ಯುಪಿ ಶಾಲೆಯ ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ವಿಡಿಯೊ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಮೇಲೆ ಕೇಸ್‌

ನವದೆಹಲಿ, ಆಗಸ್ಟ್‌ 28: ಯುಪಿ ಶಾಲೆಯ ಮುಸ್ಲಿಂ ಬಾಲಕನಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿರುವ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಪಾಳಮೋಕ್ಷ ಮಾಡಿಸಿಕೊಂಡ ಮುಸ್ಲಿಂ ಬಾಲಕನ ಗುರುತನ್ನು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ ಆರೋಪ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಮೇಲೆ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜುಬೇರ್‌ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶಿಕ್ಷಕಿಯ ಆದೇಶದ ಮೇರೆಗೆ ವಿದ್ಯಾರ್ಥಿಗಳು ಮುಸ್ಲಿಂ ಬಾಲಕನ ಕೆನ್ನೆಗೆ ಹೊಡೆಯುತ್ತಿರುವುದು ಈ ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಚಾರವಾಗಿ ಶುಕ್ರವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಪ್ರತಿಕ್ರಿಯಿಸಿತ್ತು. ಮಗುವಿನ ಗುರುತನ್ನು ಬಹಿರಂಗಪಡಿಸುವುದರ ವಿರುದ್ಧ ಎಚ್ಚರಿಕೆ ನೀಡಿತ್ತು.

police-case-against-fact-checker-mohd-zubair

2 ನೇ ತರಗತಿಯ ವಿದ್ಯಾರ್ಥಿಯ ಮೇಲಿನ ಹಲ್ಲೆಯ ವಿಡಿಯೊವನ್ನು ಹಂಚಿಕೊಳ್ಳುವ ಮೂಲಕ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿತ್ತು.

ಈ ಕುರಿತು ಮಾತನಾಡಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ, 'ಮಕ್ಕಳ ಗುರುತನ್ನು ಬಹಿರಂಗಪಡಿಸುವ ಮೂಲಕ ಅಪರಾಧದ ಭಾಗವಾಗಬೇಡಿ' ಎಂದು ಜನರನ್ನು ಒತ್ತಾಯಿಸಿದ್ದರು.

ಬಾಲಕನಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ದೇಶದಾದ್ಯಂತ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ಶಿಕ್ಷಕಿ ತ್ರಿಪ್ತ ತ್ಯಾಗಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಸಂತ್ರಸ್ತ ವಿದ್ಯಾರ್ಥಿಯ ಸಹಪಾಠಿಗಳಿಗೆ ಗಟ್ಟಿಯಾಗಿ ಹೊಡೆಯುವಂತೆ ಶಿಕ್ಷಕಿ ಪ್ರೇರೇಪಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ಕಪಾಳಕ್ಕೆ ಹೊಡೆಸಿಕೊಳ್ಳುತ್ತ ನಿಂತಿರುವ ಮುಸ್ಲಿಂ ವಿದ್ಯಾರ್ಥಿ ಅಳುತ್ತಿರುವುದು ವಿಡಿಯೊದಲ್ಲಿ ನೋಡಬಹುದಾಗಿದೆ.

ಕಳೆದ ವಾರ ಬಹಿರಂಗಗೊಂಡಿರುವ ವಿಡಿಯೊ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕರು ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಮಗನನ್ನು ಅವಮಾನಿಸಲಾಗಿದೆ. ಗಂಟೆಗಳ ಕಾಲ ನಿಲ್ಲುವಂತೆ ಮಾಡಲಾಗಿದೆ ಎಂದು ಆತನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

'ಶಿಕ್ಷಕರು ನನ್ನ ಮಗುವಿಗೆ ಮತ್ತೆ ಮತ್ತೆ ಹೊಡೆಯುವಂತೆ ಮಾಡಿದ್ದಾರೆ. ನನ್ನ ಮಗನಿಗೆ ಒಂದು ಅಥವಾ ಎರಡು ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಅವನು ಈಗ ಹೆದರುತ್ತಿದ್ದಾನೆ' ಎಂದು ಆತನ ತಂದೆ ಹೇಳಿದ್ದಾರೆ.

ಯುಪಿಯ ಮುಜಾಫರ್‌ನಗರದಲ್ಲಿರುವ ನೇಹಾ ಪಬ್ಲಿಕ್ ಸ್ಕೂಲ್‌ನ ಮುಖ್ಯೋಪಾಧ್ಯಾಯೆ ಆಗಿರುವ ತ್ಯಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದ ಕುರಿತು ಮಾತನಾಡಿರುವ ಅವರು, ತಮ್ಮ ಕ್ರೂರ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿದ್ದಾಗ ಮಕ್ಕಳನ್ನು ನಿಯಂತ್ರಿಸುವುದು ಅಗತ್ಯವೆಂದು ಪ್ರತಿಪಾದಿಸಿದ್ದಾರೆ.

ಇದೊಂದು ಸಣ್ಣ ಘಟನೆ. ಅನಗತ್ಯವಾಗಿ ಇದನ್ನು ದೊಡ್ಡ ಪ್ರಕರಣವಾಗಿ ಪರಿವರ್ತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಚಿಕ್ಕ ಹುಡುಗ ತುಂಬಾ ಆಘಾತಕ್ಕೊಳಗಾಗಿದ್ದಾನೆ. ಆತ ಎರಡು ದಿನಗಳವರೆಗೆ ಏನನ್ನೂ ತಿಂದಿಲ್ಲ. ಮನೆಯಲ್ಲಿ ಸುಮ್ಮನೇ ಅಲೆದಾಡುತ್ತಿದ್ದಾನೆ ಎಂದು ಆತನ ತಂದೆ ತಿಳಿಸಿದ್ದಾರೆ.

ಬಾಲಕನನ್ನು ವೈದ್ಯಕೀಯ ತಪಾಸಣೆಗಾಗಿ ಮೀರತ್‌ಗೆ ಕರೆದೊಯ್ಯಲಾಗಿದೆ. ಈಗ ಕೊಂಚ ಆರೋಗ್ಯವಾಗಿದ್ದಾನೆ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+