ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮುಳುಗುತ್ತಿರುವ' ಉತ್ತರಾಖಂಡದ ಜೋಶಿಮಠ: ಉನ್ನತಮಟ್ಟದ ಸಭೆ ಕರೆದ ಪ್ರಧಾನಮಂತ್ರಿ ಕಾರ್ಯಾಲಯ

|
Google Oneindia Kannada News

ನವದೆಹಲಿ, ಜ. 08: ಉತ್ತರಾಖಂಡದ ಜೋಶಿಮಠದ ನೂರಾರು ಕಟ್ಟಡಗಳು ಬಿರುಕು ಬಿಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಮುನ್ನೆಚ್ಚರಿಕೆಯಾಗಿ ಅಲ್ಲಿನ ಜನರನ್ನು ಅವರ ಮನೆಗಳಿಂದ ಸ್ಥಳಾಂತರಿಸಲು ಅಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ಉನ್ನತ ಮಟ್ಟದ ಸಭೆ ಕರೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ ಸಂಪುಟ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮುಳುಗುತ್ತಿರುವ Joshimath: ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಧಾಮಿಮುಳುಗುತ್ತಿರುವ Joshimath: ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಧಾಮಿ

ಉತ್ತರಾಖಂಡದ ಹಿರಿಯ ಅಧಿಕಾರಿಗಳಲ್ಲದೆ ಜೋಶಿಮಠದ ಜಿಲ್ಲಾ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

PMs Office called high-level meeting on Uttarakhands Joshimath issue

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಪರಿಸ್ಥಿತಿಯ ತೀವ್ರತೆಯನ್ನು ನೊಡಿದ ಅವರು ಸುಮಾರು 600 ಸಂತ್ರಸ್ತ ಕುಟುಂಬಗಳನ್ನು ತಕ್ಷಣವೇ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ್ದರು. ಪಟ್ಟಣವನ್ನು ಉಳಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುವ ಭರವಸೆ ನೀಡಿದ್ದರು.

ಜೋಶಿಮಠ ಮತ್ತು ಸುತ್ತಮುತ್ತ ಜಲವಿದ್ಯುತ್ ಯೋಜನೆಗಳು ಸೇರಿದಂತೆ ದೊಡ್ಡ ಪ್ರಮಾಣದ ನಿರ್ಮಾಣ ಕಾರ್ಯಗಳು ಭೂಮಿಯ ಕುಸಿತಕ್ಕೆ ಕಾರಣವಾಗಬಹುದು ಎಂದು ತಜ್ಞರು ವರ್ಷಗಳಿಂದ ಎಚ್ಚರಿಕೆ ನೀಡುತ್ತಿದ್ದಾರೆ.

ಸುಮಾರು 17,000 ಜನರಿರುವ ಪಟ್ಟಣ, ಜೋಶಿಮಠವು ಬದರಿನಾಥ್ ಮತ್ತು ಹೇಮಕುಂಡ್ ಸಾಹಿಬ್‌ನಂತಹ ಹಿಂದೂ ಮತ್ತು ಸಿಖ್ ಪುಣ್ಯಕ್ಷೇತ್ರಗಳಿಗೆ ತೀರ್ಥಯಾತ್ರೆಗಳಿಗೆ ಹೆಬ್ಬಾಗಿಲಾಗಿದೆ. ಹಿಮಾಲಯದ ಭಾಗಗಳಿಗೆ ಅಥವಾ ಔಲಿಯಲ್ಲಿ ಚಾರಣಕ್ಕೆ ಹೋಗಲು ಬಯಸುವ ಪ್ರವಾಸಿಗರಿಗೆ ಜೋಶಿಮಠ ನೆಚ್ಚಿನ ತಾಣವಾಗಿದೆ.

PMs Office called high-level meeting on Uttarakhands Joshimath issue

ಶನಿವಾರ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜೋಶಿಮಠದ ಭೂಕುಸಿತದಿಂದ ಅಪಾಯದ ವಲಯದಲ್ಲಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆ ನಗರಸಭೆಯ ಸರ್ವೆಯಲ್ಲಿ 561 ಮನೆಗಳನ್ನು ಗುರುತಿಸಲಾಗಿದೆ. ಇಲ್ಲಿಯವರೆಗೆ 38 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಈ ಎಲ್ಲ ಕುಟುಂಬಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡುವಂತೆ, ಜನರ ಪುನರ್ವಸತಿ ಮತ್ತು ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

English summary
The Prime Minister's office has called a high-level meeting after Sinking Uttarakhand Town Joshimath. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X