ಸಂಸದ ಸುರೇಶ್ ಅಂಗಡಿ ವಿಧಿವಶ: ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ, ಸೆಪ್ಟೆಂಬರ್ 23: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ವಿಧಿವಶರಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.

ಕೋವಿಡ್ 19 ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ಅಂಗಡಿ ಅವರಿಗೆ ರಕ್ತದೊತ್ತಡ, ಮಧುಮೇಹ ಸಮಸ್ಯೆ ಇರಲಿಲ್ಲ, ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ.

PM Narendra Modi mourns death of Union Minister Suresh Angadi

''ಶ್ರೀ ಸುರೇಶ್ ಅಂಗಡಿ ಅವರು ಅಸಾಧಾರಣ ಕಾರ್ಯಕರ್ತರಾಗಿದ್ದರು, ಅವರು ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದರು. ಅವರೊಬ್ಬ ಸಮರ್ಪಿತ ಸಂಸದ ಮತ್ತು ಪರಿಣಾಮಕಾರಿ ಮಂತ್ರಿಯಾಗಿದ್ದರು, ಎಲ್ಲರಿಂದಲೂ ಮೆಚ್ಚುಗೆ ಪಡೆದಿದ್ದರು. ಅವರ ನಿಧನವು ತುಂಬಾ ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇವೆ. ಓಂ ಶಾಂತಿ.'' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದ ಅಂಗಡಿ ಕಳೆದ ಬಾರಿ ಜಯ ಗಳಿಸಿ ಸತತ ನಾಲ್ಕು ಬಾರಿ ಲೋಕಸಭೆ ಆಯ್ಕೆಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+