ಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ತಯಾರಿಸಲಾದ ಜಾಕೆಟ್ ಧರಿಸಿದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿಗೆ ಆಗಮಿಸುವಾಗ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ಮಾಡಿದ ತೋಳಿಲ್ಲದ ಜಾಕೆಟ್ ಧರಿಸಿ ಬಂದಿದ್ದರು.
ಹೊಸದಿಲ್ಲಿ ಫೆಬ್ರವರಿ 7: ಮನುಷ್ಯನಿಂದ ಪರಿಸರಕ್ಕೆ ಹಾನಿ, ಪರಿಸರ ನಾಶ, ಜೀವ ಸಂಕುಲ ವಿನಾಶಕ್ಕೆ ಹಾದಿಯಾಗುತ್ತಿದೆ. ಹೀಗಾಗಿ ಪರಿಸರ ಸಂರಕ್ಷಣೆಗೆ ಮುಂದಾಗದಿದ್ದರೆ ಅಪಾಯ ಖಚಿತ. ಜೊತೆಗೆ ಪರಿಸರಕ್ಕೆ ಹಾನಿಯನ್ನುಂಟು ಮಾಡುವ ವಸ್ತುಗಳ ಬಳಕೆಯನ್ನ ತಪ್ಪಿಸುವುದು ಹಾಗೂ ಅದರ ಮರುಬಳಕೆ ಮಾಡುವುದು ಅತ್ಯಾವಶ್ಯಕವಾಗಿದೆ. ಹೀಗೆ ಮರುಬಳಕೆ ಮಾಡುವ ವಸ್ತುವಿನ ಜಾಕೆಟ್ ಧರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಇತರರಿಗೆ ಮಾದರಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿಗೆ ಆಗಮಿಸುವಾಗ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ಮಾಡಿದ ತೋಳಿಲ್ಲದ ಜಾಕೆಟ್ ಧರಿಸಿ ಬಂದಿದ್ದರು. ಬೆಳಿಗ್ಗೆ ರಾಜ್ಯಸಭೆಯಲ್ಲಿ ಕುಳಿತಿದ್ದಾಗ ಪ್ರಧಾನಿಯವರು ತಿಳಿ ನೀಲಿ ಬಣ್ಣದ "ಸದ್ರಿ" ಜಾಕೆಟ್ ಧರಿಸಿದ್ದರು. ಈ ಮೂಲಕ ಜನತೆಗೆ 'ಕಸದಿಂದ ರಸ' ಪರಿಕಲ್ಪನೆಯ ಸಂದೇಶ ಸಾರುವ ಪ್ರಯತ್ನ ಮಾಡಿದ್ದಾರೆ. ಮೋದಿ ಧರಿಸಿದ್ದ ಜಾಕೆಟ್ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ಮಾಡಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
🚨 PM Modi in Karnataka!
— Karthik Reddy 🇮🇳 (@bykarthikreddy) February 6, 2023
Indian oil corp presents 'Modi Jacket' to PM Modi made out of recycled PET Bottles.
More than 10 crore PET Bottles will be recycled to make sustainable garments to India Oil employees and Armed Forces!#IndiaEnergyWeek2023 pic.twitter.com/kSQVI7REk4
ಅಧಿಕಾರ ಬಂದ ಬಳಿಕ ಅವರು ಪರಿಸರ ರಕ್ಷಣೆಗೆ ಸ್ವಚ್ಚ ಭಾರತ ಅಭಿಯಾನವನ್ನು ಹಮ್ಮಿಕೊಂಡರು. ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ 'ಭಾರತ ಇಂಧನ ಸಪ್ತಾಹ-2023'ಕ್ಕೆ ಫೆಬ್ರುವರಿ 06ರಂದು ಪ್ರಧಾನಿ ಮೋದಿ ಚಾಲನೆ ನೀಡಿದರು. ಈ ವೇಳೆ ಇಂಡಿಯಾ ಎನರ್ಜಿ ವೀಕ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ಇಂಡಿಯಲ್ ಆಯಿಲ್ ಕಾರ್ಪೊರೇಷನ್ (ಐಒಸಿ) ಈ ಜಾಕೆಟ್ ಕಾಣಿಕೆಯಾಗಿ ನೀಡಿತ್ತು. ಐಒಸಿ ಉದ್ಯೋಗಿಗಳು ಮತ್ತು ಸಶಸ್ತ್ರ ಪಡೆಗಳಿಗೆ ಗಟ್ಟಿಮುಟ್ಟಾದ ಉಡುಪುಗಳನ್ನು ತಯಾರಿಸಲು 10 ಕೋಟಿಗೂ ಅಧಿಕ ಪಿಇಟಿ ಬಾಟಲಿಗಳನ್ನು ಮರುಬಳಕೆ ಮಾಡಲಾಗುತ್ತದೆ.

ಇಂಡಿಯನ್ ಆಯಿಲ್ ಈ ಸಮವಸ್ತ್ರಗಳನ್ನು ತನ್ನ ಚಿಲ್ಲರೆ ಗ್ರಾಹಕ ಸಿಬ್ಬಂದಿ ಹಾಗೂ ಎಲ್‌ಪಿಜಿ ಪೂರೈಕೆ ಸಿಬ್ಬಂದಿಗೆ ನೀಡುತ್ತಿದೆ. ಇಂಡಿಯನ್ ಆಯಿಲ್ ಗ್ರಾಹಕ ಸೇವಕರ ಪ್ರತಿ ಸಮವಸ್ತ್ರದ ಸೆಟ್ ಸುಮಾರು 28 ಪಿಇಟಿ ಬಾಟಲಿಗಳ ನವೀಕರಣ ಮಾಡುವ ಮೂಲಕ ತಯಾರಾಗುತ್ತದೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications