ಕಾಂಗ್ರೆಸ್ ಯುವರಾಜ ರಾಹುಲ್ ಗೆ ವಿಶ್ ಮಾಡಿದ ಮೋದಿ

Posted By:
Subscribe to Oneindia Kannada

ನವದೆಹಲಿ, ಜೂನ್ 19 : ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ (ಜೂನ್ 19) 47ನೇ ಮುಂಗಾರಿಗೆ ಕಾಲಿರಿಸಿದ್ದಾರೆ.

ಸ್ವದೇಶ ಬಿಟ್ಟು ವಿದೇಶಕ್ಕೆ ಹಾರಿರುವ ಕಾಂಗ್ರೆಸ್ ಯುವರಾಜ ರಾಹುಲ್ ರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಸಂಭ್ರಮಾಚರಣೆಯಲ್ಲಿರುವ ರಾಹುಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ವಿಶ್ ಮಾಡಿದ್ದಾರೆ.

PM wishes Rahul Gandhi on his birthday

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿ, ಕಾಂಗ್ರೆಸ್ ನಾಯಕ ರಾಹುಲ್ ಅವರಿಗೆ ದೇವರು ಆಯುರಾರೋಗ್ಯಗಳನ್ನು ನೀಡಿ ಕಾಪಾಡಲಿ, ಅವರ ಈ ಹುಟ್ಟುಹಬ್ಬದಂದು ಅವರಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ರಾಹುಲ್ ಅವರ ಅನುಪಸ್ಥಿತಿಯಲ್ಲಿದೆಹಲಿಯಲ್ಲಿ ಸೇರಿದಂತೆ ದೇಶದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಂತಸದಿಂದ ತಮ್ಮ ನಾಯಕ ಜನ್ಮದಿನ ಆಚರಣೆಯಲ್ಲಿ ತೊಡಗಿದ್ದಾರೆ.

ರಾಹುಲ್ ಗಾಂಧಿ ಅವರು ಜೂನ್ 13ರಂದು ಟ್ವೀಟ್ ಮಾಡಿ, ವಿದೇಶಕ್ಕೆ ಪ್ರಯಾಣಿಸುತ್ತಿದ್ದೇನೆ. ಕೆಲ ಕಾಲ ನನ್ನ ಅಜ್ಜಿ ಮನೆ, ಕುಟುಂಬದ ಸದಸ್ಯರ ಜತೆ ಕಾಲ ಕಳೆಯುತ್ತೇನೆ ಎಂದಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Prime Minister Narendra Modi today wished Congress Vice-President Rahul Gandhi on his birthday. Gandhi turned 47 today.
Please Wait while comments are loading...