ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮದ ಉಗ್ರರ ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 14 : ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. 'ನಮ್ಮ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ' ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪುರ್‌ನಲ್ಲಿ ಗುರುವಾರ ಮಧ್ಯಾಹ್ನ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಜೈಷ್-ಇ-ಮೊಹಮ್ಮದ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

ಹುತಾತ್ಮ ಯೋಧರ ರಕ್ತದ ಹನಿ-ಹನಿಗೂ ಪ್ರತೀಕಾರ ಪಡೆಯುತ್ತೇವೆ: ವಿಕೆ.ಸಿಂಗ್ಹುತಾತ್ಮ ಯೋಧರ ರಕ್ತದ ಹನಿ-ಹನಿಗೂ ಪ್ರತೀಕಾರ ಪಡೆಯುತ್ತೇವೆ: ವಿಕೆ.ಸಿಂಗ್

ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ 70 ವಾಹನಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. 2004ರ ಬಳಿಕ ನಡೆದ ದೊಡ್ಡ ದಾಳಿ ಇದಾಗಿದೆ.

ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?

ದೇಶದ ಹಲವು ನಾಯಕರು ಈ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ರಾಜನಾಥ್ ಸಿಂಗ್ ಅವರ ಜೊತೆ ಘಟನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾಗ ಅಜಿತ್ ಧೋವಲ್ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.....

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಉಗ್ರರ ದಾಳಿ, 18 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಉಗ್ರರ ದಾಳಿ, 18 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮ

ಉಗ್ರರ ದಾಳಿಗೆ ಖಂಡನೆ

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.

ಅಧಿಕಾರಿಗಳ ಜೊತೆ ಚರ್ಚೆ

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಜೊತೆ ಚರ್ಚೆ ನಡೆಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ದಾಳಿಗೆ ಖಂಡನೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಹಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದಾರೆ.

ದೇಶ ಯೋಧರಿಗೆ ಗೌರವ ಸಲ್ಲಿಸುತ್ತದೆ

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ದೇಶ ನಮನ ಸಲ್ಲಿಸುತ್ತದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಸಾವಿನ ನಿಖರ ಸಂಖ್ಯೆ ಸಿಕ್ಕಿಲ್ಲ

ಸಾವಿನ ನಿಖರ ಸಂಖ್ಯೆ ಸಿಕ್ಕಿಲ್ಲ

ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರ ಸಲಹೆಹಾರ ಕೆ.ವಿಜಯ್ ಕುಮಾರ್ ಅವರು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇದುವರೆಗೂ 18 ಯೋಧರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ನಿಖರವಾದ ಸಂಖ್ಯೆ ಇನ್ನೂ ಸಿಕ್ಕಿಲ್ಲ' ಎಂದು ಹೇಳಿದ್ದಾರೆ.

ಎಚ್.ಡಿ.ದೇವೇಗೌಡ ಟ್ವೀಟ್

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಸುದ್ದಿ ಕೇಳಿ ಶಾಕ್ ಆಗಿದೆ. ಘಟನೆಯಲ್ಲಿ ಹುತಾತ್ಮರಾದ ಯೋಧಕ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದೇನೆ. ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕ ಗಾಂಧಿ ಹೇಳಿಕೆ

ಪ್ರಿಯಾಂಕ ಗಾಂಧಿ ಹೇಳಿಕೆ

ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವರು ನಡೆಸಬೇಕಿದ್ದ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಾರೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿ ಸಂದರ್ಭದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ದಾಳಿ ಖಂಡಿಸಿದ ಸಿದ್ದರಾಮಯ್ಯ

ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ಭಗವಂತ ಶಕ್ತಿಯನ್ನು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

English summary
Prime Minister of India Narendra Modi condemned the terrorist attack in Pulwama. In a tweet he said that, attack on CRPF personnel in Pulwama is despicable. I strongly condemn this dastardly attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X