ನರೇಂದ್ರ ಮೋದಿ ಸಂಪುಟ 3.0: ಸಚಿವೆ ರಕ್ಷಾ ನಿಖಿಲ್ ಖಡ್ಸೆ ಯಾರು?
ನವದೆಹಲಿ, ಜೂನ್ 09; ಲೋಕಸಭೆ ಚುನಾವಣೆ 2024ರ ಫಲಿತಾಂಶ ಜೂನ್ 4ರಂದು ಪ್ರಕಟವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ದೇಶದಲ್ಲಿ ಸರ್ಕಾರ ರಚನೆ ಮಾಡಿದೆ. ಜೂನ್ 9ರ ಭಾನುವಾರ ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಮತ್ತು 71 ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಮಹಾರಾಷ್ಟ್ರದ ರೇವರ್ ಲೋಕಸಭಾ ಕ್ಷೇತ್ರದ ಸಂಸದ ರಕ್ಷಾ ನಿಖಿಲ್ ಖಡ್ಸೆ (37) ನರೇಂದ್ರ ಮೋದಿ ಸಂಪುಟ ಸೇರಿದರು.

2014, 2019 ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ರೇವರ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ರಕ್ಷಾ ನಿಖಿಲ್ ಖಡ್ಸೆ ಕೇಂದ್ರ ಸಚಿವರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು 6,30,879 ಮತಗಳನ್ನು ಪಡೆಯುವ ಮೂಲಕ ಎನ್‌ಸಿಪಿಯ ಶ್ರೀರಾಮ್ ದಯಾರಾಮ್ ಪಾಟೀಲ್ (3,58,696) ಸೋಲಿಸಿದ್ದಾರೆ.
ಯಾರು ರಕ್ಷಾ ನಿಖಿಲ್ ಖಡ್ಸೆ?: ಪ್ರಸ್ತುತ ಎನ್‌ಸಿಪಿಯಲ್ಲಿರುವ ಬಿಜೆಪಿಗೆ ಮರಳುತ್ತೇನೆ ಎಂದು ಹೇಳುತ್ತಿರುವ ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ್ ಖಡ್ಸೆ ಸೊಸೆ ರಕ್ಷಾ ನಿಖಿಲ್ ಖಡ್ಸೆ. ರಕ್ಷಾ ನಿಖಿಲ್ ಖಡ್ಸೆ ಪತಿ ನಿಖಿಲ್ (37) 2013ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಕ್ಷಾ ನಿಖಿಲ್ ಖಡ್ಸೆ ಪತಿ ನಿಖಿಲ್ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆದರೆ 2010ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟದ ಸಾಕಷ್ಟು ಸಂಖ್ಯಾಬಲವಿದ್ದರೂ ಸಹ ಅವರು ಚುನಾವಣೆಯಲ್ಲಿ ಸೋತಿದ್ದರು.
ರಕ್ಷಾ ಖಡ್ಸೆ ಮೂಲತಃ ಮಧ್ಯಪ್ರದೇಶ ರಾಜ್ಯದವರು. ಖೇತಿಯಾದಲ್ಲಿ ಅವರು ಜನಿಸಿದರು. ರಾಜಕೀಯವನ್ನು ಅವರು ತಳಮಟ್ಟದಿಂದ ಪ್ರಾರಂಭಿಸಿದರು. ಈಗ ಕೇಂದ್ರ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರಿದ್ದಾರೆ.
ರಕ್ಷಾ ಖಡ್ಸೆ ಕೊಥಾಡಿ ಗ್ರಾಮದ ಸರಪಂಚ್ ಆಗಿ ಸೇವೆ ಸಲ್ಲಿಸಿದ್ದಾರೆ. ನಂತರ ಜಲಗಾಂವ್ ಜಿಲ್ಲಾ ಪರಿಷತ್ತಿನ ಸದಸ್ಯರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಿದರು. 605,452 ಮತಗಳನ್ನು ಪಡೆದು ಎನ್‌ಸಿಪಿಯ ಮನೀಶ್ ದಾದಾ ಜೈನ್ ಸೋಲಿಸಿದರು. 16ನೇ ಲೋಕಸಭೆಗೆ ಆಯ್ಕೆಯಾದ ಅತಿ ಕಿರಿಯ ಸಂಸದರಲ್ಲಿ ರಕ್ಷಾ ಸಹ ಒಬ್ಬರು.
2019ರಲ್ಲಿ ಚುನಾವಣೆಯಲ್ಲಿ ರಕ್ಷಾ ಖಡ್ಸೆ 655,386 ಮತಗಳನ್ನು ಪಡೆದು 2ನೇ ಬಾರಿಗೆ ಸಂಸತ್ ಪ್ರವೇಶ ಮಾಡಿದರು. 2024ರ ಚುನಾವಣೆಯಲ್ಲಿಯೈ ಗೆಲ್ಲುವ ಮೂಲಕ ಅವರು ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.
ರಕ್ಷಾ ಖಡ್ಸೆ ಅವರು ಮಹಿಳಾ ಸಬಲೀಕರಣ, ಮಕ್ಕಳ ಶಿಕ್ಷಣ ಮತ್ತು ರೈತರ ಕಲ್ಯಾಣ ವಿಚಾರದಲ್ಲಿ ಆಸಕ್ತಿ ಹೊಂದಿದ್ದಾರೆ. ಕುಡಿಯುವ ನೀರಿನ ಕೊರತೆ ಪರಿಹರಿಸುವುದು ಮತ್ತು ರಸ್ತೆ ಸಂಪರ್ಕ ಸುಧಾರಿಸುವುದು, ಮೂಲಸೌಕರ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡುವುದು ರಕ್ಷಾ ಖಡ್ಸೆ ಅವರ ಆಲೋಚನೆಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications