ಅಕ್ಟೋಬರ್ 21ರಂದು ಕೆಂಪುಕೋಟೆ ಮೇಲೆ ಧ್ವಜಾರೋಹಣ

ನವೆಹಲಿ, ಅಕ್ಟೋಬರ್ 19 : ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನವದೆಹಲಿಯ ಕೆಂಪುಕೋಟೆ ಮೇಲೆ ಅಕ್ಟೋಬರ್ 21ರಂದು ಧ್ವಜಾರೋಹಣ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಗಸ್ಟ್ 15ರ ಸ್ವತಂತ್ರ ದಿಚಾಚರಣೆ ಮತ್ತು ಜನವರಿ 26ರ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ, ಈ ವರ್ಷ ಅಕ್ಟೋಬರ್ 21ರಂದು ಧ್ವಜಾರೋಹಣ ನಡೆಸಲಾಗುತ್ತಿದೆ.

ಅಕ್ಟೋಬರ್ 21ರಂದು ಸುಭಾಷ್ ಚಂದ್ರಬೋಸ್ ಅವರ ಆಜಾದ್ ಹಿಂದ್ ಸರ್ಕಾರ ಸ್ಥಾಪನೆಯಾದ 75 ವರ್ಷದ ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜವನ್ನು
ಹಾರಿಸಲಾಗುತ್ತದೆ.

PM Modi will attend flag hoisting ceremony at Red Fort on Oct 21

ಗುರುವಾರ ಬಿಜೆಪಿ ಕಾರ್ಯಕರ್ತರ ಜೊತೆ ಮಾಡಿನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ಸಹ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಮೋದಿ ಅವರು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಪಟೇಲ್ ಸ್ಮಾರಕ ಮೇಡ್ ಇನ್ ಚೀನಾ ಎಂದು ಕಾಂಗ್ರೆಸ್ ಟೀಕಿಸಿತ್ತು. ಮೋದಿ ಅವರು, 'ಪಟೇಲ್ ಅವರ ಏಕತೆ ಪ್ರತಿಮೆ ದೇಶಕ್ಕೆ ಮಾದರಿ. ಪಟೇಲ್ ಅವರ ಕಾರ್ಯಕಗಳು ಇಂದಿನ ಯುವ ಜನತೆಗೆ ಸ್ಪೂರ್ತಿಯಾಗಿದೆ' ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+