Prajwal Revanna Case: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಪ್ರಧಾನಿ ಮೋದಿ ಪ್ರತಿಕ್ರಿಯೆ; ಏನಂದ್ರು?

ದೇಶಾದ್ಯಂತ ವ್ಯಾಪಕ ಸುದ್ದಿ ಮಾಡುತ್ತಿರುವ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ, ಪ್ರಜ್ವಲ್‌ರನ್ನು ದೇಶದಿಂದ ಹೊರಹೋಗಲು ಕಾಂಗ್ರೆಸ್ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ಟೈಮ್ಸ್‌ ನೌಗೆ ನೀಡಿರುವ ಸಂದರ್ಶನದ ಪ್ರಕಾರ, ಇದು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿರುವುದರಿಂದ ಕ್ರಮ ಕೈಗೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

PM Narendra Modi First Reaction On Prajwal Revanna Pendrive Case

ಸಾವಿರಾರು ವೀಡಿಯೋಗಳು ಇರುವುದು ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಲದ್ದು ಎಂದು ಹೇಳಿದರು. ಈ ವಿಡಿಯೋಗಳನ್ನು ಅವರು ಅಧಿಕಾರದಲ್ಲಿದ್ದಾಗ ಸಂಗ್ರಹಿಸಲಾಗಿತ್ತು ಮತ್ತು ಒಕ್ಕಲಿಗರು ತಮ್ಮ ಮತ ಚಲಾಯಿಸಿದ ನಂತರ ಅವರು ಅದನ್ನು ಚುನಾವಣಾ ಸಮಯದಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆರೋಪಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಆರೋಪ

ಪ್ರಜ್ವಲ್ ರೇವಣ್ಣರನ್ನು ದೇಶದಿಂದ ಹೊರಗೆ ಕಳುಹಿಸಿದ ನಂತರ ವೀಡಿಯೊಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮೋದಿ ಹೇಳಿದ್ದಾರೆ. ಇದು ತುಂಬಾ ಅನುಮಾನಾಸ್ಪದವಾಗಿದೆ, ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದಿದ್ದರೆ ವಿಮಾನ ನಿಲ್ದಾಣದಲ್ಲಿ ನಿಗಾ ಇಡಬೇಕಿತ್ತು ಎಂದು ಹೇಳಿದರು.

ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ, ಭಾರತ ಸರ್ಕಾರಕ್ಕೂ ಮಾಹಿತಿ ನೀಡಿಲ್ಲ. ಇದು ರಾಜಕೀಯ ಆಟ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾಗ ಕಾಂಗ್ರೆಸ್ ನಾಯಕರು ಇದನ್ನು ಸಂಗ್ರಹಿಸಿದ್ದರು. ಇದು ನನ್ನ ಸಮಸ್ಯೆಯಲ್ಲ, ಆದರೆ ಯಾವುದೇ ಅಪರಾಧಿಯೊಂದಿಗೆ ದೇಶವನ್ನು ನಿಲ್ಲಿಸಬಾರದು ಎಂದು ಹೇಳಿದರು.

ಇದರ ಬಗ್ಗೆ ಮೋದಿ, ಬಿಜೆಪಿ ಪ್ರತಿಕ್ರಿಯೆ ಕೇಳಿದರೆ ಇದನ್ನು ನಾವು ಸಹಿಸುವ ಪ್ರಶ್ನೆಯೇ ಇಲ್ಲ. ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದರು. ಪ್ರಜ್ವಲ್ ರೇವಣ್ಣರನ್ನು ವಾಪಸ್ ಕರೆತರಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+