ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಕ್ಕೆ ಮೋದಿ ಸೇರಿದಂತೆ ಗಣ್ಯರ ಶುಭಾಶಯ
ನವದೆಹಲಿ, ಡಿಸೆಂಬರ್ 25: ಇಂದು ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮದಿನವಾಗಿದೆ. ಪ್ರಖರ ವಾಗ್ಮಿ, ಕವಿ ಮತ್ತು ರಾಜಕಾರಣಿ ಅಟಲ್ ಬಿಹಾರಿ ವಾಜಪೇಯಿ ಅವರು 1924ರ ಡಿಸೆಂಬರ್ 25ರಂದು ಜನಿಸಿದ್ದರು.
ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವನ್ನು ಕೇಂದ್ರ ಸರ್ಕಾರ ಉತ್ತಮ ಆಡಳಿತ ದಿನವನ್ನಾಗಿ ಆಚರಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ 2014ರಿಂದ ಪ್ರತಿವರ್ಷವೂ ಡಿ.25ನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಸರ್ಕಾರದ ಹೊಣೆಗಾರಿಕೆ, ಜವಾಬ್ದಾರಿ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.
ಅಟಲ್ ಬಿಹಾರಿ ವಾಜಪೇಯಿ 1939ರಲ್ಲಿ ಆರ್ಎಸ್ಎಸ್ ಸೇರ್ಪಡೆಯಾದರು. 1998-2004ರವರೆಗೆ ಎನ್ಡಿಎ ಒಕ್ಕೂಟದ ನೇತೃತ್ವ ವಹಿಸಿದ್ದರು. ಹಾಗಯೇ, ಬಿಜೆಪಿಯಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿಯಾಗಿದ್ದಾರೆ. ಅವರು 1996ರಲ್ಲಿ 13 ದಿನಗಳ ಕಾಲ ಪ್ರಧಾನಮಂತ್ರಿಯಾಗಿದ್ದರು. ನಂತರ 1998ರಲ್ಲಿ 13 ತಿಂಗಳು ಪ್ರಧಾನಿಯಾಗಿದ್ದರು. 1999ರಿಂದ 2004ರ ಅವಧಿಯಲ್ಲಿ ಪೂರ್ಣಾವಧಿ ಪ್ರಧಾನಿಯಾಗಿದ್ದರು. ಈ ಮೂಲಕ ಒಟ್ಟು ಮೂರು ಸಲ ಪ್ರಧಾನಮಂತ್ರಿ ಹುದ್ದೆಗೆ ಏರಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ನಂತರ 2018ರ ಆಗಸ್ಟ್ 16ರಂದು ನಿಧನರಾದರು. ಆಗ ಅವರಿಗೆ 93ವರ್ಷ ವಯಸ್ಸಾಗಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರಿಗೆ 2015ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ 1998ರ ಮೇ 11ರಂದು ನಡೆಸಿದ್ದ ಪೋಖ್ರಾನ್ ಪರಮಾಣು ಪರೀಕ್ಷೆ ಬಳಿಕ ಅದನ್ನು ಸಮರ್ಥಿಸಿಕೊಂಡ ವಾಜಪೇಯಿ ವಾಕ್ಚಾತುರ್ಯಕ್ಕೆ ಇಡೀ ದೇಶ ಬೆರಗಾಗಿತ್ತು. ಆ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವೆಂದು ಆಚರಿಸಲಾಗುತ್ತಿದೆ. ಅಂದು ಪರಮಾಣು ಪರೀಕ್ಷೆಯನ್ನು ಸಂಸತ್ತಿನಲ್ಲಿ ಸಮರ್ಥಿಸಿಕೊಂಡ ಅಟಲ್ ಬಿಹಾರಿ ವಾಜಪೇಯಿ, ನಾವು ನಡೆಸಿದ ಪರಮಾಣು ಪರೀಕ್ಷೆಯನ್ನು ಕೆಲವರು ಟೀಕಿಸುತ್ತಿರುವುದು ನನಗೆ ನಿಜಕ್ಕೂ ಅಚ್ಚರಿ ತಂದಿದೆ. 1974ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ನ್ಯೂಕ್ಲಿಯರ್ ಬಾಂಬ್ ಟೆಸ್ಟ್ ನಡೆಸಿದಾಗ ನಾವು ಪ್ರತಿಪಕ್ಷದ ಸ್ಥಾನದಲ್ಲಿ ಇದ್ದೆವು. ಆದರೆ ಆ ಪರೀಕ್ಷೆಯನ್ನು ನಾವು ಸ್ವಾಗತಿಸಿದ್ದೆವು ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಶುಭಾಶಯ
ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾಜಪೇಯಿಯವರನ್ನು ಸ್ಮರಿಸಿ ಟ್ವೀಟ್ ಮಾಡಿದ್ದು, "ಇಂದು ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನ ಈ ಹೊತ್ತಲ್ಲಿ ಅವರಿಗೆ ಕೋಟಿ ಕೋಟಿ ನಮನಗಳು. ಈ ದೇಶಕ್ಕೆ ಅಟಲ್ ಜೀ ಅತ್ಯಮೂಲ್ಯವಾದ ಸೇವೆ ಸಲ್ಲಿಸಿದ್ದಾರೆ. ಭಾರತವನ್ನು ಬಲಿಷ್ಠಗೊಳಿಸಿ, ಅದನ್ನು ಅಭಿವೃದ್ಧಿಗೊಳಿಸುವ ಸಲುವಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಅಭಿವೃದ್ಧಿ ಉಪಕ್ರಮಗಳು ಕೋಟ್ಯಂತರ ಭಾರತೀಯರ ಮೇಲೆ ಧನಾತ್ಮಕ ಪರಿಣಾಮ ಬೀರಿವೆ,'' ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ರಾಷ್ಟ್ರಪತಿ ನಮನ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನವದೆಹಲಿಯ ಸದೈವ್‌ನಲ್ಲಿ ಅಟಲ್‌ರಿಗೆ ನಮನ ಸಲ್ಲಿಸಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶುಭಾಶಯ
ದೇಶ ಕಂಡ ಆದರ್ಶ ನೇತಾರ, ಮುತ್ಸದ್ಧಿ ಸಂಸದೀಯಪಟು, ಅಜಾತಶತೃ, ನನ್ನ ಹೆಮ್ಮೆಯ ಮಾರ್ಗದರ್ಶಕರೂ ಆಗಿದ್ದ ಮಾಜಿ ಪ್ರಧಾನಿ ಭಾರತರತ್ನ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅವರಿಗೆ ಅನಂತ ಪ್ರಣಾಮಗಳು. ಅವರ ಅದ್ವಿತೀಯ ವ್ಯಕ್ತಿತ್ವ, ಆಡಳಿತ ವೈಖರಿ, ನಾಯಕತ್ವ, ಸಾಧನೆಗಳು ಎಲ್ಲರಿಗೂ ಮಾದರಿ, ಸ್ಫೂರ್ತಿದಾಯಕ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಭಾರತ ರತ್ನ, ಮಾಜಿ ಪ್ರಧಾನಿ, ಶ್ರದ್ಧೆಯ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯ ದಿನದಂದು ಗೌರವ ನಮನಗಳು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸಚಿವ ಕೆ. ಸುಧಾಕರ್ ಶುಭಾಶಯ
ಗ್ರಾಮ ಸಡಕ್‌ನಿಂದ ಸುವರ್ಣ ಚತುಷ್ಪಥದವರೆಗೆ, ಭಾರತವನ್ನು ಪರಮಾಣು ಶಕ್ತಿಯನ್ನಾಗಿ ಮಾಡುವುದರಿಂದ ಹಿಡಿದು ಹಲವಾರು ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತರುವವರೆಗೆ, ಅಟಲ್ ಜಿಯವರ "ಸರ್ವ ಸ್ಪರ್ಶಿ ಮತ್ತು ಸರ್ವ ವ್ಯಾಪಿ' ಉತ್ತಮ ಆಡಳಿತವು ಮಾನದಂಡವನ್ನು ಸ್ಥಾಪಿಸಿದೆ. ಭಾರತ ರತ್ನ ಅಟಲ್ ಜಿ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸಚಿವ ಬಿ. ಶ್ರೀರಾಮುಲು ಶುಭಾಶಯ
ಶ್ರೇಷ್ಠ ಸಂಸದೀಯ ಪಟು, ಧೀಮಂತ ರಾಜಕಾರಣಿ, ಮಾಜಿ ಪ್ರಧಾನಮಂತ್ರಿ, ಭಾರತರತ್ನ ಶ್ರದ್ಧೆಯ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಜಯಂತಿಯಂದು ನನ್ನ ಗೌರವ ನಮನಗಳು. ಅವರ ಜನ್ಮದಿನದಂದು ಆಚರಿಸುವ ಸುಶಾಸನ ದಿನ'ದ ಶುಭಾಶಯಗಳು. ಸಶಕ್ತ ರಾಷ್ಟ್ರ ನಿರ್ಮಾಣದಲ್ಲಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ವಾಜಪೇಯಿ ಜೀ ಅವರ ಸಾಧನೆಗಳನ್ನು ನಾವೆಲ್ಲರೂ ಸ್ಮರಿಸೋಣ ಎಂದು ಸಚಿವ ಬಿ. ಶ್ರೀರಾಮುಲು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications