ರೈತರ ಕಲ್ಯಾಣಕ್ಕಾಗಿ ಅರ್ಪಿಸಿಕೊಂಡವರು: ಜನ್ಮದಿನದಂದು ಯಡಿಯೂರಪ್ಪಗೆ ಮೋದಿ ಶುಭಾಶಯ

ನವದೆಹಲಿ, ಫೆಬ್ರವರಿ 27: ಇಂದು 79ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಕ್ಷದ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು ಎಂದು ಉಲ್ಲೇಖಿಸಿರುವ ಮೋದಿ, ಯಡಿಯೂರಪ್ಪ ಅವರು ರೈತರು ಹಾಗೂ ಬಡಜನರ ಏಳಿಗೆಗಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

'ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಯಡಿಯೂರಪ್ಪ ಅವರು ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಅವರು ರೈತರ ಕಲ್ಯಾಣ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

'ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅವರ ಜನ್ಮದಿನದಂದು ಶುಭಾಶಯ ತಿಳಿಸುತ್ತೇನೆ. ಅವರು ಕರ್ನಾಟಕದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದಾರೆ. ಬಡವರನ್ನು ಮೇಲೆತ್ತುವ ಹಾಗೂ ರೈತರ ಸಬಲೀಕರಣದಲ್ಲಿ ಅವರು ಅವಿರತ ಕೆಲಸ ಮಾಡುತ್ತಿದ್ದಾರೆ. ಅವರ ಸುದೀರ್ಘ ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

PM Narendra Modi Wishes CM BS Yediyurappa On His 78th Birthday

ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರು ಕನ್ನಡದಲ್ಲಿ ಶುಭ ಹಾರೈಸಿದ್ದಾರೆ.

ಹಿರಿಯ ಮುಖಂಡರು, ರೈತ ನಾಯಕ, ಧೀಮಂತ ರಾಜಕಾರಣಿ, ರಾಜ್ಯದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿರುವ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ "78 ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ನಮ್ಮೆಲ್ಲರ ಪ್ರಾರ್ಥನೆ ಎಂದು ಜಿಟಿ ದೇವೇಗೌಡ ಶುಭ ಹಾರೈಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+