Get Updates
Get notified of breaking news, exclusive insights, and must-see stories!

ನ್ಯಾಷನಲ್ ಗೇಮ್ಸ್ ಉದ್ಘಾಟನೆ: ಆಕರ್ಷಕ ಡ್ರೋನ್ ಶೋ ಬಗ್ಗೆ ಮೋದಿ ಟ್ವೀಟ್

ಅಹಮದಾಬಾದ್, ಸೆ. 29: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಗುಜರಾತ್ ರಾಜ್ಯದಲ್ಲಿ ರಾಷ್ಟ್ರೀಯ ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ಮತ್ತು 30 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

ಎರಡು ದಿನಗಳ ಪ್ರವಾಸದ ವೇಳೆ ಸುಮಾರು 29,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಸಂಜೆ 7 ಗಂಟೆಗೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ರಾತ್ರಿ 9 ಗಂಟೆಗೆ ಅಹ್ಮದಾಬಾದ್ ನ ಜಿಎಂಡಿಸಿ ಮೈದಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದಲ್ಲಿಯೂ ಪ್ರಧಾನಮಂತ್ರಿ ಅವರು ಪಾಲ್ಗೊಳ್ಳುವರು.

ಕ್ರೀಡಾಕೂಟ ಆಯೋಜನೆ ಮಾಡಿರುವ ಅಹಮದಾಬಾದ್ ನಗರದಲ್ಲಿ ಆಕರ್ಷಕ ಡ್ರೋನ್ ಶೋ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಯನ್ನು ಡ್ರೋನ್ ಶೋ ಮೂಲಕ ತೋರಿಸಿರುವುದು ಸಾಮಾಜಿಕ ಜಾಲ ತಾಣದಲ್ಲಿ ಟ್ರೆಂಡ್ ಆಗುತ್ತಿದೆ.

PM Narendra Modi tweets on Spectacular Drone Show in Ahmedabad National Games Opening


36ನೇ ರಾಷ್ಟ್ರೀಯ ಕ್ರೀಡಾಕೂಟ
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಈ ವೇಳೆ ಅವರು, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ದೇಶಾದ್ಯಂತದ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ದೇಸರ್ ನಲ್ಲಿ ವಿಶ್ವದರ್ಜೆಯ "ಸ್ವರ್ಣಿಮ್ ಗುಜರಾತ್ ಕ್ರೀಡಾ ವಿಶ್ವವಿದ್ಯಾಲಯ"ವನ್ನು ಉದ್ಘಾಟಿಸಲಿದ್ದಾರೆ. ಈ ಮಹತ್ವದ ಯೋಜನೆಯು ದೇಶದ ಕ್ರೀಡಾ ಶಿಕ್ಷಣ ಭೂದೃಶ್ಯವನ್ನು ಪರಿವರ್ತಿಸುವ ನಿರೀಕ್ಷೆಯಿದೆ.

ಗುಜರಾತ್ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾಕೂಟಗಳು ನಡೆಯುತ್ತಿವೆ. ಇದನ್ನು 2022 ರ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 12 ರವರೆಗೆ ಆಯೋಜಿಸಲಾಗುವುದು. ದೇಶಾದ್ಯಂತ ಸುಮಾರು 15,000 ಕ್ರೀಡಾಪಟುಗಳು, ತರಬೇತುದಾರರು ಮತ್ತು ಅಧಿಕಾರಿಗಳು 36 ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಲಿದ್ದು, ಇದುವರೆಗಿನ ಅತಿದೊಡ್ಡ ರಾಷ್ಟ್ರೀಯ ಕ್ರೀಡಾಕೂಟವಾಗಿದೆ.

ಅಹ್ಮದಾಬಾದ್, ಗಾಂಧಿನಗರ, ಸೂರತ್, ವಡೋದರಾ, ರಾಜ್ ಕೋಟ್ ಮತ್ತು ಭಾವನಗರ ಸೇರಿ ಆರು ನಗರಗಳಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಆಗಿನ ಮುಖ್ಯಮಂತ್ರಿ ಮತ್ತು ಪ್ರಸ್ತುತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಗುಜರಾತ್ ಅಂತಾರಾಷ್ಟ್ರೀಯ ಮಾನದಂಡಗಳ ಬಲವಾದ ಕ್ರೀಡಾ ಮೂಲಸೌಕರ್ಯವನ್ನು ಸೃಷ್ಟಿಸುವ ಪ್ರಯಾಣವನ್ನು ಪ್ರಾರಂಭಿಸಿತು, ಇದು ಅತ್ಯಂತ ಕಡಿಮೆ ಅವಧಿಯಲ್ಲಿ ಕ್ರೀಡಾಕೂಟಕ್ಕೆ ಸಿದ್ಧತೆ ನಡೆಸಲು ರಾಜ್ಯಕ್ಕೆ ಸಹಾಯ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+