ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸಮಯದಲ್ಲಿ ಕೃಷಿ ಕ್ಷೇತ್ರವು ದೇಶವನ್ನು ಕಾಪಾಡಿದೆ: ಮೋದಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 22: ಕೊರೊನಾ ಸಮಯದಲ್ಲಿ ದೇಶದ ಆರ್ಥಿಕತೆ ಕುಸಿದಾಗ ಕೃಷಿ ಕ್ಷೇತ್ರವು ದೇಶವನ್ನು ಕಾಪಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಕ್ಟೋಬರ್ 21ರವರೆಗೆ ದೇಶದಲ್ಲಿ ಒಟ್ಟು 100 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ನಾಗರಿಕರನ್ನುದ್ದೇಶಿ ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿ ಕೃಷಿ ಕ್ಷೇತ್ರ ತುಂಬಾ ಸಹಾಯ ಮಾಡಿದೆ, ದೇಶವನ್ನು ಕಾಪಾಡಿದರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತವು ನಿನ್ನೆ (ಅಕ್ಟೋಬರ್ 21) ಶತಕೋಟಿ ಡೋಸ್ ಲಸಿಕೆ ನೀಡಿಕೆಯ ಮೈಲಿಗಲ್ಲನ್ನು ತಲುಪಿತ್ತು.

ಯುದ್ಧ ಮುಗಿಯುವವರೆಗೂ ಶಸ್ತ್ರಾಸ್ತ್ರ ಕೆಳಗಿಳಿಸಬೇಡಿ: ನರೇಂದ್ರ ಮೋದಿಯುದ್ಧ ಮುಗಿಯುವವರೆಗೂ ಶಸ್ತ್ರಾಸ್ತ್ರ ಕೆಳಗಿಳಿಸಬೇಡಿ: ನರೇಂದ್ರ ಮೋದಿ

ಆಗ ಪ್ರಧಾನಿ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದರು. 'ದೇಶದ 130 ಕೋಟಿ ಭಾರತೀಯರ ಸಾಮೂಹಿಕ ಚೈತನ್ಯ, ಉದ್ಯಮಶೀಲತೆ, ಭಾರತೀಯ ವಿಜ್ಞಾನದ ಸಾಧನೆಗೆ 100 ಕೋಟಿ ಡೋಸ್ ಲಸಿಕೆ ನೀಡಿಕೆಯ ಮೈಲಿಗಲ್ಲು ಸಾಕ್ಷಿಯಾಗಿದೆ.

ಈ ಸಾಧನೆ ಮಾಡಿದ ಭಾರತಕ್ಕೆ ಅಭಿನಂದನೆ. ಇದಕ್ಕೆ ಕಾರಣರಾದ ವೈದ್ಯರು, ನರ್ಸ್‌ಗಳು, ದಾದಿಯರಿಗೂ ಅಭಿನಂದನೆಗಳು' ಎಂದು ಟ್ವೀಟ್ ಮೂಲಕ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದರು.

ಇಂದು ಪ್ರಧಾನಿ ಭಾಷಣದಲ್ಲಿ, ಕಡಿಮೆ ಸಮಯದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಭಾರತದ ಲಸಿಕೆ ನೀಡಿಕೆ ವೈಜ್ಞಾನಿಕ ಆಧಾರದಲ್ಲಿ ನಡೆದಿದೆ ಎಂದು ನುಡಿದಿದ್ದಾರೆ. ಸವಾಲುಗಳಿಗೆ ಅನುಗುಣವಾಗಿ ಸಾಮರ್ಥ್ಯವನ್ನು ಹೆಚ್ಚಿಸಿದ್ದೇವೆ. ದೇಶದಲ್ಲಿ ವಿಶ್ವಾಸ, ಉತ್ಸಾಹ, ಹುಮ್ಮಸ್ಸಿನ ವಾತಾವರಣ ಇದೆ. ಸ್ಟಾರ್ಟ್‌ ಅಪ್‌ನಲ್ಲಿ ದಾಖಲೆ ಮಟ್ಟದಲ್ಲಿ ಹೂಡಿಕೆ ಆಗುತ್ತಿದೆ. ಕೊವಿನ್ ಪೋರ್ಟಲ್ ಈಗ ವಿಶ್ವದ ಆಕರ್ಷಣೆಯಾಗಿದೆ.

