ಸೋನಿಯಾ ಗಾಂಧಿ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವೆ: 'ಕೈ' ನಾಯಕಿಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ, ಡಿಸೆಂಬರ್‌ 09: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಇಂದು ಬೆಳಿಗ್ಗೆ ಟ್ವಿಟ್‌ ಮಾಡಿರುವ ಮೋದಿ, 'ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಅವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸುವೆ' ಎಂದು ಟ್ವೀಟ್‌ ಮಾಡಿದ್ದಾರೆ.

ಭಾರತ್‌ ಜೋಡೊ ಯಾತ್ರೆಯಲ್ಲಿರುವ ರಾಹುಲ್‌ ಗಾಂಧಿ ಹಾಗೂ ಮಗಳು ಪ್ರಿಯಾಂಕಾ ಗಾಂಧಿ ಸೋನಿಯಾ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪ್ರಸ್ತುತ ರಾಜಸ್ಥಾನದಲ್ಲಿ ಸಾಗುತ್ತಿರುವ ಯಾತ್ರೆಗೆ ಒಂದು ದಿನದ ಮಟ್ಟಿಗೆ ವಿರಾಮ ನೀಡಲಾಗಿದೆ. ರಾಜಸ್ಥಾನದ ರಣ್‌ಥಾಂಬೋರ್‌ನಲ್ಲಿ ಸೋನಿಯಾ ಜನ್ಮದಿನಾಚರಣೆ ನಡೆಯಲಿದೆ. ಈ ವೇಳೆ, ಕಾಂಗ್ರೆಸ್‌ನ ಪ್ರಮುಖ ನಾಯಕರು ಹಾಗೂ ಕುಟುಂಬ ಸದಸ್ಯರು ಭಾಗಿಯಾಗಲಿದ್ದಾರೆ.

ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಪ್ರಮುಖ ಮುಖಂಡರು ಕಾಂಗ್ರೆಸ್‌ ಅಧಿನಾಯಕಿಗೆ ಶುಭಾಶಯಗಳನ್ನು ಕೋರಿದ್ದಾರೆ. ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಸೋನಿಯಾ ಗಾಂಧಿ ಅವರಿಗೆ ಶುಭ ಹಾರೈಸಿದ್ದಾರೆ.

PM Modi wishes Sonia Gandhi on birthday: Praying for long and healthy life

ಇದೇ ವೇಳೆ, ಹಿಮಾಚಲ ಪ್ರದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಈ ಬಾರಿ ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ಆದರೆ, ಗುಜರಾತ್‌ನಲ್ಲಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಈ ಎಲ್ಲ ಬೆಳವಣಿಗಗಳ ಕುರಿತಾಗಿಯೂ ಚರ್ಚೆಯಾಗಬಹುದು ಎಂಬ ಮಾಹಿತಿ ಲಭ್ಯವಾಗಿದೆ.

ಸೋನಿಯಾ ಪುತ್ರ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೊ ಯಾತ್ರೆಯೂ ಈಗಾಗಲೇ ಆರು ರಾಜ್ಯಗಳಲ್ಲಿ ಕ್ರಮಿಸಿದೆ. ತಮಿಳು ನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ಯಾತ್ರೆ ಸಾಗಿದೆ. ಈ ಯಾತ್ರೆಗೆ ಜನ ಬೆಂಬಲ ವ್ಯಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+