ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ಪಿಎಂ ಮೋದಿ ಹೇಳಿದ್ದೇನು?

ಅಹಮದಾಬಾದ್‌, ಡಿಸೆಂಬರ್‌ 8: ಗುಜರಾತ್‌ನ ಕಾರ್ಯಕರ್ತರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಲ್ಲಿ ನೀವು ಪ್ರತಿಯೊಬ್ಬರೂ ಚಾಂಪಿಯನ್. ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ. ಗುಜರಾತ್‌ಗೆ ಧನ್ಯವಾದಗಳು. ಈ ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಬಹಳಷ್ಟು ಸಂತಸಗೊಂಡಿದ್ದೇನೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ ಮತ್ತು ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಸಾಧಿಸಿದೆ. ಇದು ಪ್ರಧಾನಮಂತ್ರಿನರೇಂದ್ರ ಮೋದಿ ಅವರ ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಸಂದ ವಿಜಯವಾಗಿದೆ. ಗೃಹ ಸಚಿವ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಈ ಮಹಾ ವಿಜಯ ಭೂಪೇಂದ್ರ ಪಟೇಲ್‌ ಹಾಗೂ ಗುಜರಾತ್‌ನ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

PM Narendra Modi thanks BJP party workers for the landslide victory in Gujarat Elections

ಶುಕ್ರವಾರ ಗುಜರಾತ್‌ ವಿಧಾನಸಭೆಯಲ್ಲಿ 5.30 ಗಂಟೆ ಸುಮಾರಿಗೆ ಬರೋಬ್ಬರಿ 128 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇನ್ನೂ 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಪ್ರತಿಪಕ್ಷ ಕಾಂಗ್ರೆಸ್‌ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದ 5 ಗಂಟೆ ಸುಮಾರಿಗೆ ಆಮ್‌ ಆದ್ಮಿ ಪಕ್ಷ 4 ಸ್ಥಾನ ಗೆದ್ದರೆ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಇದೇ ಮೊದಲ ಬಾರಿಗೆ ಗುಜರಾತ್‌ನ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಸಮಾಜವಾದಿ ಪಕ್ಷ ಐತಿಹಾಸಿಕ ಖಾತೆ ತೆರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+