ದೇಶದಲ್ಲಿ ಕೊರೊನಾ ಭೀತಿ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ನವದೆಹಲಿ, ಡಿ. 22: ಭಾರತದಲ್ಲಿ ಒಮಿಕ್ರಾನ್ ಸಬ್‌ವೇರಿಯಂಟ್ BF.7 ರೂಪಾಂತರದ ನಾಲ್ಕು ಪ್ರಕರಣಗಳು ವರದಿಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ದೇಶದ ಕೋವಿಡ್ 19 ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಚೀನಾದಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಇತರ ದೇಶಗಳಲ್ಲಿಯೂ ಒಮಿಕ್ರಾನ್ ಸಬ್‌ವೇರಿಯಂಟ್ BF.7 ರೂಪಾಂತರದ ನಾಲ್ಕು ಪ್ರಕರಣಗಳು ಬುಧವಾರ ಭಾರತದಲ್ಲಿ ಪತ್ತೆಯಾಗಿವೆ. ಇದು ದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇತ್ತ, ರಾಷ್ಟ್ರ ರಾಜಧಾನಿ ಫುಲ್ ಅಲರ್ಟ್ ಆಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಉನ್ನತ ಅಧಿಕಾರಿಗಳು ಗುರುವಾರ ತುರ್ತು ಕೋವಿಡ್ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.
ಗುಜರಾತ್ ಮತ್ತು ಒಡಿಶಾದಲ್ಲಿ ಪ್ರಕರಣಗಳು ಪತ್ತೆಯಗಿವೆ. ಗುಜರಾತ್‌ನ ಆರೋಗ್ಯ ಇಲಾಖೆಯು ಎರಡು ಪ್ರಕರಣಗಳು ವರದಿಯಾಗಿವೆ ಎಂಬುದನ್ನು ತಿಳಿಸಿದೆ. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ BF.7 ಮತ್ತು BF.12 ರೂಪದ ಒಮಿಕ್ರಾನ್ ಸೋಂಕಿತ ರೋಗಿಗಳು ವರದಿಯಾಗಿದ್ದಾರೆ ಎಂದು ದೃಢಪಡಿಸಿದೆ.
ಸೋಂಕಿತ ಇಬ್ಬರಿಗೂ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಮೊದಲ ಪ್ರಕರಣ ಜುಲೈನಲ್ಲಿ ಬೆಳಕಿಗೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.
ಇನ್ನು, "ಭಾರತದಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರು ಉತ್ತಮ ರಕ್ಷಣೆ ಹೊಂದಿದ್ದಾರೆ ಎಂಬುದನ್ನು ಸಾಬೀತುಪಡಿಸಲು ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ. ಈಗ ಎಲ್ಲಾ ಕೊರೊನಾ ರೂಪಾಂತರಗಳನ್ನು ಮೇಲ್ವಿಚಾರಣೆ ಮಾಡುವುದು ಮುಖ್ಯ. ಪ್ರಸ್ತುತ ಸನ್ನಿವೇಶದಲ್ಲಿ ವೈರಸ್‌ನಿಂದ ನಾವು ಯಾವುದೇ ಗಂಭೀರ ಸಮಸ್ಯೆಯನ್ನು ಎದುರಿಸುವುದು ಅಸಂಭವ" ಎಂದು ದೆಹಲಿ ಏಮ್ಸ್‌ನ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ ಸಂಜಯ್ ರೈ ಹೇಳಿದ್ದಾರೆ.












Click it and Unblock the Notifications