ಜೋ ಬೈಡನ್, ಕಮಲಾ ಹ್ಯಾರಿಸ್ಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ, ಜನವರಿ 20: ಅಮೆರಿಕದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ ಶುಭ ಹಾರೈಸಿರುವ ಮೋದಿ, ಜಾಗತಿಕ ಶಾಂತಿ ಮತ್ತು ಭದ್ರತೆಗಾಗಿ ಅಮೆರಿಕದೊಂದಿಗೆ ಭಾರತ ಕೆಲಸ ಮಾಡಲಿದ್ದು, ಉಭಯ ದೇಶಗಳ ಸಹಭಾಗಿತ್ವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಬಯಸಿರುವುದಾಗಿ ತಿಳಿಸಿದ್ದಾರೆ.
'ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್ ಅವರಿಗೆ ನನ್ನ ಅಭಿನಂದನೆಗಳು. ಭಾರತ-ಅಮೆರಿಕ ಕಾರ್ಯತಂತ್ರ ಸಹಭಾಗಿತ್ವವನ್ನು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ಕಾಯುತ್ತಿದ್ದೇನೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
'ಜಾಗತಿಕ ಶಾಂತಿ ಮತ್ತು ಭದ್ರತೆಯ ಸುಧಾರಣೆ ಹಾಗೂ ಸಾಮಾನ್ಯ ಸವಾಲುಗಳನ್ನು ಎದುರಿಸುವ ವಿಚಾರದಲ್ಲಿ ನಾವು ಒಗ್ಗಟ್ಟಿನಿಂದ ಇದ್ದು, ಅಮೆರಿಕವನ್ನು ಮುನ್ನಡೆಸುವಲ್ಲಿ ಯಶಸ್ವಿ ಅವಧಿ ನಡೆಸುವಂತೆ ಅವರಿಗೆ ಶುಭ ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.

'ಭಾರತ ಅಮೆರಿಕ ಪಾಲುದಾರಿಕೆಯು ಹಂಚಿಕೆಯಾದ ಮೌಲ್ಯಗಳ ಆಧಾರದಲ್ಲಿದೆ. ನಾವು ಸಮೃದ್ಧ ಮತ್ತು ಬಹುಮುಖಿ ದ್ವಿಪಕ್ಷೀಯ ಕಾರ್ಯಸೂಚಿ, ಬೆಳೆಯುತ್ತಿರುವ ಆರ್ಥಿಕತೆ ಸಂಬಂಧ ಮತ್ತು ಜನರಿಂದ ಜನರ ನಂಟನ್ನು ಹೊಂದಿದ್ದೇವೆ. ಭಾರತ-ಅಮೆರಿಕ ಸಹಭಾಗಿತ್ವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಅಧ್ಯಕ್ಷ ಜೋ ಬೈಡನ್ ಅವರ ಜತೆ ಕೆಲಸ ಮಾಡಲು ಬದ್ಧನಾಗಿದ್ದೇನೆ' ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications