• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಶ್ವದ ಪ್ರಾಚೀನ 'ಕ್ಷೇತ್ರ'ಕ್ಕೆ ಹೊರಟ ಸಂಸದ ಮೋದಿ

By Mahesh
|

ವಾರಣಾಸಿ, ನ.6: ವಿಶ್ವದ ಪ್ರಾಚೀನ, ಪವಿತ್ರ ನಗರವಾಗಿರುವ ವಾರಣಾಸಿ ಶುಕ್ರವಾರ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲು ಸಿದ್ಧತೆ ಭರದಿಂದ ಸಾಗಿದೆ. ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಮೋದಿ ಕಾಲಿರಿಸುತ್ತಿದ್ದಾರೆ. ಮೋದಿ ಅವರ ಭೇಟಿ ಸಂದರ್ಭದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ತಳಿರು-ತೋರಣಗಳಿಂದ ಸಿಂಗಾರಗೊಂಡಿರುವ ವಾರಣಾಸಿಗೆ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಖುದ್ದು ಆಗಮಿಸಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ.[ಗಂಗಾ ನದಿ ಶುದ್ಧೀಕರಣ: ಗತವೈಭವ ಮರಳುವುದೆ?]

ಅಖಿಲೇಶ್ ಯಾದವ್ ಅವರಿಗೆ ಕೇಂದ್ರ ಜವಳಿ ಸಚಿವ ಸಂತೋಷ್ ಗಂಗ್ವಾರ್, ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಓಪಿ ಛೌಬೆ ಅವರು ಸಾಥ್ ನೀಡಲಿದ್ದಾರೆ. ಮೋದಿಯವರೊಂದಿಗೆ ಐದರಿಂದ ಆರು ಮಂದಿ ಕೇಂದ್ರ ಸಚಿವರು ಆಗಮಿಸುವ ನಿರೀಕ್ಷೆಯಿದೆ. [ವಾರಣಾಸಿಯಲ್ಲಿ ಸತ್ತರೆ ಮುಕ್ತಿ ಸಿಗುವುದಂತೆ!]

ಬಿಗಿ ಭದ್ರತಾ ವ್ಯವಸ್ಥೆ: ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸುಮಾರು 12 ಎಸ್ಪಿ ಅಧಿಕಾರಿಗಳು, 18 ಹೆಚ್ಚುವರಿ ಎಸ್ ಪಿ, 20 ಡಿವೈಎಸ್ಪಿ , 135 ಸಬ್ ಇನ್ಸ್ ಪೆಕ್ಟರ್ ಗಳು, ಒಂದು ಸಾವಿರಕ್ಕೂ ಹೆಚ್ಚು ಪೊಲೀಸರು ಹಾಗೂ ಇತರೆ ಶ್ರೇಣಿಯ ಭದ್ರತಾ ಪಡೆಗಳನ್ನು ಒದಗಿಸಲಾಗಿದೆ ಎಂದು ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಐಜಿ ಎ.ಸತೀಶ್ ಗಣೇಶ್ ತಿಳಿಸಿದ್ದಾರೆ.

ಸ್ವಚ್ಛತಾ ಅಭಿಯಾನ, ಗ್ರಾಮದತ್ತು ಯೋಜನೆ: ಮೋದಿ ಅವರು ವಾರಣಾಸಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಜನತೆ ಇಡೀ ನಗರವನ್ನು ಸ್ವಚ್ಛಗೊಳಿಸಿದ್ದಾರೆ. ಪ್ರಧಾನಿಯವರೇ ಕರೆಕೊಟ್ಟಿದ್ದ ಸ್ವಚ್ಛ ಭಾರತ ಅಭಿಯಾನದಿಂದ ಉತ್ತೇಜಿತರಾದ ಜನರು ಇಲ್ಲಿನ ಕಸವನ್ನು ಸ್ವಯಂಪ್ರೇರಿತವಾಗಿ ಸ್ವಚ್ಛಮಾಡಿದ್ದಾರೆ. [ಸಂಸದ ಸ್ಥಾನಕ್ಕೆ ಮೋದಿ ರಾಜೀನಾಮೆ]

ವಾರಣಾಸಿಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕು ಸ್ಥಾಪನೆ ನಡೆಸಲಿರುವ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಯಾವ ಗ್ರಾಮ ದತ್ತು ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.ಈ ಯೋಜನೆಯಡಿ ಗ್ರಾಮವನ್ನು ದತ್ತು ತೆಗೆದುಕೊಂಡು ಕುಡಿಯುವ ನೀರು, ವಿದ್ಯುತ್ ದೀಪ, ಒಳಚರಂಡಿ, ಶೌಚಾಲಯ, ಸಮುದಾಯ ಭವನ, ಶಾಲಾ ಕಟ್ಟಡಗಳು ಸೇರಿದಂತೆ ವಿವಿಧ ರೀತಿಯ ಸೌಲಭ್ಯ ಒದಗಿಬರಲಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಿದ್ದ ನರೇಂದ್ರಮೋದಿ ಸುಮಾರು 3,70,000 ಅಧಿಕ ಮತಗಳಿಂದ ಗೆದ್ದಿದ್ದರು. ಕಳೆದ ಜೂನ್ ನಲ್ಲಿ ನಡೆಸಿದ್ದ ಕೇಂದ್ರ ಬಜೆಟ್‍ನಲ್ಲಿ ವಾರಣಾಸಿ ನಗರಕ್ಕೆ ವಿಶೇಷ ಅನುದಾನ ನೀಡುವ ವಾಗ್ದಾನ ಮಾಡಿದ್ದರು. ಗಂಗಾ ನದಿ ಸ್ವಚ್ಛತೆಗಾಗಿ ಪ್ರತ್ಯೇಕ ಖಾತೆಯನ್ನು ಸೃಷ್ಟಿಸಿ ಉಮಾಭಾರತಿ ಅವರಿಗೆ ಜವಾಬ್ದಾರಿಯನ್ನು ನೀಡಿದ್ದರು. (ಪಿಟಿಐ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Prime Minister Narendra Modi will visit his Lok Sabha constituency Varanasi on Friday, his first visit after assuming charge. During the visit, he is likely to firm up plans for its development. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more