ಅಮೆರಿಕದಲ್ಲಿ ಪ್ರತಿಭಟನೆ, ಹಿಂಸಾಚಾರ: ಪ್ರಧಾನಿ ಮೋದಿ ಕಳವಳ
ನವದೆಹಲಿ, ಜನವರಿ 7: ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಕೆಡಿಸಲು ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
'ಗಲಭೆ ಮತ್ತು ಹಿಂಸಾಚಾರದ ಸುದ್ದಿ ತಿಳಿದು ತೀವ್ರ ನೋವಾಗಿದೆ. ಅಧಿಕಾರದ ವ್ಯವಸ್ಥಿತ ಹಾಗೂ ಶಾಂತಿಯುತ ಹಸ್ತಾಂತರ ನಡೆಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಹಾಳುಗೆಡವಲು ಸಾಧ್ಯವಿಲ್ಲ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂರಾರು ಬೆಂಬಲಿಗರು ಯುಎಸ್ ಕ್ಯಾಪಿಟಲ್ ಕಟ್ಟಡದ ಒಳಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಟ್ರಂಪ್ ಅವರ ಚುನಾವಣಾ ಸೋಲಿನ ಫಲಿತಾಂಶವನ್ನು ರದ್ದುಗೊಳಿಸಬೇಕು. ಟ್ರಂಪ್ ಅವರೇ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಘೋಷಣೆಗಳನ್ನು ಕೂಗಿದರು. ಇದರಿಂದ ಜೋ ಬೈಡನ್ ಅವರ ವಿಜಯವನ್ನು ಪ್ರಮಾಣೀಕರಿಸುವ ಅವಧಿಯನ್ನು ಕಾಂಗ್ರೆಸ್ ಅರ್ಧದಲ್ಲಿಯೇ ಮೊಟಕುಗೊಳಿಸುವಂತೆ ಆಯಿತು.

ಕ್ಯಾಪಿಟಲ್‌ನಲ್ಲಿ ತುಂಬಿಕೊಂಡಿದ್ದ ಟ್ರಂಪ್ ಬೆಂಬಲಿಗರನ್ನು ತೆರವುಗೊಳಿಸಲು ಪೊಲೀಸರು ಸುಮಾರು ಮೂರು ಗಂಟೆ ಹೆಣಗಾಡಿದರು. ಸಂಸದರನ್ನು ಸುರಕ್ಷಿತವಾಗಿ ಕಟ್ಟಡದಿಂದ ಹೊರಗೆ ಕರೆದೊಯ್ದರು.












Click it and Unblock the Notifications