ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಕೊರೊನಾ ಕಥೆ: ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

|
Google Oneindia Kannada News

ನವದೆಹಲಿ, ಏಪ್ರಿಲ್ 04: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುತ್ತಿದೆ.

ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನಡೆಸಿದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಗಳು ಭಾಗಿಯಾಗಿದ್ದಾರೆ. ರಾಜ್ಯವಾರು ಕೊವಿಡ್-19 ಸೋಂಕಿನ ಹರಡುವಿಕೆ ಪ್ರಮಾಣ ಮತ್ತು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮ ಮತ್ತು ಮುಂದೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

24 ಗಂಟೆಯಲ್ಲಿ 93,249 ಹೊಸ ಕೋವಿಡ್ ಪ್ರಕರಣ ದಾಖಲು24 ಗಂಟೆಯಲ್ಲಿ 93,249 ಹೊಸ ಕೋವಿಡ್ ಪ್ರಕರಣ ದಾಖಲು

ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ. ಒಂದು ದಿನದಲ್ಲಿ 93,249 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,24,85,509ಕ್ಕೆ ಏರಿಕೆಯಾಗಿದೆ.

ಶೇ.81.42ರಷ್ಟು ಪ್ರಕರಣಗಳು 8 ರಾಜ್ಯಗಳಲ್ಲಿ ಪತ್ತೆ

ಶೇ.81.42ರಷ್ಟು ಪ್ರಕರಣಗಳು 8 ರಾಜ್ಯಗಳಲ್ಲಿ ಪತ್ತೆ

ಭಾರತದಲ್ಲಿ ದೃಢಪಟ್ಟಿರುವ ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಶೇ.81.42ರಷ್ಟು ಪ್ರಕರಣಗಳಉ ಎಂಟು ರಾಜ್ಯಗಳಲ್ಲೇ ಪತ್ತೆಯಾಗಿವೆ. ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್ ಗಢ, ದೆಹಲಿ, ತಮಿಳುನಾಡು, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.

ಕೊರೊನಾವೈರಸ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ

ಕೊರೊನಾವೈರಸ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ

ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮಿತಿ ಮೀರುತ್ತಿರುವ ಹಿನ್ನೆಲೆ ಆಯಾ ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು ಸೇರಿದಂತೆ ಅಗತ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಲಹೆ ನೀಡಲಾಗಿದೆ.

ಕೊವಿಡ್-19 ಸೋಂಕಿನ ತಪಾಸಣೆ ವೇಗ ಹೆಚ್ಚಿಸುವ ಅಗತ್ಯ

ಕೊವಿಡ್-19 ಸೋಂಕಿನ ತಪಾಸಣೆ ವೇಗ ಹೆಚ್ಚಿಸುವ ಅಗತ್ಯ

ಭಾರತದಲ್ಲಿ ಕೊರೊನಾವೈರಸ್ ಸೋಂಕು ಹೆಚ್ಚಾಗಿ ಕಾಣಿಸಿಕೊಂಡ ಕಂಟೇನ್ಮೆಂಟ್ ವಲಯಗಳನ್ನು ಗುರುತಿಸುವುದು, ಅಪಾಯಕಾರಿ ವಲಯಗಳಲ್ಲಿ ಲಾಕ್ ಡೌನ್ ನಿಯಮ ಜಾರಿಗೊಳಿಸುವುದು, ಕೊರೊನಾ ಸೋಂಕು ತಪಾಸಣೆಯ ವೇಗವನ್ನು ಹೆಚ್ಚಿಸುವುದು ಹಾಗೂ ಸೋಂಕಿತರನ್ನು ಪತ್ತೆ ಮಾಡಿ ಐಸೋಲೇಶನ್ ನಲ್ಲಿ ಇರಿಸುವುದು ಅಗತ್ಯವಾಗಿದೆ ಎಂದು ಕೊವಿಡ್-19 ಕಾರ್ಯ ಪಡೆಯ ಉನ್ನತ ಅಧಿಕಾರಿ ಮತ್ತು ದೆಹಲಿಯ ಆಲ್ ಇಂಡಿಯಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮುಖ್ಯಸ್ಥ ಡಾ. ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

ಕೊರೊನಾವೈರಸ್ ಪ್ರಕರಣ ಮತ್ತು ಲಸಿಕೆ ವಿತರಣೆ

ಕೊರೊನಾವೈರಸ್ ಪ್ರಕರಣ ಮತ್ತು ಲಸಿಕೆ ವಿತರಣೆ

ದೇಶದಲ್ಲಿ ಒಂದೇ ದಿನ 93,249 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 1,24,85,509ಕ್ಕೆ ಏರಿಕೆಯಾಗಿದೆ. 513 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,64,623ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 60,048 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,16,29,289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ಹೊರತಾಗಿ 6,91,597 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೂ 7,59,79,651 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
PM Narendra Modi Calls High-Level Meeting For Discuss On Coronavirus Situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X