ಮೇಡ್ ಇನ್ ಇಂಡಿಯಾದ ಶಕ್ತಿ ಬಹಳ ದೊಡ್ಡದಾಗಿದೆ. ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸಕಾರಾತ್ಮಕ ವಾತಾವರಣ ಇದೆ. ವ್ಯವಹಾರದಲ್ಲಿ ವೋಕಲ್ ಫಾರ್ ಲೋಕಲ್‌ ಜಾರಿಗೆ ತರಬೇಕು. ಕಳೆದ ವರ್ಷ ದೀಪಾವಳಿ ವೇಳೆ ಆತಂಕದ ಕಾರ್ಮೋಡ ಇತ್ತು. ಆದರೆ ಈ ಬಾರಿ 100 ಕೋಟಿ ಡೋಸ್​ ನೀಡಿಕೆ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

 ದೀಪಾವಳಿ ಸಂದರ್ಭದಲ್ಲಿ ಕೊರೊನಾ ಭಯ

ದೀಪಾವಳಿ ಸಂದರ್ಭದಲ್ಲಿ ಕೊರೊನಾ ಭಯ

ಕಳೆದ ವರ್ಷ ದೀಪಾವಳಿ ವೇಳೆ ಆತಂಕದ ಕಾರ್ಮೋಡವಿತ್ತು. ಆದರೆ ಈ ಬಾರಿ 100 ಕೋಟಿ ಡೋಸ್​ ನೀಡಿಕೆ ಸಂಭ್ರಮ ಮನೆ ಮಾಡಿದೆ. ದೀಪಾವಳಿ ವೇಳೆ ಜನರಲ್ಲಿ ಹೊಸ ನಿರೀಕ್ಷೆ ಸೃಷ್ಟಿಯಾಗಿದೆ.

 ಮೇಡ್ ಇನ್ ಇಂಡಿಯಾ ವಸ್ತುಗಳನ್ನು ಖರೀದಿಸಲು ಮನವಿ

ಮೇಡ್ ಇನ್ ಇಂಡಿಯಾ ವಸ್ತುಗಳನ್ನು ಖರೀದಿಸಲು ಮನವಿ

ಮೇಡ್ ಇನ್ ಇಂಡಿಯಾದ ಶಕ್ತಿ ಬಹಳ ದೊಡ್ಡದಾಗಿದೆ. ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸಕಾರಾತ್ಮಕ ವಾತಾವರಣ ಇದೆ. ವ್ಯವಹಾರದಲ್ಲಿ ವೋಕಲ್ ಫಾರ್ ಲೋಕಲ್‌ ಜಾರಿಗೆ ತರಬೇಕು. ಕಳೆದ ವರ್ಷ ದೀಪಾವಳಿ ವೇಳೆ ಆತಂಕದ ಕಾರ್ಮೋಡವಿತ್ತು. ಆದರೆ ಈ ಬಾರಿ 100 ಕೋಟಿ ಡೋಸ್​ ನೀಡಿಕೆ ಸಂಭ್ರಮ ಮನೆ ಮಾಡಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ.

 ಭಾರತದ ಶಕ್ತಿ ತೋರಿಸಿದೆ

ಭಾರತದ ಶಕ್ತಿ ತೋರಿಸಿದೆ

100 ಕೋಟಿ ಡೋಸ್ ಲಸಿಕೆ ನವ ಭಾರತದ ಶಕ್ತಿ ತೋರಿಸಿದೆ. ಸಾಂಕ್ರಾಮಿಕ ರೋಗ ಯಾವುದೇ ತಾರತಮ್ಯ ಮಾಡುವುದಿಲ್ಲ. ಅದೇ ರೀತಿ ಲಸಿಕೆಯಲ್ಲೂ ತಾರತಮ್ಯ ಮಾಡಬಾರದು. ವಿಐಪಿಗಳಿಗೂ ಸಾಮಾನ್ಯರಂತೆಯೇ ಲಸಿಕೆಯನ್ನು ನೀಡಲಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲೂ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ಧಾರೆ. ಆದರೆ ಭಾರತದಲ್ಲಿ ಜನರ ಪಾಲುದಾರಿಕೆಯನ್ನ ನಮ್ಮ ಶಕ್ತಿಯಾಗಿ ಬಳಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಲಸಿಕೆ ಸಂಶೋಧನೆಯಲ್ಲಿ ಬೇರೆ ದೇಶಗಳಿಗೆ ಪರಿಣತಿ ಇತ್ತು. ಭಾರತ ಸಹ ಲಸಿಕೆಗಾಗಿ ಬೇರೆ ದೇಶಗಳನ್ನು ಅವಲಂಬಿಸಿತ್ತು. ಭಾರತ ಕೊರೊನಾ ವಿರುದ್ಧ ಹೋರಾಡಲು ಸಾಧ್ಯವೇ ಎಂಬ ಪ್ರಶ್ನೆ ಇತ್ತು. ಭಾರತದಲ್ಲಿ ಲಸಿಕೆ ಯಾವಾಗ ತರುತ್ತೆ, ಹಣ ಎಲ್ಲಿಂದ ತರುತ್ತೆ ಎಂಬ ಪ್ರಶ್ನೆ ಇತ್ತು. 100 ಕೋಟಿ ಡೋಸ್ ಲಸಿಕೆ ಎಲ್ಲ ಪ್ರಶ್ನೆಗಳಿಗೆ ಭಾರತವು ಉತ್ತರಿಸಿದೆ ಎಂದು ಪ್ರಧಾನಿ ನುಡಿದಿದ್ದಾರೆ. ಭಾರತದಲ್ಲಿ ಉಚಿತವಾಗಿ ಕೊವಿಡ್ ಲಸಿಕೆ ನೀಡಲಾಗಿದೆ. ಇಡೀ ವಿಶ್ವ ಭಾರತದ ಈ ಸಾಮರ್ಥ್ಯವನ್ನು ನೋಡುತ್ತಿದೆ. 100 ಕೋಟಿ ಡೋಸ್ ಲಸಿಕೆ ಕೇವಲ ಅಂಕಿಸಂಖ್ಯೆಯಲ್ಲ ಎಂದು ಅವರು ಹೇಳಿದ್ದಾರೆ.
 ಮಾಸ್ಕ್‌ ಒಂದು ಶಸ್ತ್ರ

ಮಾಸ್ಕ್‌ ಒಂದು ಶಸ್ತ್ರ

ಮಾಸ್ಕ್‌ ಅನ್ನು ಯುದ್ಧಕ್ಕೆ ಬಳಸುವ ಶಸ್ತ್ರ ಎಂದು ತಿಳಿಯಿರಿ, ಕೊರೊನಾ ಸೋಂಕು ದೇಶದಲ್ಲಿ ಕಡಿಮೆಯಾಗಿದೆ ಆದರೆ ಸಂಪೂರ್ಣವಾಗಿ ನಾಶವಾಗಿಲ್ಲ ಹೀಗಾಗಿ, ಪ್ರತಿಯೊಬ್ಬರು ಮನೆಯಿಂದ ಹೊರಹೋಗುವ ಮುನ್ನ ಚಪ್ಪಲಿಯಂತೆಯೇ ಮಾಸ್ಕ್ ಕೂಡ ಧರಿಸುವುದನ್ನು ಮರೆಯಬೇಡಿ ಎಂದು ಸಲಹೆ ನೀಡಿದರು.

English summary
PM Modi says the 100 cr vaccination landmark was achieved in just nine months despite many critics casting doubts on India’s capability, he also said that, Agriculture Sector Has Saved The Country During Corona.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X