ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್ ಕೊನೆ ಆಯ್ಕೆಯಾಗಿ ಮಾತ್ರ ಪರಿಗಣಿಸಿ; ಮೋದಿ

|
Google Oneindia Kannada News

ನವದೆಹಲಿ, ಏಪ್ರಿಲ್ 20: ದೇಶದಲ್ಲಿ ಕೊರೊನಾ ಎರಡನೇ ಅಲೆ ಆತಂಕ ತಂದಿದ್ದು, ಮತ್ತೊಮ್ಮೆ ಲಾಕ್‌ಡೌನ್ ಹೇರಲಾಗುತ್ತದೆಯೇ ಎಂಬುದು ಚರ್ಚೆಯ ಕೇಂದ್ರಬಿಂದುವಾಗಿತ್ತು. ಇಂದು ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಲಾಕ್‌ಡೌನ್ ಅಗತ್ಯವಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ದೇಶದಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ. ಲಾಕ್‌ಡೌನ್ ಅನ್ನು ಕೊನೆಯ ಅಸ್ತ್ರವಾಗಿ ಮಾತ್ರ ಬಳಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೂ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಮುಂದೆ ಓದಿ...

ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆ

"ಯಾರೂ ಧೈರ್ಯ ಕಳೆದುಕೊಳ್ಳಬೇಡಿ"

ನಾವು ಈಗ ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿದ್ದೇವೆ. ನೀವೆಲ್ಲಾ ಎಷ್ಟು ನೋವಿನಲ್ಲಿದ್ದೀರಿ ಎಂಬುದು ನನಗೆ ತಿಳಿದಿದೆ. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ನನ್ನ ಸಂತಾಪವಿದೆ. ನಾನೂ ನಿಮ್ಮ ಕುಟುಂಬದ ದುಃಖದಲ್ಲಿ ಭಾಗಿ ಎಂದು ಹೇಳಿದ್ದಾರೆ. ನಮ್ಮ ಮುಂದಿರುವ ಸವಾಲು ಬಹು ದೊಡ್ಡದಿದೆ. ಆದರೆ ಇದರಿಂದ ನಾವು ಧೈರ್ಯ ಹಾಗೂ ಸೂಕ್ತ ಸಿದ್ಧತೆ ಮೂಲಕ ಹೊರಬರಬೇಕಿದೆ. ಯಾರೂ ಧೈರ್ಯ ಕಳೆದುಕೊಳ್ಳಬೇಡಿ ಎಂದು ಮೋದಿ ಭರವಸೆ ನೀಡಿದ್ದಾರೆ.

"ಆಮ್ಲಜನಕ ಉತ್ಪಾದನೆ ಹೆಚ್ಚಿಸಲಾಗಿದೆ"

ದೇಶದಲ್ಲಿ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಆಮ್ಲಜನಕ ಉತ್ಪಾದನೆಯನ್ನೂ ಹೆಚ್ಚಿಸಲಾಗಿದೆ. ಯಾರು ಯಾರಿಗೆ ಅವಶ್ಯಕತೆಯಿದೆಯೋ ಎಲ್ಲರಿಗೂ ಕೇಂದ್ರ, ರಾಜ್ಯ ಹಾಗೂ ಖಾಸಗಿ ವಲಯಗಳಿಂದ ಆಮ್ಲಜನಕ ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

"12 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ"

ಆಸ್ಪತ್ರೆಯಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಳ ಮಾಡುವ ಕೆಲಸ ನಡೆಯುತ್ತಿದೆ. ಕೆಲವು ನಗರಗಳಲ್ಲಿ ಕೋವಿಡ್ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಸ್ವದೇಶಿ ನಿರ್ಮಿತ ಎರಡು ಕೊರೊನಾ ಲಸಿಕೆಗಳ ಮೂಲಕ ಭಾರತ ಬಹುದೊಡ್ಡ ಲಸಿಕಾ ಅಭಿಯಾನ ನಡೆಸುತ್ತಿದೆ. ಇದುವರೆಗೂ 12 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ತಿಳಸಿದಿರು.

"ಲಾಕ್‌ಡೌನ್ ಅನ್ನು ಕೊನೆಯ ಆಯ್ಕೆಯಾಗಿ ಪರಿಗಣಿಸಿ"

ಕಾರ್ಮಿಕರು ಲಾಕ್‌ಡೌನ್ ಭಯದಿಂದ ರಾಜ್ಯಗಳನ್ನು ತೊರೆಯಬೇಡಿ. ರಾಜ್ಯ ಸರ್ಕಾರಗಳು ನಿಮಗೆ ಸಹಾಯ ಮಾಡುತ್ತವೆ. ದೇಶದಲ್ಲಿ ಲಾಕ್‌ಡೌನ್ ಅಗತ್ಯವಿಲ್ಲ. ಲಾಕ್‌ಡೌನ್ ಅನ್ನು ಕೊನೆಯ ಆಯ್ಕೆಯಾಗಿ ಮಾತ್ರ ರಾಜ್ಯಗಳು ಪರಿಗಣಿಸಬೇಕು. ಮೈಕ್ರೋ ಕಂಟೇನ್ಮೆಂಟ್ ಝೋನ್‌ಗಳ ನಿರ್ಮಾಣದ ಮೂಲಕ ಕೊರೊನಾ ನಿಯಂತ್ರಣ ಮಾಡಬೇಕು ಎಂದು ಹೇಳಿದ್ದಾರೆ.

English summary
I urge the States to consider lockdowns only as the last option and focus creating on micro containment zones says PM Narendra Modi addressing nation,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X