• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗುರು ಪೂರ್ಣಿಮೆ 2021: ಶುಭಾಶಯ ಕೋರಿದ ಪ್ರಧಾನಿ ಮೋದಿ

|
Google Oneindia Kannada News

ನವದೆಹಲಿ, ಜುಲೈ 24: ದೇಶಾದ್ಯಂತ ಗುರು ಪೂರ್ಣಿಮಾ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.

'ಗುರು' ಎಂಬ ಪದವು ಸಂಸ್ಕೃತ ಭಾಷೆಯಿಂದ ಬಂದಿದೆ. 'ಗು' ಎಂದರೆ ಕತ್ತಲೆ ಮತ್ತು 'ರು' ಎಂದರೆ ದೂರ ಮಾಡು ಎಂದರ್ಥ. ಅಂದರೆ ಕತ್ತಲೆಯನ್ನು ತೊರೆದು ಜೀವನದುದ್ದಕ್ಕೂ ಸಂತೋಷವೇ ಬೆಳಗಲಿ ಎಂದರ್ಥ. ಸಾಂಪ್ರದಾಯಿಕವಾಗಿ ಈ ದಿನವನ್ನು ಭಾರತ, ನೇಪಾಳ ಮತ್ತು ಭೂತಾನ್‌ನಲ್ಲಿ ಹಿಂದೂಗಳು, ಬೌದ್ಧರು ಮತ್ತು ಜೈನರು ಆಚರಿಸುತ್ತಾರೆ.

ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಜೀವನದ ಪ್ರತಿ ಹಂತದಲ್ಲೂ ತಿದ್ದಿ ನಡೆಸಿದ ಗುರು ಹಿರಿಯರಿಗಾಗಿ ಈ ದಿನನ್ನು ಸಮರ್ಪಿಸಲಾಗುತ್ತದೆ. ಜತೆಗೆ ಈ ದಿನದಂದು ಬೆಳಗ್ಗೆ ಬೇಗ ಎದ್ದು, ಸ್ನಾನ ಮಾಡಿ ಶುಭ್ರ ವಸ್ತ್ರ ತೊಟ್ಟು ಗುರುಗಳ ಆಶಿರ್ವಾದ ಪಡೆದುಕೊಳ್ಳುವ ಪದ್ಧತಿ ಮೊದಲಿನಿಂದಲೂ ಬಂದಿದೆ.

ಅನೇಕರು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಉಪವಾಸ ಮಾಡುತ್ತಾರೆ. ಜತೆಗೆ ಹಣ್ಣುಗಳನ್ನು, ಸಿಹಿ ತಿಂಡಿಗಳನ್ನು ಶಿಕ್ಷಕರಿಗೆ ನೀಡುವ ಮೂಲಕ ಈ ದಿನವನ್ನು ಆಚರಿಸುತ್ತಾರೆ. ಗುರು ಪೂರ್ಣಿಮಾ ವಿಶೇಷ ದಿನದಂದು ನಮ್ಮ ಏಳಿಗೆಯನ್ನು ಬಯಸಿದ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸೋಣ.

ಗುರು ಪೂರ್ಣಿಮವನ್ನು ಬುದ್ಧ ಪೂರ್ಣಿಮಾ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ. ಪ್ರತಿ ವರ್ಷ ಹಿಂದೂ ಕ್ಯಾಲೆಂಡರ್ ಪ್ರಕಾರ ಆಷಾಢ ತಿಂಗಳಲ್ಲಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನದಂದು ಬರುತ್ತದೆ.

ಗುರುವು ನಮ್ಮೊಳಗೆ ಜ್ಞಾನವನ್ನು ಹುಟ್ಟಿಸುವ ಬ್ರಹ್ಮನಂತೆ, ನಮ್ಮ ಮನಸ್ಸಿನ ಜ್ಞಾನವನ್ನು ಸರಿಯಾದ ದಾರಿಗೆ ಕೊಂಡೊಯ್ಯುವ ವಿಷ್ಣುವಿನಂತೆ, ನಮ್ಮ ಜ್ಞಾನಕ್ಕೆ ಅಂಟಿಕೊಂಡಿರುವ ತಪ್ಪು ಪರಿಕಲ್ಪನೆಗಳನ್ನು ನಾಶಪಡಿಸುವ ಶಿವನಂತೆ. ಹಾಗಾಗಿ ಗುರುವು ನಮಗೆ ಪರಮ ದೈವದಂತೆ ನಾವು ನಮ್ಮ ಗುರುವನ್ನು ಪೂಜಿಸಬೇಕು ಮತ್ತು ಅವರಿಗೆ ಗೌರವ ನೀಡಬೇಕು ಎಂದರ್ಥ.

English summary
Prime Minister Narendra Modi extended greetings on the occasion of Guru Purnima on Saturday. He will be addressing the nation on Ashadha Purnima-Dhamma Chakra Day, also known as Guru Purnima, today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X