಿತ್ತು. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, ಎಲೆಕ್ಟ್ರಾನಿಕ್ ಉಪಕರಣಗಳ ದುರ್ಬಳಕೆ ತಡೆಯಲು ಜಾಮರ್‌ಗಳನ್ನು ಅಳವಡಿಸಲಾಗಿತ್ತು.

ಪರೀಕ್ಷಾರ್ಥಿಗಳ ತಪಾಸಣೆಗಾಗಿ 38,795ಕ್ಕೂ ಹೆಚ್ಚು ಸಿಬ್ಬಂದಿ, ಮುಖದ ಗುರುತು ಪತ್ತೆಹಚ್ಚುವ ಬಯೋಮೆಟ್ರಿಕ್ ಪ್ರಕ್ರಿಯೆಗಾಗಿ 48,448 ಸಿಬ್ಬಂದಿ ಹಾಗೂ ಸುಮಾರು 6,700 ವೀಕ್ಷಕರನ್ನು ನಿಯೋಜಿಸಲಾಗಿತ್ತು. ಗೌಪ್ಯ ಪರೀಕ್ಷಾ ಸಾಮಗ್ರಿಗಳನ್ನು ಬ್ಯಾಂಕ್‌ಗಳಿಂದ ಸುರಕ್ಷಿತವಾಗಿ ಸಾಗಿಸಲು ಸ್ಥಳೀಯ ಪೊಲೀಸ್, ಅರೆಸೇನಾ ಪಡೆ, ಭಾರತೀಯ ವಾಯುಪಡೆ ಹಾಗೂ ಅಂಚೆ ಇಲಾಖೆಯ ಬೆಂಬಲ ಪಡೆಯಲಾಗಿದೆ. ಎನ್‌ಟಿಎ ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಒಆರ್‌ಎಸ್ ದ್ರಾವಣ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಿತ್ತು. ಪರೀಕ್ಷಾ ಕೇಂದ್ರದ ಹೊರಗೆ ಪೋಷಕರು ಕುಳಿತುಕೊಳ್ಳಲು ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ಎಡಗೈ ಅಭ್ಯರ್ಥಿಗಳಿಗೆ ಪೂರಕವಾದ ಸೀಟಿಂಗ್ ವ್ಯವಸ್ಥೆ ಮತ್ತು ಹೆಚ್ಚುವರಿ ರಫ್ ಶೀಟ್‌ಗಳನ್ನು ಕೊಠಡಿಗಳಲ್ಲಿ ಒದಗಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+