ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕದಲ್ಲಿ ಪ್ರತಿಭಟನೆ, ಹಿಂಸಾಚಾರ: ಪ್ರಧಾನಿ ಮೋದಿ ಕಳವಳ

|
Google Oneindia Kannada News

ನವದೆಹಲಿ, ಜನವರಿ 7: ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಕೆಡಿಸಲು ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.

'ಗಲಭೆ ಮತ್ತು ಹಿಂಸಾಚಾರದ ಸುದ್ದಿ ತಿಳಿದು ತೀವ್ರ ನೋವಾಗಿದೆ. ಅಧಿಕಾರದ ವ್ಯವಸ್ಥಿತ ಹಾಗೂ ಶಾಂತಿಯುತ ಹಸ್ತಾಂತರ ನಡೆಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಹಾಳುಗೆಡವಲು ಸಾಧ್ಯವಿಲ್ಲ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಯುಎಸ್ ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿ ಟ್ರಂಪ್ ಬೆಂಬಲಿಗರ ಪ್ರತಿಭಟನೆ, ಕೋಲಾಹಲಯುಎಸ್ ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿ ಟ್ರಂಪ್ ಬೆಂಬಲಿಗರ ಪ್ರತಿಭಟನೆ, ಕೋಲಾಹಲ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂರಾರು ಬೆಂಬಲಿಗರು ಯುಎಸ್ ಕ್ಯಾಪಿಟಲ್‌ ಕಟ್ಟಡದ ಒಳಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಟ್ರಂಪ್ ಅವರ ಚುನಾವಣಾ ಸೋಲಿನ ಫಲಿತಾಂಶವನ್ನು ರದ್ದುಗೊಳಿಸಬೇಕು. ಟ್ರಂಪ್ ಅವರೇ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಘೋಷಣೆಗಳನ್ನು ಕೂಗಿದರು. ಇದರಿಂದ ಜೋ ಬೈಡನ್ ಅವರ ವಿಜಯವನ್ನು ಪ್ರಮಾಣೀಕರಿಸುವ ಅವಧಿಯನ್ನು ಕಾಂಗ್ರೆಸ್ ಅರ್ಧದಲ್ಲಿಯೇ ಮೊಟಕುಗೊಳಿಸುವಂತೆ ಆಯಿತು.

PM Narendra Modi Said Democratic Process Cannot Be Allowed To Be Subverted

Recommended Video

Team India ಆಟಗಾರಿಗೆ ವಿಲ್ಲನ್ ಆದ ಮಳೆ | Oneindia Kannada

ಕ್ಯಾಪಿಟಲ್‌ನಲ್ಲಿ ತುಂಬಿಕೊಂಡಿದ್ದ ಟ್ರಂಪ್ ಬೆಂಬಲಿಗರನ್ನು ತೆರವುಗೊಳಿಸಲು ಪೊಲೀಸರು ಸುಮಾರು ಮೂರು ಗಂಟೆ ಹೆಣಗಾಡಿದರು. ಸಂಸದರನ್ನು ಸುರಕ್ಷಿತವಾಗಿ ಕಟ್ಟಡದಿಂದ ಹೊರಗೆ ಕರೆದೊಯ್ದರು.

English summary
PM Narendra Modi said democratic process cannot be allowed to be subverted through unlawful protests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X