ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಎಸ್‌ಪಿ ಇತ್ತು, ಇದೆ, ಮುಂದೆ ಇದ್ದೇ ಇರುತ್ತದೆ; ಮೋದಿ

|
Google Oneindia Kannada News

ನವದೆಹಲಿ, ಫೆಬ್ರುವರಿ 08: ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ ಪ್ರಧಾನಿ ನರೇಂದ್ರ ಮೋದಿ, "ಕನಿಷ್ಠ ಬೆಂಬಲ ಬೆಲೆ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ" ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಸೋಮವಾರ ಮತ್ತೊಮ್ಮೆ ಕನಿಷ್ಠ ಬೆಂಬಲ ಬೆಲೆ ಕುರಿತು ಮಾತನಾಡಿದ ಅವರು, "ಕನಿಷ್ಠ ಬೆಂಬಲ ಬೆಲೆ ಈ ಹಿಂದೆ ಇತ್ತು. ಈಗಲೂ ಇದೆ ಮತ್ತು ಮುಂದೆಯೂ ಇರುತ್ತದೆ, ಬಡವರಿಗೆ ಕೈಗೆಟುಕುವ ದರದಲ್ಲಿ ರೇಷನ್ ಸಿಗುವುದು ಮುಂದುವರೆಯುತ್ತದೆ. ಮಂಡಿಗಳನ್ನು ಆಧುನೀಕರಣಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ: ಪ್ರಮುಖ ಅಂಶಗಳುರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ: ಪ್ರಮುಖ ಅಂಶಗಳು

ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಕುರಿತು ಮಾತನಾಡಿದ ಅವರು, "ನಾವು ಮಾತುಕತೆಗೆ ಸಿದ್ಧರಿದ್ದೇವೆ. ನಿಮ್ಮನ್ನು ಮತ್ತೊಮ್ಮೆ ಇಲ್ಲಿ ನಿಂತು ಆಹ್ವಾನಿಸುತ್ತಿದ್ದೇನೆ" ಎಂದು ಕರೆ ನೀಡಿದ್ದಾರೆ.

PM Narendra Modi Clarificaton On MSP In Rajya Sabha

"ನಾವು ಎಂದೂ ಮುಂದಿನದನ್ನು ಆಲೋಚಿಸಬೇಕು. ಹಿಂದೆ ನಡೆದುಹೋದದ್ದನ್ನಲ್ಲ. ಸುಧಾರಣೆಗೆ ಒಂದು ಅವಕಾಶ ಕೊಟ್ಟು ನೋಡಬೇಕು" ಎಂದು ಹೇಳಿದ್ದಾರೆ. "ಇಂದು ಎರಡು ಹೆಕ್ಟೇರ್ ಗಿಂತ ಕಡಿಮೆ ಭೂಮಿ ಹೊಂದಿರುವ ಸುಮಾರು 12 ಕೋಟಿ ರೈತರು ದೇಶದಲ್ಲಿದ್ದಾರೆ. ಈ ರೈತರ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿಯಿಲ್ಲವೇ. ಸಣ್ಣ ರೈತರ ಜೀವನ ಮಟ್ಟವನ್ನು ಸುಧಾರಿಸುವುದು ನಮ್ಮ ಈ ಕ್ಷಣದ ಅಗತ್ಯ" ಎಂದು ಹೇಳಿದ್ದಾರೆ.

English summary
MSP was there. MSP is there. MSP will remain in the future. Affordable ration for the poor will continue. Mandis will be modernised said PM Narendra Modi in Rajya sabha on monday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X