Watch Video: ಪ್ರಧಾನಿ ಮೋದಿ ಮನೆಗೆ ಹೊಸ ಅತಿಥಿ ಆಗಮನ: ಅಪ್ಪಿ ಮುದ್ದಾಡಿದ ವಿಡಿಯೋ ಇಲ್ಲಿದೆ ನೋಡಿ

ದೆಹಲಿ, ಸೆಪ್ಟೆಂಬರ್‌ 14: ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿ ಆಗಮಿಸಿದ್ದಾರೆ. ಅತಿಥಿ ಬೇರೆ ಯಾರೂ ಅಲ್ಲ. ಅದು ಕರು ಶನಿವಾರ (ಸೆಪ್ಟೆಂಬರ್ 14) ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಮಾಹಿತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಮೂಲಕ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸಕ್ಕೆ ಹೊಸ ಸದಸ್ಯೆ ಬಂದಿದ್ದಾರೆ. ಈಕೆಯ ಹೆಸರು ದೀಪಜ್ಯೋತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

PM Modi Welcomes New Family Member Deepjyoti

ಪ್ರಧಾನಿಯವರ ಮನೆಯ ಆವರಣದಲ್ಲಿರುವ ಹಸು ಕರು ಹಾಕಿದ್ದು, ಆ ಕರುವಿನ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಕರುವಿನ ಹಣೆ ಮೇಲೆ ವಿಶಿಷ್ಟವಾದ ಗುರುತು ಇದು, ಇದು ಬೆಳಕಿನ ಸಂಕೇತವನ್ನು ಹೋಲುತ್ತದೆ. ಈ ವಿಶಿಷ್ಟ ವೈಶಿಷ್ಟ್ಯವನ್ನು ಗುರುತಿಸಿ, ಪ್ರಧಾನಿ ಮೋದಿ ಅವರು ಕರುವಿಗೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದಾರೆ.

ಪ್ರಧಾನಿ ಮೋದಿ ಅವರು ಹಂಚಿಕೊಂಡ 42 ಸೆಕೆಂಡುಗಳ ವೀಡಿಯೊದಲ್ಲಿ ತಮ್ಮ ಅಧಿಕೃತ ನಿವಾಸವನ್ನು ತಲುಪಿದ ಹೊಸ ಅತಿಥಿ ಆಟವಾಡುತ್ತಿರುವುದನ್ನು ಕಾಣಬಹುದು. ಪ್ರಧಾನಿ ನಿವಾಸದಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡಿದ್ದು, ಅದನ್ನು ಅಪ್ಪಿ ಪ್ರಧಾನಿ ಮೋದಿ ಮುದ್ದಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ.

ಪ್ರಧಾನಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಪ್ರಧಾನಿ ಮೋದಿ ಅವರು ಕರುವನ್ನು ಪ್ರಾರ್ಥನೆ ಮಾಡಿ ಪ್ರೀತಿಯಿಂದ ಸ್ವಾಗತಿಸುತ್ತಿರುವುದನ್ನು ಕಾಣಬಹುದು. ಪ್ರಧಾನಿ ಮೋದಿ ಅವರು ಕರುವನ್ನು ಮುದ್ದಾಡುವುದು ಮತ್ತು ಆಟವಾಡುವುದು, ಅದರ ಹಣೆಯ ಮೇಲೆ ಮುತ್ತಿಟ್ಟು, ಶಾಲು ಹೊದಿಸಿ, ಹೂ ಮಾಲೆ ಹಾಕಿರುವುದನ್ನ ವಿಡಿಯೊದಲ್ಲಿ ಕಾಣಬಹುದು.

ಇದನ್ನು ನಮ್ಮ ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ ಗಾಂವ್: ಸರ್ವಸುಖ್ ಪ್ರದಾ' ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಿದೆ. ಪ್ರಧಾನ ಮಂತ್ರಿಯವರ ಮನೆಯಲ್ಲಿ, ಪ್ರೀತಿಯ ಗೋಮಾತೆ ಹೊಸ ವತ್ಸಕ್ಕೆ ಜನ್ಮ ನೀಡಿದ್ದಾಳೆ, ಅವಳ ಹಣೆಯ ಮೇಲೆ ಬೆಳಕಿನ ಚಿಹ್ನೆ ಇದೆ. ಆದ್ದರಿಂದ, ನಾನು ಅದಕ್ಕೆ 'ದೀಪಜ್ಯೋತಿ' ಎಂದು ಹೆಸರಿಸಿದೆ ಎಂದು ಪ್ರಧಾನಿ ಮೋದಿ ಟೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+