RCB ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ ಹಲವರು ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ದುರ್ಘಟನೆ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ.

PM Narendra Modi Condoles Deaths In RCB Fan Stampede In Bengaluru

ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು. ಸಾಂತ್ವನ ಹೇಳಬೇಕು ಹಾಗೂ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಅಸ್ವಸ್ಥತೆಯಿಂದ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ತಕ್ಷಣ ಸೂಕ್ತ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಒತ್ತಾಯ

ಆರ್‌ಸಿಬಿ ವಿಜಯದ ನಂತರ ಇಡೀ ರಾಜ್ಯದಲ್ಲಿ ಬೆಂಗಳೂರೂ ಸೇರಿದಂತೆ ಕೆಲ ಪ್ರಮುಖ ನಗರಗಳಲ್ಲಿ ಜನರು ವಿಜಯೋತ್ಸವದಲ್ಲಿ ಮುಳುಗಿದ್ದು ಅಭಿಮಾನಿಗಳ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲಾಗದ ಸ್ಥಿತಿ ನಿನ್ನೆಯೇ ಉದ್ಬವಿಸಿತ್ತು. ಈ ಹಿನ್ನೆಲೆಯಲ್ಲಿ ಇಂದೇ ಸಂಭ್ರಮಾಚರಣೆ ಆಚರಿಸುವ ಕುರಿತು ಸೇರಬಹುದಾದ ಜನರ ಲೆಕ್ಕಾಚಾರವನ್ನು ಅಂದಾಜಿಸಬೇಕಿತ್ತು. ಸರ್ಕಾರ ವಿವೇಚಿಸಿ ನಿರ್ಧಾರ ತೆಗೆದುಕೊಳ್ಳಬಹುದಾಗಿತ್ತು ಎಂದು ವಿಜಯೇಂದ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಮುನ್ನೆಚ್ಚರಿಕೆಯ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪರಿಸ್ಥಿತಿ ಕೈಮೀರುವ ಹಂತವನ್ನು ಅಂದಾಜಿಸಿ ಮತ್ತೊಂದು ದಿನಾಂಕವನ್ನು ನಿಗದಿಪಡಿಸಬಹುದಾಗಿತ್ತು. ಆದರೆ ಆತುರದ ನಿರ್ಧಾರದಿಂದ ಈ ರೀತಿಯ ದುರ್ಘಟನೆ ಸಂಭವಿಸಿದೆ. ಇದರ ಹೊಣೆ ಯಾರು ಹೊರಬೇಕು? ಎಂಬುದನ್ನು ಸರ್ಕಾರ ವಿವೇಚಿಸಲಿ. ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗದ ವೈಫಲ್ಯದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದೇ ಕಾರಣ

ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ಧತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅತ್ಯಂತ ದುಃಖದ ಸಂಗತಿ. ಯಾವುದೇ ಪೂರ್ವ ತಯಾರಿ ಇಲ್ಲದೆ ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದು, ಅದರಲ್ಲೂ ಎರಡೂ ಕಾರ್ಯಕ್ರಮಗಳಲ್ಲಿ ಅಷ್ಡೊಂದು ಜನ ಸೇರಲು ಅವಕಾಶ ಮಾಡಿಕೊಟ್ಟಿದ್ದು, ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಈ ಹಿಂದೆ ವಿಶ್ವಕಪ್ ಮತ್ತು ಇತರ ಕಪ್ ಗೆದ್ದಾಗ ಮುಂಬೈನಲ್ಲಿ ಮೆರವಣಿಗೆ ಮಾಡುವ ಮುಖಾಂತರ ಜನರಿಗೆ ಅಲ್ಲಲ್ಲಿ‌ ಕ್ರಿಕೆಟ್ ಆಟಗಾರರನ್ನು ನೋಡಲು ಅವಕಾಶ ಕಲ್ಪಿಸಿದ್ದು ಸಾಕಷ್ಟು ಉದಾಹರಣೆ ಇದೆ. ಈ ವಿಚಾರದಲ್ಲಿ ಜನರ ಸಂಖ್ಯೆಯ ಅಂದಾಜು ಇಲ್ಲದೆ ಆರ್‌ಸಿಬಿ ಪರವಾಗಿರುವ ಜನರ ಭಾವನಾತ್ಮಕ ಸಂಬಂಧ ಅರಿಯದೆ, ಪೊಲಿಸರು ಮತ್ತು ಆಯೋಜಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಸ್ಪಷ್ಟ. ರಾಜ್ಯ ಸರ್ಕಾರವೇ ಇದಕ್ಕೆ ಕಾರಣ, ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ತಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+