ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Gujarat Assembly Elections 2022: ಶಾಯಿ ಹಾಕಿದ ಬೆರಳನ್ನು ಜನರಿಗೆ ತೋರಿಸಿದ ಪ್ರಧಾನಿ ಮೋದಿ

|
Google Oneindia Kannada News

ಅಹಮದಾಬಾದ್, ಡಿಸೆಂಬರ್‌ 5: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು.

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಅವರು, ಶಾಹಿ ಹಾಕಿದ ಬೆರಳನ್ನು ಜನರಿಗೆ ತೋರಿಸಿದರು.

ಗುಜರಾತ್ ಚುನಾವಣೆ, ಯಾರಿಗೆ ಗೆಲುವು; ಜ್ಯೋತಿಷ್ಯ ಭವಿಷ್ಯಗುಜರಾತ್ ಚುನಾವಣೆ, ಯಾರಿಗೆ ಗೆಲುವು; ಜ್ಯೋತಿಷ್ಯ ಭವಿಷ್ಯ

ಅಹಮದಾಬಾದ್‌ನ ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆ ಎದುರು ನೆರೆದಿದ್ದ ಜನಸಮೂಹದತ್ತ ಪ್ರಧಾನಿ ಮೋದಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿತು.

ಮೋದಿಯವರು ದಾರಿಯಲ್ಲಿದ್ದ ಜನರಿಗೆ ನಮಸ್ಕರಿಸಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಂತರ ಅವರು ಮತದಾನ ಕೇಂದ್ರದ ಬಳಿ ಇರುವ ತಮ್ಮ ಹಿರಿಯ ಸಹೋದರ ಸೋಮು ಮೋದಿ ಅವರ ಮನೆಗೆ ತೆರಳಿದರು.

 ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ರಾಜ್ಯದ ಜನತೆಗೆ ಪ್ರಧಾನಿ ಮೋದಿ ಮನವಿ ಮಾಡಿದರು.

ಗುಜರಾತ್‌ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಮೋದಿ, 'ಗುಜರಾತ್ ಚುನಾವಣೆಯ 2 ನೇ ಹಂತದಲ್ಲಿ ಮತ ಚಲಾಯಿಸುತ್ತಿರುವ ಎಲ್ಲರಿಗೂ, ವಿಶೇಷವಾಗಿ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ. ನಾನು ಬೆಳಗ್ಗೆ 9 ಗಂಟೆಗೆ ಅಹಮದಾಬಾದ್‌ನಲ್ಲಿ ನನ್ನ ಮತವನ್ನು ಚಲಾಯಿಸಲಿದ್ದೇನೆ' ಎಂದು ತಿಳಿಸಿದ್ದಾರೆ.

 ಮತದಾನ ಮಾಡಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಮತದಾನ ಮಾಡಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇಂದು ಅಹಮದಾಬಾದ್‌ನಲ್ಲಿ ಮತದಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿ ಗೆಲ್ಲುಬೇಕಿರುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಗುಜರಾತ್‌ ಚುನಾವಣೆಯಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದ ಮೋದಿ ಹಾಗೂ ಶಾ ಹಲವಾರು ಸಾರ್ವಜನಿಕ ಸಭೆಯ, ರೋಡ್‌ ಶೋಗಳನ್ನು ನಡೆಸಿದ್ದಾರೆ. ಆಡಳಿತ ವಿರೋಧಿ ಅಲೆಯ ಹೊರತಾಗಿಯೂ, ಗುಜರಾತ್‌ನಲ್ಲಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿಲ್ಲ ಎಂಬ ಮಾತುಗಳೂ ಕೇಳಿಬಂದಿವೆ.

 ಉತ್ತರ ಹಾಗೂ ಮಧ್ಯ ಗುಜರಾತ್‌ನಲ್ಲಿ ಎರಡನೇ ಹಂತದ ಮತದಾನ

ಉತ್ತರ ಹಾಗೂ ಮಧ್ಯ ಗುಜರಾತ್‌ನಲ್ಲಿ ಎರಡನೇ ಹಂತದ ಮತದಾನ

ಉತ್ತರ ಮತ್ತು ಮಧ್ಯ ಗುಜರಾತ್‌ನ 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಾಗೂ ಅಂತಿಮ ಹಂತದಲ್ಲಿ ಮತದಾನ ನಡೆಯುತ್ತಿದೆ.

ಎರಡನೇ ಹಂತದ ಚುನಾವಣೆಯಲ್ಲಿ 61 ಪಕ್ಷಗಳ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರ ಭವಿಷ್ಯವನ್ನು 2.51 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ 89 ಸ್ಥಾನಗಳಿಗೆ ಮೊದಲ ಹಂತದ ಮತದಾನವು ಡಿಸೆಂಬರ್ 1 ರಂದು ಕೊನೆಗೊಂಡಿದೆ. ಒಟ್ಟಾರೆ 63.31 ರಷ್ಟು ಮತದಾನವಾಗಿದೆ.

ಡಿಸೆಂಬರ್ 8 ರಂದು ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಒಟ್ಟಿಗೆ ಪ್ರಕಟವಾಗಲಿದೆ.

 ಗುಜರಾತ್‌ ಚುನಾವಣೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ

ಗುಜರಾತ್‌ ಚುನಾವಣೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ

ಗುಜರಾತ್‌ನಲ್ಲಿ ಈ ಭಾರಿ ಮೂರು ಪಕ್ಷಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಎಪಿ ಎಲ್ಲಾ 93 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ 90 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇತರ ಮೂರು ಕ್ಷೇತ್ರಗಳಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಎರಡನೇ ಹಾಗೂ ಅಂತಿಮ ಹಂತದ ಚುನಾವಣೆಯಲ್ಲಿ ಒಟ್ಟು 285 ಸ್ವತಂತ್ರ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಪೈಕಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಹಾರ್ದಿಕ್‌ ಪಟೇಲ್‌ ಹಾಗೂ ಅಲ್ಪೇಶ್ ಠಾಕೋರ್ ಕಣದಲ್ಲಿದ್ದಾರೆ. ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ದೇಶದಾದ್ಯಂತ ತೀವ್ರ ಕುತೂಹಲಕ್ಕೆ ಹುಟ್ಟಿಸಿದೆ.

English summary
Prime Minister Narendra Modi today cast his vote in the second phase of the Gujarat Assembly elections in Ahmedabad today. The PM was seen walking to the polling booth at Nishan Public School to a cheering crowd. He greeted the people on the way and stood in queue awaiting his turn to vote,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X