ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆತಂಕ

ದೇಶದಲ್ಲಿ ಹೆಚ್ಚಾಗುತ್ತಿರುವ ಬೊಜ್ಜಿನ ಸಮಸ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ವರದಿಯೊಂದನ್ನು ಉಲ್ಲೇಖಿಸಿ ಶುಕ್ರವಾರ ಮಾತನಾಡಿದ ಅವರು, ಸಮಸ್ಯೆಯ ತೀವ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಜನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದ್ದಾರೆ. 2050ರ ವೇಳೆಗೆ ಭಾರತದಲ್ಲಿ ಸುಮಾರು 44 ಕೋಟಿ ಜನ ಬೊಜ್ಜಿನ ಸಮಸ್ಯೆ ಹೊಂದುತ್ತಾರೆ ಎನ್ನುವ ವರದಿ ಆತಂಕಕ್ಕೆ ಕಾರಣವಾಗಿದೆ.

44 ಕೋಟಿ ಜನ ಬೊಜ್ಜಿನ ಸಮಸ್ಯೆ ಹೊಂದುವುದು ಆತಂಕಕಾರಿ ಮತ್ತು ಆತಂಕಕಾರಿ ಎಂದು ಕರೆದ ಅವರು, ಆರೋಗ್ಯದ ಕಾಳಜಿ ವಹಿಸುವ ಮಹತ್ವವನ್ನು ಒತ್ತಿ ಹೇಳಿದರು. ಗುಜರಾತ್ ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ಡಿಯು ಕೇಂದ್ರಾಡಳಿತ ಪ್ರದೇಶಗಳಿಗೆ ಎರಡು ದಿನಗಳ ಕಾಲ ಭೇಟಿಯ ಮೊದಲ ದಿನ ಅವರು ಈ ಬಗ್ಗೆ ಮಾತನಾಡಿದ್ದಾರೆ.

PM Modi Warns of Rising Obesity Crisis Cites Report Predicting 44 Crore Cases by 2050

₹2,587 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಅವರು ಹಲವು ಯೋಜನೆಗಳಿಗೆ ಅಡಿಪಾಯ ಹಾಕುವ ಮೂಲಕ ಚಾಲನೆ ನೀಡಿದರು. ಸೂರತ್‌ನಲ್ಲಿ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನಕ್ಕೂ ಚಾಲನೆ ಕೊಟ್ಟರು. ದಾದ್ರಾ ಮತ್ತು ನಗರ ಹವೇಲಿಯ ಆಡಳಿತ ಕೇಂದ್ರವಾದ ಸಿಲ್ವಾಸ್ಸಾದಲ್ಲಿ ಮತ್ತು ನಂತರ ಸೂರತ್‌ನಲ್ಲಿ ನಡೆದ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ಆರೋಗ್ಯ ಸಮಸ್ಯೆಗಳಿಗೆ ಬೊಜ್ಜು ಪ್ರಮುಖ ಕಾರಣ ಎಂದು ಹೇಳಿದರು.

ಆರೋಗ್ಯ ಸುಧಾರಣೆಗೆ ಒತ್ತು ನೀಡಲು ಮನವಿ

ಭಾರತೀಯರು ದೈಹಿಕ ವ್ಯಾಯಾಮಗಳಲ್ಲಿ ತೊಡಗಿಸಿಕೊಂಡು, ಖಾದ್ಯ ತೈಲವನ್ನು 10% ಕಡಿಮೆ ಮಾಡುವ ಮೂಲಕ ಜನರು ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ಒತ್ತಾಯಿಸಿದರು.

"ನಮ್ಮ ಜೀವನಶೈಲಿಗೆ ಸಂಬಂಧಪಟ್ಟ ಕಾಯಿಲೆಗಳು ನಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ ಉಂಟು ಮಾಡುತ್ತಿವೆ. ಬೊಜ್ಜು ಅವುಗಳಲ್ಲಿ ದೊಡ್ಡ ಸಮಸ್ಯೆಯಾಗಿದೆ. ಹಲವು ಕಾಯಿಲೆಗಳಿಗೆ ಇದು ಮೂಲ ಕಾರಣವಾಗಿದೆ. ಇತ್ತೀಚಿನ ವರದಿಯಾ ಪ್ರಕಾರ 2050ರ ವೇಳೆಗೆ ದೇಶದಲ್ಲಿ 44 ಕೋಟಿ ಜನ ಬೊಜ್ಜಿನ ಸಮಸ್ಯೆಯಿಂದ ಬಳಲಬಹದು ಎಂದು ತಿಳಿಸಿದೆ, ಇದು ಅತ್ಯಂತ ದೊಡ್ಡ ಸಂಖ್ಯೆಯಾಗಿದ್ದು, ಭಯ ಹುಟ್ಟಿಸುತ್ತಿದೆ ಎಂದು ಹೇಳಿದ್ದಾರೆ.

ಸಂಶೋಧನೆಗಳ ವರದಿ ನಿಜವಾದರೆ 2050ರ ವೇಳೆಗೆ ದೇಶದಲ್ಲಿ ಪ್ರತಿ ಮೂವರಲ್ಲಿ ಒಬ್ಬರಿಗೆ ಬೊಜ್ಜಿನ ಸಮಸ್ಯೆ ಇರುತ್ತದೆ ಎಂದು ಮೋದಿ ಎಚ್ಚರಿಕೆ ಕೊಟ್ಟಿದ್ದಾರೆ. ಬೊಜ್ಜು ಜನರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟು ಮಾಡುತ್ತದೆ. ಇದನ್ನು ಪರಿಹರಿಸಲು ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.

ಎಲ್ಲರೂ ಅಡುಗೆ ಎಣ್ಣೆಯ ಸೇವನೆಯನ್ನು 10% ಕಡಿಮೆ ಮಾಡಬೇಕು ಎಂದು ನಾನು ಮನವಿ ಮಾಡುತ್ತೇನೆ. ಎಲ್ಲರೂ 10% ಎಣ್ಣೆಯನ್ನು ಕಡಿಮೆ ಖರೀದಿ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಬಯಸುತ್ತೇನೆ. ನಿಯಮಿತ ವ್ಯಾಯಾಮ, ಸೈಕ್ಲಿಂಗ್ ಕೂಡ ಬೊಜ್ಜಿನ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ ಎಂದು ಸಲಹೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+