ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವದ ಅತಿ ಉದ್ದದ ಅಟಲ್ ಸುರಂಗವನ್ನು ಇಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ

|
Google Oneindia Kannada News

ಶಿಮ್ಲಾ, ಅಕ್ಟೋಬರ್ 03: ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ.

ಹಿಮಾಚಲ ಪ್ರದೇಶದ ರೋಹ್ಟಾಂಗ್‌ನಲ್ಲಿರುವ 9.2 ಕಿ.ಮೀ ಉದ್ದದ ಅಟಲ್ ಸುರಂಗ ಮಾರ್ಗವೂ ವಿಶ್ವದಲ್ಲಿಯೇ ಅತೀ ಉದ್ದದ ಹೆದ್ದಾರಿ ಮಾರ್ಗವಾಗಿದೆ. ಮನಾಲಿ ಮತ್ತು ಲೇಹ್ ನಡುವಿನ ರಸ್ತೆ ದೂರವನ್ನು 46 ಕಿಲೋಮೀಟರ್ ಕಡಿಮೆ ಮಾಡುತ್ತದೆ. ಜೊತೆಗೆ ನಾಲ್ಕು ಗಂಟೆಗಳ ಪ್ರಯಾಣದ ಅವಧಿ ಸಹ ಉಳಿತಾಯವಾಗಲಿದೆ.

Atal tunnel

ಮನಾಲಿಯ ದಕ್ಷಿಣ ತುದಿಯಲ್ಲಿ ಅಟಲ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಹಲವಾರು ಜನರ ಪರಿಶ್ರಮದ ಫಲ: ಮೋದಿರಾಷ್ಟ್ರೀಯ ಶಿಕ್ಷಣ ನೀತಿ ಹಲವಾರು ಜನರ ಪರಿಶ್ರಮದ ಫಲ: ಮೋದಿ

ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಅಲ್ಲಿ ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈ ಸುರಂಗ ಮಾರ್ಗದಿಂದ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿವೆಯನ್ನು ವರ್ಷವಿಡಿ ಸಂಪರ್ಕಿಸಲಿದೆ. ಪ್ರತಿ 60 ಮೀಟರ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದು, ಮತ್ತು ಸುರಂಗದ ಒಳಗೆ ಪ್ರತಿ 500 ಮೀಟರ್‌ನಲ್ಲಿ ತುರ್ತು ನಿರ್ಗಮನ ಸುರಂಗಗಳನ್ನು ನಿರ್ಮಾಣ ಮಾಡಲಾಗಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನಾಚರಣೆ ನೆನಪಿಗಾಗಿ 2019 ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ರೋಹ್ಟಾಂಗ್ ಮಾರ್ಗವನ್ನು ಅಟಲ್ ಸುರಂಗ ಎಂದು ಮರುನಾಮಕರಣ ಮಾಡಿದರು.

English summary
PM Narendra Modi to inaugurate longest highway tunnel in the world Atal Tunnel at Rohtang in Himachal Pradesh today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X