Get Updates
Get notified of breaking news, exclusive insights, and must-see stories!

Gujarat and HP Election Results 2022: ದೇಶದ ಜನರ ಕುರಿತು ಪ್ರಧಾನಿ ಮೋದಿ ಭಾಷಣ

ನವದೆಹಲಿ, ಡಿಸೆಂಬರ್ 08: ದೇಶದ ಎಲ್ಲ ವರ್ಗದವರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಜನರ ಆಶೀರ್ವಾದದಿಂದ ಗುಜರಾತ್‌ನಲ್ಲಿ ಐತಿಹಾಸಿಕ ಗೆಲುವು ಲಭಿಸಿದೆ. ಹಿಮಾಚಲಯ ಪ್ರದೇಶದಲ್ಲಿ ಕಡಿಮೆ ಅಂತರದಲ್ಲಿ ಬಿಜೆಪಿಗೆ ಸೋಲಾಗಿದೆ. ಇಲ್ಲಿ ಸಹ ಜನ ಬಿಜೆಪಿಯನ್ನು ಗೆಲ್ಲಿಸಲು ಪ್ರಯತ್ನಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ವಂದಿಸಿದರು.

ಗುಜರಾತ್‌ನಲ್ಲಿ ಸತತ ಏಳನೇ ಭಾರಿಗೆ ಬಹುಮತದಿಂದ ಬಿಜೆಪಿ ಗೆಲುವು ಸಾಧಿಸಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಪ್ರಧಾನಿ ನರೇಂದ್ರ ಮೋದಿ ಮತದಾರರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಉತ್ತರ ಪ್ರದೇಶ, ಬಿಹಾರ ಉಪಚುನಾವಣೆಯಲ್ಲೂ ಬಿಜೆಪಿಗೆ ಜಯ ಸಿಕ್ಕಿದೆ. ಇದೀಗ ಮತದಾರರ ಆಶೀರ್ವಾದಿಂದ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಎರಡು ರಾಜ್ಯಗಳಲ್ಲೂ ಶಾಂತಿಯುತ ಮತದಾನ ನಡೆದಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಗುಜರಾತಿನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಎರಡು ರಾಜ್ಯಗಳಲ್ಲಿ ಒಂದು ಬೂತ್‌ನಲ್ಲೂ ಮರು ಮತದಾನ ನಡೆದಿಲ್ಲ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಕಡಿಮೆ ಅಂತರದಲ್ಲಿ ಸೋಲು ಕಂಡಿದೆ. ಹಿಮಾಚಲಯ ಪ್ರದೇಶಗಳಲ್ಲಿ ಬಿಜೆಪಿಯು ಜನಪರ ಕೆಲಸಗಳನ್ನು ಮುಂದುವರಿಸಲಿದೆ ಎಂದು ಹೇಳಿದರು.

ಕುಟುಂಬ ರಾಜಕಾರಣಕ್ಕೆ ವಿರೋಧ ಹೆಚ್ಚಾಗಿದೆ

ಕುಟುಂಬ ರಾಜಕಾರಣಕ್ಕೆ ವಿರೋಧ ಹೆಚ್ಚಾಗಿದೆ

ಬಿಜೆಪಿಗೆ ಬೆಂಬಲ ಹೆಚ್ಚುತ್ತಿರುವುದು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಹೆಚ್ಚುತ್ತಿರುವ ವಿರೋಧವನ್ನು ಸೂಚಿಸುತ್ತದೆ. ಹಿಮಾಚಲ ಪ್ರದೇಶದಲ್ಲಿ ಅತ್ಯಂತ ಕಡಿಮೆ ಅಂತದಲ್ಲಿ ಸೋತಿದ್ದೇವೆ. ಹಿಮಾಚಲ ಪ್ರದೇಶ ಜನರು ಬಿಜೆಪಿ ಗೆಲ್ಲಿಸಲು ಪ್ರಯತ್ನಿಸಿದ್ದಾರೆ ಎಂದರು.

ಯುವಜನರಿಗೆ ಬಿಜೆಪಿ ಮೇಲೆ ಅಪಾರ ನಂಬಿಕೆ ಇದೆ. ಹೀಗಾಗಿಯೇ ಗುಜರಾತ್‌ನಲ್ಲಿ ಜಾತಿವಾದ ರಾಜಕಾರಣಕ್ಕೆ ಯುವಕರು ತಕ್ಕ ಪಾಠ ಕಲಿಸಿದ್ದಾರೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರು ಬೆಂಬಲಿಸಿದ್ದಾರೆ. ಜಾತಿ, ವರ್ಗ, ಮತಗಳನ್ನು ಮೀರಿ ಜನರು ಬಿಜೆಪಿಗೆ ಮತ ನೀಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಅನೇಕ ಬದಲಾವಣೆಗಳು ಆಗಿವೆ ಎಂದು ಪ್ರಧಾನಿ ವಿವರಿಸಿದರು.

ಎಸ್‌ಸಿ, ಎಸ್‌ಟಿ 34 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ

ಎಸ್‌ಸಿ, ಎಸ್‌ಟಿ 34 ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ

ಭಾಷೆ, ವರ್ಗ ಎಂದು ಹಲವು ವಿಚಾರಗಳಲ್ಲಿ ಕಿಚ್ಚು ಹಚ್ಚುತ್ತಿದ್ದಾರೆ. ತಾತ್ಕಾಲಿಕ ಲಾಭ ಪಡೆಯಲು ಹವಣಿಸುತ್ತಿದ್ದಾರೆ. ಜಗಳವಾಡಲು ದೇಶದಲ್ಲಿ ಸಾಕಷ್ಟು ವಿಚಾರಗಳು ಇವೆ. ಆದರೆ ದೇಶ ನಮ್ಮದು, ಇಂಡಿಯಾ ಫಸ್ಟ್ ಎಂಬ ಭಾವನೆ ಬರಬೇಕು.

ಗುಜರಾತ್‌ನಲ್ಲಿ 40 ಎಸ್‌ಸಿ, ಎಸ್‌ಟಿ ಮೀಸಲು ಕ್ಷೇತ್ರಗಳಿವೆ. ಅದರಲ್ಲಿ 34 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಮ್ಮ ಸರ್ಕಾರ ಆದಿವಾಸಿ ಸಮುದಾಯಗಳ ಅಭಿವೃದ್ಧಿಗೆ ಹಲವು ಕ್ರಮ ಕೈಗೊಂಡಿದೆ. ಎಲ್ಲ ವರ್ಗದ ಜನರ ಆಯ್ಕೆ ಈಗ ಬಿಜೆಪಿಯೇ ಆಗಿದೆ. ಬಿಜೆಪಿ ನೇತೃತ್ವದ ಸರ್ಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅವರು ತಿಳಿಸಿದರು.

ಅಭಿವೃದ್ಧಿಗೆ ಜತೆಯಾಗೋಣ: ಪ್ರಧಾನಿ ಕರೆ

ಅಭಿವೃದ್ಧಿಗೆ ಜತೆಯಾಗೋಣ: ಪ್ರಧಾನಿ ಕರೆ

ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಾಗಿದೆ. ಕಳೆದ ಎಂಟು ವರ್ಷಗಳಲ್ಲಿ ಬಡತನ ನಿವಾರಣೆಗೆ ಬಿಜೆಪಿ ಶ್ರಮಿಸುತ್ತಿದೆ. ಸ್ವಾಭಿಮಾನಿ ಜೀವನಕ್ಕಾಗಿ ಆದಿವಾಸಿಗಳಿಂದ ಬಿಜೆಪಿಗೆ ಬೆಂಬಲ ದೊರೆತಿದೆ. ಮಹಿಳಾ ಸಶಕ್ತಿಕರಣಕ್ಕಾಗಿ ಬಿಜೆಪಿ ಹಲವು ಕ್ರಮ ಕೈಗೊಂಡಿದೆ. ಅಭಿವೃದ್ಧಿ ಭಾರತಕ್ಕಾಗಿ ನಾವು ಜೊತೆಯಾಗೋಣ ಎಂದು ಪ್ರಧಾನಿ ಕರೆ ನೀಡಿದರು.

ಬಿಜೆಪಿಯಿಂದಲೇ ಆದಿವಾಸಿ ರಾಷ್ಟ್ರಪತಿ

ಬಿಜೆಪಿಯಿಂದಲೇ ಆದಿವಾಸಿ ರಾಷ್ಟ್ರಪತಿ

ಗುಜರಾತಿನಲ್ಲಿ ಆದಿವಾಸಿಗಳ ಕ್ಷೇತ್ರದಲ್ಲೂ ಬಿಜೆಪಿ ಜಯ ಗಳಿಸಿದೆ. ಆದಿವಾಸಿಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ಗುಜರಾತ್ ಸರ್ಕಾರ ಸದಾ ಬದ್ಧ. ಬಿಜೆಪಿಯಿಂದಲೇ ದೇಶಕ್ಕೆ ಮೊದಲ ಆದಿವಾಸಿ ರಾಷ್ಟ್ರಪತಿ ಸಿಕ್ಕಿದ್ದಾರೆ. ಜನರ ಆಶೀರ್ವಾದ ಹೀಗೆ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+