ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಉತ್ಪಾದಕ ಕಂಪನಿ ಜೊತೆ ಪ್ರಧಾನಿ ಮೋದಿ ಸಭೆ

|
Google Oneindia Kannada News

ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮೇ 1ರಿಂದ ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗುತ್ತದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ ಸೃಷ್ಟಿಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲಸಿಕೆ ಉತ್ಪಾದಕ ಕಂಪನಿಗಳ ಜೊತೆಗೆ ಮಂಗಳವಾರ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

"ಜನರನ್ನು ಲಸಿಕೆ ಪಡೆಯಲು ಉತ್ತೇಜಿಸಿ; ವದಂತಿ ವಿರುದ್ಧ ಅರಿವು ಮೂಡಿಸಿ"

ಮಂಗಳವಾರ ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಜೈವಿಕ ತಂತ್ರಜ್ಞಾನ ಇಲಾಖೆಯು ಎಲ್ಲ ಉತ್ಪಾದಕ ಕಂಪನಿಗಳ ಸಮ್ಮುಖದಲ್ಲಿ ಮಾಹಿತಿಯನ್ನು ಪ್ರಸ್ತುತ ಪಡಿಸಲಿದೆ. ಈ ವೇಳೆಗ ದೇಶ ಮತ್ತು ವಿದೇಶದ ಔಷಧಿ ಉತ್ಪಾದಕ ಕಂಪನಿಗಳು ಹಾಗೂ ಈಗಾಗಲೇ ಲಸಿಕೆ ಉತ್ಪಾದಿಸುವುದುಕ್ಕೆ ಅನುಮೋದನೆ ಪಡೆದಿರುವ ಕಂಪನಿಗಳು ಭಾಗವಹಿಸುವ ಸಾಧ್ಯತೆಯಿದೆ.

PM Narendra Modi Calls Meeting With Corona Vaccine Manufacturers On Tuesday

ಭಾರತದಲ್ಲಿ ಅನುಮೋದನೆ ಪಡೆದ ಲಸಿಕೆಗಳು:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ. ಭಾರತದ ರೆಡ್ಡೀಸ್ ಪ್ರಯೋಗಾಲಯದಲ್ಲಿ ಈ ಸ್ಪುಟ್ನಿಕ್-ವಿ ಲಸಿಕೆಯನ್ನು ಉತ್ಪಾದಿಸುವುದಕ್ಕೆ ಅನುಮತಿ ನೀಡಲಾಗಿದೆ.

ವಿಶ್ವದಲ್ಲಿ ಅನುಮೋದನೆ ಪಡೆದ ಲಸಿಕೆಗಳ ಆಮದು:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1.50 ಕೋಟಿ ಗಡಿ ದಾಟಿದ ಹಿನ್ನೆಲೆ ಪರಿಸ್ಥಿತಿ ನಿಯಂತ್ರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಹಿನ್ನೆಲೆ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ನೀಡುವುದಕ್ಕೆ ಅನುಮತಿ ನೀಡಲಾಗಿದೆ. ಅದಕ್ಕಾಗಿ ವಿಶ್ವದಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಫೈಜರ್, ಮಾಡರ್ನಾ, ಜಾನ್ಸನ್ ಆಂಡ್ ಜಾನ್ಸನ್ ಕಂಪನಿ ಲಸಿಕೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳವ ಬಗ್ಗೆ ಚಿಂತಿಸಲಾಗುತ್ತಿದೆ.

English summary
Prime Minister Narendra Modi Calls Meeting With Corona Vaccine Manufacturers On Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X