ಪಂಚ ರಾಜ್ಯಗಳ ಫಲಿತಾಂಶ : ಕೋರ್ ಕಮಿಟಿ ಸಭೆ ಕರೆದ ಮೋದಿ

ನವದೆಹಲಿ, ಡಿಸೆಂಬರ್ 11 : ಪ್ರಧಾನಿ ನರೇಂದ್ರ ಮೋದಿ ಅವರು ಕೋರ್ ಕಮಿಟಿ ಸಭೆ ಕರೆದಿದ್ದಾರೆ. 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಮಂಗಳವಾರ ಸಂಜೆ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಪಂಚ ರಾಜ್ಯಗಳ ಫಲಿತಾಂಶದ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸುಷ್ಮಾ ಸ್ವರಾಜ್ ಸೇರಿದಂತೆ ಕೋರ್ ಕಮಿಟಿಯ ಎಲ್ಲಾ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

PM Narendra Modi calls core committee meeting

ಕೋರ್ ಕಮಿಟಿ ಸಭೆ ಬಳಿಕ ಅಮಿತ್ ಶಾ ಅವರು ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ವಿಜೋರಾಂ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.

ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ. ಒಂದು ವೇಳೆ ಅಧಿಕಾರ ಕಳೆದುಕೊಂಡರೆ ಅದೇ ಕೋರ್ ಕಮಿಟಿ ಸಭೆಯ ಚರ್ಚೆಯ ಪ್ರಮುಖ ವಿಷಯವಾಗಲಿದೆ.

ಐದು ರಾಜ್ಯಗಳ ಚುನಾವಣೆಯನ್ನು 2019ರ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಬಿಜೆಪಿ ಸೋಲು ಕಂಡರೆ ಮುಂದಿನ ನಡೆ ಏನು? ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+